ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯು ಶುಕ್ರವಾರ ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಆರಂಭವಾಯಿತು.
ಈ ಪಾದಯಾತ್ರೆಯಲ್ಲಿ ಗೋಕಾಕ ತಾಲೂಕಿನ ಕಾಂಗ್ರೆಸ್ ಮುಖಂಡರು ಹೆಜ್ಜೆ ಹಾಕಿ, ‘ಭಾರತ್ ಜೋಡೊ ಯಾತ್ರೆ ಹೋದಲೆಲ್ಲ ಪ್ರೀತಿಯ ಮಹಾಪೂರವೇ ಹರಿದು ಬರುತ್ತಿದೆ. ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದರಿಂದ ನಮಗೂ ಖುಷಿ ತಂದಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 30ರಂದು ಕರ್ನಾಟಕ ಪ್ರವೇಶಿಸಿರುವ ಯಾತ್ರೆಯು ಅಕ್ಟೋಬರ್ 20ರಂದು ನಿರ್ಗಮಿಸಲಿದೆ. ಈ ಮಧ್ಯೆ ರಾಜ್ಯದಲ್ಲಿ 21 ದಿನಗಳಲ್ಲಿ 511 ಕಿ.ಮೀ.ಯನ್ನು ಯಾತ್ರೆ ಕ್ರಮಿಸಲಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡರ ಲಕ್ಕಾರ, ಲಗಮಣ್ಣ ಕಳಸನ್ನವರ, ಭರಮಣ್ಣ ಉಪ್ಪಾರ, ಪ್ರವೀಣ ಗುಡ್ಡಕಾಯು, ಪ್ರತೀಕ ಜೋಕಿ, ಅಲಿ ಮುಸ್ತಕೀಮ್ ಕಮತನೂರ್ ಸೇರಿದಂತೆ ಸಾವಿರಾರು ಗೋಕಾಕ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.”