ಗೋಕಾಕ : ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಿದರು.
ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಿ ಮಾತನಾಡಿದ ಅವರು ದೃಢ ಸಂಕಲ್ಪ, ಮಹತ್ವಾಕಾಂಕ್ಷೆ, ನಾಯಕತ್ವ, ಮತ್ತು ದೂರದೃಷ್ಟಿಗೆ ಉದಾಹರಣೆಯಂತಿದ್ದ ಜನರ ರಾಜ ಎಂದೇ ಪ್ರಸಿದ್ಧಿ ಪಡೆದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಹೋರಾಟ ನಮಗೆ ಸ್ಪೂರ್ತಿ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳು ಹಾಗೂ ಯುವಕರು ಉಪಸ್ಥಿತರಿದ್ದರು.