Breaking News

ಕಾನೂನು ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಶಿಸ್ತಿನಿಂದ ಕಲಿತು ಜನರಿಗೆ ನ್ಯಾಯ ದೊರಕಿಸಿ : ಸನತ್ ಜಾರಕಿಹೊಳಿ


ಗೋಕಾಕ: ಸಮಾಜದಲ್ಲಿಯ ಅನ್ಯಾಯಗಳಿಗೆ ಸ್ವಂದಿಸುವ ವೃತ್ತಿ ಕಾನೂನು ವೃತ್ತಿಯಾಗಿದ್ದು , ಕಾನೂನು ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಶಿಸ್ತಿನಿಂದ ಕಲಿತು ಜನರಿಗೆ ನ್ಯಾಯ ದೊರಕಿಸಬೇಕು. ಚೆನ್ನಾಗಿ ಓದಿ ಸಂಸ್ಥಯ ಕೀರ್ತಿ ಹೆಚ್ಚಿಸಿ, ಸಮಾಜದಲ್ಲಿ ಒಂದು ಒಳ್ಳೆಯ ಸ್ಥಾನಕ್ಕೆ ಹೋಗಿ ಎಂದು ಯುವ ನಾಯಕ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸನತ್ ಜಾರಕಿಹೊಳಿ ಅವರು ತಿಳಿಸಿದರು.

ರವಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಕ್ರೀಡಾ ಹಾಗೂ ಸಾಂಸ್ಕೃತಿಕ ಚುಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

ನಂತರ ಬೆಳಗಾವಿ ಆರ್.ಎಲ್.ಎಸ್. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ ಅವರು ಮಾತನಾಡಿ ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದ್ದು, ಸಮಾಜದಲ್ಲಿ ಮಹತ್ವದ ಸ್ಥಾನ ಪಡೆದಿದೆ.

ದೇಶದಲ್ಲಿ ಕಾನೂನಿಗೆ ಹೆಚ್ಚಿನ ಬೆಲೆಇದ್ದು, ಜನರಲ್ಲಿ ಕಾನೂನಿನ ಅರಿವು ಹೆಚ್ಚಾಗುತ್ತಿದೆ. ಜನರು ಕಾನೂನಿನ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹೆಚ್ಚಿನ ಒಲವು ವ್ಯಕ್ತಪಡಿಸುತ್ತಿದ್ದು, ಅವರಿಗೆ ಸಾಮಾಜಿಕ ನ್ಯಾಯ ದೊರೆಕಿಸಿಕೊಡುವದ ರೊಂದಿಗೆ ಉತ್ತಮ ಸಮಾಜ ನಿರ್ಮಿಸಲು ಶ್ರಮಿಸುವಂತೆ ಕರೆ ನೀಡಿದ ಅವರು ನನ್ನ ವೃತ್ತಿ ಜೀವನವೂ ಇದೇ ಸಂಸ್ಥೆಯಯಲ್ಲಿ ಪ್ರಾರಂಭಿಸಿದ್ದು, ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದವರು ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇಲ್ಲಿನ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಿ.ಡಿ.ಹುಕ್ಕೇರಿ ಕಾನೂನು ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವೃತ್ತಿ ಜೀವನದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯ ನಿರ್ವಹಿಸುವಂತೆ ಹೇಳಿದರು.

ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಪ್ರಾಚಾರ್ಯರಾದ ಜಿ.ಆರ್.ನಿಡೋನಿ, ಐ.ಎಸ್.ಪವಾರ, ಆಡಳಿತಾಧಿಕಾರಿ ಬಿ.ಕೆ ಕುಲಕರ್ಣಿ ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ