Breaking News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಹರಿದು ಹಾಕಿದ್ದ ಆರೋಪಿ ಬಂಧನ!


ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ . ಖನಗಾಂವ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣನ ಪ್ಲೆಕ್ಸ್ ಹರಿದು ಹಾಕಿದ ಪ್ರಕರಣಕ್ಕೆ ಸಮಂಧಿಸಿದಂತೆ , ಗೋಕಾಕ ತಾಲೂಕಿನ ದೇವಗೌಡನಟ್ಟಿ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ ( 35 ) ಎಂಬಾತನನ್ನು ಬಂಧಿಸಲಾಗಿದೆ . ನೋಡೋದಾದ್ರೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು . ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು . ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಪ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು . ಈ ಬೋರ್ಡ್‌ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನ ಯಾರೋ ಕಿಡಿಗೇಡಿಗಳು ಹರಿದು ವಿಕೃತಿ ಮೆರೆದಿದ್ದರು . ಇತ್ತ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿ ಟಾಯರ್‌ಗೆ ಬೆಂಕಿ ಹಚ್ಚಿ ರಾಯಣ್ಣ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು . ಬಳಿಕ ಪ್ರಕರಣ ದಾಖಲಿಸಿಕೊಂಡ ಗೋಕಾಕ ಗ್ರಾಮೀಣ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ . ತನಿಖೆ ಮುಂದುವರೆದಿದೆ . ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ