ಗೋಕಾಕ: ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕ್ರೂಸರ್ ವಾಹನ ಬಳ್ಳಾರಿ ನಾಲೆಗೆ ಉರುಳಿ ಬಿದ್ದು 7 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿ, ಆತ್ಮಕ್ಕೆ ಶಾಂತಿ ಸಿಗಲೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರು ಶೀಘ್ರ ಚೆತರಿಸಿಕೊಳ್ಳಲಿ. ಮೃತರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ತಿಳಿಸಿದ್ದಾರೆ.
ಮೃತ ಕುಟುಂಬಸ್ಥರಿಗೆ ಎಲ್ಲಾ ರೀತಿಯ ನೆರವು ನೀಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಿದ್ದು, ಸರ್ಕಾರ ಮೃತ ಕಾರ್ಮಿಕರ ಕುಟುಂಬಸ್ಥರಿಗೆ ಹೆಚ್ಚಿನ ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA