Breaking News

*ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*


72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

*ಗೋಕಾಕ*: ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಇತ್ತೀಚೆಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ವಾಸಿಸಲು ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಈ ಜನಾಂಗದ ಸಮಗ್ರ ಪ್ರಗತಿಗೆ ಬದ್ಧರಿರುವುದಾಗಿ ಅವರು ಹೇಳಿದರು.

ಅನೇಕ ವರ್ಷಗಳಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗವು ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ವಾಸಿಸುತ್ತ ಬಂದಿದೆ. ಈ ಜನಾಂಗದ ಕೆಲವರಿಗೆ ವಾಸಿಸಲು ಸ್ವಂತ ಸೂರಿಲ್ಲ. ಆದ್ದರಿಂದ ಜೋಕಾನಟ್ಟಿ ಗ್ರಾಮದಲ್ಲಿ ವಾಸಿಸುತ್ತಿರುವ ಈ ಜನಾಂಗದ ಕುಟುಂಬಗಳಿಗೆ ನಿವೇಶನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 72 ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿಕೊಳ್ಳಲು ಉಚಿತವಾಗಿ 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಅವರು ಹೇಳಿದರು.

ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರವು ಪ್ರತ್ಯೇಕ ನಿಗಮವನ್ನೂ ಸಹ ರಚಿಸಿದೆ. ಜೊತೆಗೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಅಲೆಮಾರಿಗಳಾಗಿ ಸಂಚರಿಸುತ್ತಿರುವ ಈ ಜನಾಂಗದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಮುಂದೆ ಬರಬೇಕು. ಅದಕ್ಕಾಗಿ ಈ ಜನಾಂಗದ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೀಡಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜೋಕಾನಟ್ಟಿ ಗ್ರಾಮದ ಅಲೆಮಾರಿ ಜನಾಂಗದ 72 ಕುಟುಂಬಗಳ ಫಲಾನುಭವಿಗಳಿಗೆ ಉಚಿತವಾಗಿ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಲಕ್ಷ್ಮಣ ಬಬಲಿ, ತಾಲೂಕಾ ಹಿಂದುಳಿದ ವರ್ಗಗಳ ಅಧಿಕಾರಿ ಆರ್.ಕೆ. ಬಿಸಿರೊಟ್ಟಿ, ಪ್ರಭಾಶುಗರ ನಿರ್ದೇಶಕರಾದ ಶಿದ್ಲಿಂಗಪ್ಪ ಕಂಬಳಿ, ಜಗದೀಶ ಬಂಡ್ರೊಳ್ಳಿ, ಅಲೆಮಾರಿ ಜನಾಂಗದ ಜಿಲ್ಲಾಧ್ಯಕ್ಷ ಅಮೃತ ದಪ್ಪಿನವರ, ಭೀಮಶಿ ಮೋಕಾಶಿ, ಕುಬೇಂದ್ರ ತೆಗ್ಗಿ, ಸಾಬಪ್ಪ ಬಂಡ್ರೊಳ್ಳಿ, ಗುಜನಟ್ಟಿ ಪಿಕೆಪಿಎಸ್ ಅಧ್ಯಕ್ಷ ಲಕ್ಷ್ಮಣ ಬಂಡ್ರೊಳ್ಳಿ, ತುಕಾರಾಮ ದೊಡಶಿವಪ್ಪಗೋಳ, ರಾಮಪ್ಪ ಅರಭಾವಿ, ಅಲೆಮಾರಿ ಜನಾಂಗದ ಮುಖಂಡರಾದ ಸಿದ್ದಪ್ಪ ದೊಡಮನಿ, ಸದಾಶಿವ ಹೆಳವರ, ಕೃಷ್ಣಪ್ಪ ಹೆಳವರ, ಪ್ರಕಾಶ ಹೆಳವರ, ಅಲ್ಲಪ್ಪ ಅರಗಾಡಿ, ಗಣಪತಿ ಆಲಗೂರ, ಉದ್ದಪ್ಪ ಹೆಳವರ, ರುದ್ರಪ್ಪ ದೊಡಮನಿ, ಭೀಮಶಿ ನಿಂಗನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಲೆಮಾರಿ ಜನಾಂಗಕ್ಕೆ ಉಚಿತವಾಗಿ ನಿವೇಶನಗಳನ್ನು ಮಂಜೂರು ಮಾಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಜನಾಂಗದ ಪರವಾಗಿ ಸತ್ಕರಿಸಲಾಯಿತು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ