Breaking News

*ಹಡಪದ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*


*ಮೂಡಲಗಿ* ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.

ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಹಡಪದ ಅಪ್ಪಣ್ಣನವರು ತಮ್ಮದೇಯಾದ ಶ್ರೇಷ್ಠ ಆಚಾರ-ವಿಚಾರಗಳಿಂದ ಜನಸಾಮಾನ್ಯರಿಗೂ ಜೀವನದ ಅರ್ಥ ತಿಳಿಯುವಂತೆ ಮಾಡಿದ್ದಾರೆ. ಈ ಸಮಾಜಕ್ಕೆ ತಮ್ಮದೇಯಾದ ವಿಶಿಷ್ಠ ಕೊಡುಗೆಯನ್ನೂ ಸಹ ನೀಡಿದ್ದಾರೆ. ಸಮಾಜದಲ್ಲಿನ ಅಸಮಾನತೆ, ಅಸ್ಪ್ರಶ್ಯತೆ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಅಪ್ಪಣ್ಣನವರು ಶ್ರಮಿಸಿದ್ದರು ಎಂದು ತಿಳಿಸಿದರು.

ಹಡಪದ ಸಮಾಜದವರು ಪ್ರಾಮಾಣಿಕವಾಗಿ ತಮ್ಮ ವೃತ್ತಿಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಮಾಜವು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದೆ ಬರಬೇಕಿದೆ. ವೃತ್ತಿಯ ಜೊತೆಗೆ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡುವ ಮೂಲಕ ಸಮಾಜದ ಒಳತಿಗಾಗಿ ಶ್ರಮಿಸಬೇಕು. ಆರ್ಥಿಕವಾಗಿ ಹಿಂದುಳಿದಿರುವ ಹಡಪದ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣನವರ ಸಮಾಜದ ಪರವಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಲಾಯಿತು.

ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ತಹಶೀಲ್ದಾರ ಡಿ.ಜಿ. ಮಹಾತ, ಮುಖಂಡರಾದ ರವೀಂದ್ರ ಸೋನವಾಲಕರ, ರಾಮಣ್ಣಾ ಹಂದಿಗುಂದ, ಸಂತೋಷ ಸೋನವಾಲಕರ, ಹುಸೇನಸಾಬ ಶೇಖ, ಅನ್ವರ ನದಾಫ, ಶಂಕರ ಉದಗಟ್ಟಿ, ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘದ ಅಧ್ಯಕ್ಷ ಶಿವಬೋಧ ಉದಗಟ್ಟಿ, ನಗರ ಘಟಕದ ಅಧ್ಯಕ್ಷ ಶಿವಬಸು ಸುಣಧೋಳಿ, ಸಮಾಜದ ಮುಖಂಡರಾದ ನಾಗಪ್ಪ ನಾವಿ, ಶ್ರೀಕಾಂತ ಚಿಪ್ಪಲಕಟ್ಟಿ, ಸಾತಗೌಡ ನಾವಿ, ಆನಂದ ನಾವಿ, ಮಹಾಂತೇಶ ನಾವಿ, ಅಲ್ಲಪ್ಪ ನಾವಿ, ಬಸಪ್ಪ ನಾವಿ, ನಿಂಗಪ್ಪ ನಾವಿ, ಮುತ್ತು ನಾವಿ, ಶ್ರೀಕಾಂತ ನಾವಿ, ಲಕ್ಷ್ಮಣ ಉದಗಟ್ಟಿ, ಸುಭಾಸ ರೈನಾಪೂರ, ಶಿದ್ಲಿಂಗಪ್ಪ ಯರಗಟ್ಟಿ, ಉಮೇಶ ಹಡಪದ, ಚನ್ನಪ್ಪ ನಾವಿ, ಮಹಾಂತೇಶ ಹಡಪದ, ಸಿದ್ದು ಉದಗಟ್ಟಿ, ಶಿವಬಸು ಕೋರೆನ್ನವರ ಹಾಗೂ ಮೂಡಲಗಿ ತಾಲೂಕಿನ ವಿವಿಧ ಗ್ರಾಮಗಳ ಸಮಾಜ ಬಾಂಧವರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ