ಬೆಳಗಾವಿ: ದೇವಸ್ಥಾನದ ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಯನ್ನೇ ಕಳ್ಳತನ ಮಾಡಿರುವ ಘಟನೆ ಅಥಣಿ ತಾಲೂಕಿನ ಕೋಕಟನೂರು ಗ್ರಾಮದಲ್ಲಿ ನಡೆದಿದೆ.
ಐತಿಹಾಸಿಕ ಪರಂಪರೆಯುಳ್ಳ ಕೋಕಟನೂರು ಗ್ರಾಮದ ಬೀರೇಶ್ವರ ದೇವರ ಮೂರ್ತಿಯನ್ನು ಖದೀಮರು ಕದ್ದೊಯ್ದಿದ್ದಾರೆ.ವಾಮಾಚಾರ ಅಥವಾ ನಿಧಿಗಳ್ಳತನಕ್ಕೆ ದೇವರ ಮೂರ್ತಿ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ತಡರಾತ್ರಿ ಖಳ್ಳತನ ನಡೆದಿದ್ದು, ಇಂದು ಮುಂಜಾನೆ ಅರ್ಚಕರು ಪೂಜೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.