5 ಕೋಟಿ ವೆಚ್ಚದ ಸಿಸಿ ರಸ್ತೆಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಹೆಸರು ನಾಮಕರಣ, ಮಕ್ಕಳೇ ದೇಶದ ಆಸ್ತಿ
ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಶಾಸಕರ ವಿಶೇಷ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದ ಇಸ್ಲಾಂಪುರ , ಚಿಲಬಾಂವಿ ಗ್ರಾಮದ ವಿವಿಧ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.
ಇಸ್ಲಾಂಪುರ , ಚಿಲಬಾಂವಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು, ಈ ವೇಳೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಗ್ರಾಮಸ್ಥರು ಆದ್ದೂರಿಯಾಗಿ ಸ್ವಾಗತ ಮಾಡಿಕೊಂಡು, ಗೌರವ ಸಲ್ಲಿಸಿದರು.
ಈ ವೇಳೆಯಲ್ಲಿ ಚಿಲಬಾಂವಿ ಗ್ರಾಮದ 40 ಲಕ್ಷ ರೂ. ಸಿ ಸಿ ರಸ್ತೆ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಇಸ್ಲಾಂಪುರ ಗ್ರಾಮದಿಂದ ಹೊಸ ವಂಟಮೂರಿವರೆಗೆ 5 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಸಿಸಿ ರಸ್ತೆಗೆ ಗ್ರಾ ಮಸ್ಥರ ಮನವಿ ಮೇರೆಗೆ ಶಾಸಕ ಸತೀಶ್ ಜಾರಕಿಹೊಳಿ ರಸ್ತೆ ಮಾರ್ಗ ಎಂದು ನಾಮಕರಣ ಮಾಡಿ, ಲೋಕಾರ್ಪಣೆಗೊಳಿಸಿದರು.
5 ಲಕ್ಷ ವೆಚ್ಚದಲ್ಲಿ ಕಾಳಿಕಾ ದೇವಸ್ಥಾನ ಹೊಸ ಗುಂಡಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೇರವೆರಿಸಿದರು. ಮತ್ತು ಇಸ್ಲಾಂಪುರ ಗ್ರಾಮದ ಶಾಲೆಯ ಮಕ್ಕಳಿಗೆ ಸೌಂಡ್ ಸಿಸ್ಟಮ್ ಮತ್ತು ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ರಾಹುಲ್
ಈ ವೇಳೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಾತನಾಡಿ, ಯಮಕನಮರಡಿ ಮತಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಮುಂದಿನ ದಿನಗಳಲ್ಲಿ ಇನ್ನೂ ಹತ್ತಾರು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಮಕ್ಕಳು ದೇಶದ ಆಸ್ತಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಕಡೆ ಗಮನ ಹರಿಸಬೇಕು. ತಂದೆ-ತಾಯಿಯರ ಕಸನು ಸಾಕಾರಾಗೊಳಿಸಬೇಕು . ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಇಸ್ಲಾಂಪೂರ , ಚಿಲಬಾಂವಿ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಇತರರು ಇದ್ದರು.