Breaking News

ಸಾಮೂಹಿಕ ವಿವಾಹಕ್ಕೆ ಪ್ರೋತ್ಸಾಹ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಕರೆ


ಸವದತ್ತಿ: ದುಂದು ವೆಚ್ಚದ ಮದುವೆಗಳಿಂದ ಬಡವರಿಗಾಗುವ ಆರ್ಥಿಕ ಭಾರ ತಪ್ಪಿಸಲು ಅತ್ಯಂತ ಸರಳ ಉಚಿತ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ತಾಲೂಕಿನ ಮನಿಕಟ್ಟಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕ ಮಂಡಳ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ದಿನದಲ್ಲಿ ಎಲ್ಲ ವೆಚ್ಚವೂ ಆಕಾಶದತ್ತ ಮುಖಮಾಡಿವೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಇಂಥ ಸಂದರ್ಭಗಳಲ್ಲಿ ಕುಟುಂಬದ ಮೇಲಿನ ಆರ್ಥಿಕ ಹೊರೆ ತಪ್ಪಿಸಲು ಸಾಮೂಹಿಕ ವಿವಾಹಕ್ಕೆ ಮೊರೆ ಹೋಗಬೇಕು. ಸಂಘಟನೆಗಳು ಸಹ ಇದಕ್ಕಾಗಿ ಪ್ರತಿ ವರ್ಷವೂ ವಿಶೇಷ ಯೋಜನೆ ರೂಪಿಸಬೇಕು ಎಂದರು.

ಸಮಾಜದಲ್ಲಿ ದುಂದು ವೆಚ್ಚ ಮಾಡದೇ ಸರಳ ರೀತಿ ಇಂತಹ ಮದುವೆ ಸಮಾರಂಭಗಳು ನಡೆಯಬೇಕು ಎಂದ ಅವರು, ಸಾಮೂಹಿಕ ವಿವಾಹಕ್ಕೆ ಸರ್ಕಾರದ ಸಹಾಯ ಕೂಡ ಸಿಗುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ವಿಶ್ವಾಸ ವ್ಯದ್ಯ ಸೇರಿದಂತೆ ವಾಲ್ಮೀಕಿ ಯುವಕ ಮಂಡಳಸದಸ್ಯರು ಇದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ