ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕೋಡಿ,ತಾಲೂಕು ಆಡಳಿತ ಗೋಕಾಕ , ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ದಿನಾಂಕ 29 ರಂದು ಮುಂಜಾನೆ 10 ಘಂಟೆಗೆ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಮೇಶ ಜಾರಕಿಹೊಳಿ ವಹಿಸುವರು. ಸಂಸದೆ ಶ್ರೀಮತಿ ಮಂಗಲಾ ಅಂಗಡಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅತಿಥಿಗಳಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಪ ಸದಸ್ಯರುಗಳಾದ ಲಖನ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ, ಹನುಮಂತ ನಿರಾಣಿ, ಅರುಣ ಶಹಾಪೂರ, ತಳವಾರ ಸಾಬಣ್ಣ, ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕಾರಣ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಈ ಉಚಿತ ಆರೋಗ್ಯ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಎಂ.ಎಸ್.ಕೊಪ್ಪದ, ಮತ್ತು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.