ಬೆಳಗಾವಿ : ಕಳೆದ ತಿಂಗಳು ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದರು.
ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.
ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು ಇದ್ದರು.