Breaking News

ಸಚಿವ ಉಮೇಶ್ ಕತ್ತಿ ವಿಧಿವಶ: ಬುಧವಾರ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ!


ಬೆಳಗಾವಿ: ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ(61) ವಿಧಿವಶ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಾಗೇವಾಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ‌ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ. ಸಕಲ ಸರ್ಕಾರಿ ಗೌರವಗಳನ್ನ ನೀಡಲು‌ ನಿರ್ಧರಿಸಿದ್ದೇವೆ. ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.

ಅರಣ್ಯ ಸಚಿವ ಉಮೇಶ್ ಕತ್ತಿ ಹೃಯಯಾಘಾತದಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೊನ್ನೆ ಬೆಳಗಾವಿಯಿಂದ ಬೆಂಗಳೂರಿಗೆ ಹೋಗಿದ್ದ ಉಮೇಶ್ ಕತ್ತಿ, ನಿನ್ನೆ(ಸೆಪ್ಟೆಂಬರ್ 07) ರಾತ್ರಿ 10ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿದ್ದಾಗಲೇ ಬಾತ್​ ರೂಮ್​ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ತೀವ್ರ ಹೃದಯಾಘಾತ ಆಗಿದ್ರಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಕುಟುಂಬಸ್ಥರ ಕಣ್ಣೀರು

ಇನ್ನೂ ಉಮೇಶ್ ಕತ್ತಿ ಸಾವಿನ ಸುದ್ದಿ ಕೇಳಿ ಬೆಂಬಲಿಗರು, ಅಭಿಮಾನಿಗಳು ಮತ್ತು ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದತ್ತ ಬೆಂಬಲಿಗರು ಆಗಮಿಸಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಯನ್ನು ನಂಬಲಾಗದೆ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ