ಯಮಕನಮರಡಿ: ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸಿದ್ದಕ್ಕಾಗಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬಂದಿ, ಬಸಾಪುರ ಗ್ರಾಮಸ್ಥರು ಸತ್ಕರಿಸಿದರು.

ಯಮಕನಮರಡಿ ಮತಕ್ಷೇತ್ರದ ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಕುರಿತು ಬಸಾಪುರ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಕೂಡ ಸಲ್ಲಿಸಿದ್ದರು. ಕಾರಣ ಬೇಡಿಕೆ ಈಡೇರಿಕೆಯಾದ ಹಿನ್ನೆಯಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬಂದಿ, ಬಸಾಪುರ ಗ್ರಾಮಸ್ಥರು ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಡಾಕ್ಟರ್ ಮುಸ್ತಪ್ಪಾ ಬಿಳಿಕುದರಿ, ಆಶಾ ಕಾರ್ಯಕರ್ತೆಯರು, ಬಸಾಪುರ ಗ್ರಾಮದ ಮುಖಂಡರು ಸೇರಿದಂತೆ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA