ಬೆಳಗಾವಿ: ವಿಧಾನ ಪರಿಷತ್ನ ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ, ಹಿರಿಯರಾದ ಪ್ರಕಾಶ್ ಹುಕ್ಕೇರಿ ಅವರ ಗೆಲುವು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕಳೆದ ಎರಡು ಭಾರಿ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಗೆಲುವು ಸಾಧಿಸಿದ್ದು, ಮೂರನೇ ಭಾರೀ ಅವರ ಗೆಲುವಿಗೆ ಪ್ರಕಾಶ್ ಹುಕ್ಕೇರಿ ಅವರು ಬ್ರೇಕ್ ಹಾಕಿದ್ದಾರೆ. ಬೆಳಗಾವಿ, ಬಾಗಲಕೋಟ, ವಿಜಯಪುರ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ರಾಜ್ಯ ನಾಯಕರು, ಕಾರ್ಯಕರ್ತರು ಶ್ರಮಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರಿಗೆ ಗೆಲುವು ಲಭಿಸಿದೆ.
ಪ್ರಕಾಶ್ ಹುಕ್ಕೇರಿ ಬಗ್ಗೆ ಬಿಜೆಪಿಯವರು ಪದೇ ಪದೇ ಆರೋಪ ಮಾಡುತ್ತಿದ್ದರು. ಆದರೆ ಈಗ ಚುನಾವಣೆಯಲ್ಲಿ ಪ್ರಕಾಶ್ ಹುಕ್ಕೇರಿ ಅವರ ಪರ ಶಿಕ್ಷಕರು ಹೆಚ್ಚಿನ ಮತ ನೀಡಿ ಉತ್ತಮ ಕೆಲಸಗಾರರು ಎಂದು ಬಿರುದು ನೀಡಿದ್ದಾರೆ. ಈ ಫಲಿತಾಂಶ ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ದಿಕ್ಸೂಚಿ ಆಗಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. ಪ್ರಕಾಶ್ ಹುಕ್ಕೇರಿ ಅವರಿಗೆ ಮತ್ತು ಕಾರ್ಯಕರ್ತರಿಗೂ ಅಭಿನಂದನೆ ತಿಳಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA