ಗೋಕಾಕ : ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿರುವುದಕ್ಕೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಗೋಕಾಕ ಶೈಕ್ಷಣಿಕ ವಲಯ ಈ ಬಾರಿಯೂ ದ್ವಿತೀಯ ಸ್ಥಾನ ಗಳಿಸಿದ್ದು, ಶೇ ಶೇಕಡಾ 94.58 ರಷ್ಟು ಫಲಿತಾಂಶ ಬಂದಿದೆ. ಗೋಕಾಕ ವಲಯ ದ್ವಿತೀಯ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ ಅಭಿನಂದನೆ ಸಲ್ಲಿಸಿರುವ ಅವರು, ಉತ್ತಮ ಫಲಿತಾಂಶಕ್ಕೆ ಶ್ರಮಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಮತ್ತು ಶಿಕ್ಷಕ ಬಳಗ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಸದಾ ಪ್ರೋತ್ಸಾಹಿಸುತ್ತಿರುವ ಪಾಲಕ-ಪೋಷಕರಿಗೆ ಶಾಸಕ ಜಾರಕಿಹೊಳಿ , ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಅಭಿನಂದನೆ ಸಲ್ಲಿಸಿದ್ದಾರೆ.