ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಇದೀಗ ಬಿಜೆಪಿ ವರಿಷ್ಟ ಮಂಡಳಿ ಸಂಪುಟ ವಿಸ್ತರಣೆಗೆ ಅನುಮತಿ ನೀಡಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ.
ಖಾಲಿ ಇರುವ ಆರು ಸ್ಥಾನ ಭರ್ತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕೇಂದ್ರ ಬಿಜೆಪಿ ವರಿಷ್ಟರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ ಮತ್ತೆ ಸಚಿವರಾಗುವುದು ಬಹುತೇಕ ಖಚಿತವಾಗಿದೆ.
ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಬೆರಳೆಣಿಕೆಯ ತಿಂಗಳು ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ ಕೆಲವು ನಾಯಕರು ಸಚಿವ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
CKNEWSKANNADA / BRASTACHARDARSHAN CK NEWS KANNADA