ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ತಯಾರಿ ಮಾಡುತ್ತಿರುವುದು ನಿಜ. ಆದರೆ ನಾನೇ ಸ್ಪರ್ಧೆ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಸ್ಪಷ್ಟಿಕರಣ ನೀಡಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಶನಿವಾರ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ನಾನೇ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಸುದ್ದಿ ಪ್ರಕಟವಾಗಿದ್ದು, ಇದು ಸತ್ಯೆಕ್ಕೆ ದೂರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA