ಗೋಕಾಕ : ನಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಸೂಚಿಸಿರುವ ಅಭ್ಯರ್ಥಿ ಮಹಾಂತೇಶ ಕಡಾಡಿ ಗೆಲುವಿಗಾಗಿ ಶ್ರಮಿಸೋಣ ಎಂದು ಕಾಂಗ್ರೆಸ್ ಮುಖಂಡ ಚಂದ್ರಶೇಖರ ಕೊಣ್ಣೂರ ಅವರು ತಿಳಿಸಿದ್ದಾರೆ.
ದೆಹಲಿಯಿಂದ ದೂರವಾಣಿ ಮೂಲಕ ತಿಳಿಸಿದ ಅವರು ಅಶೋಕ್ ಪೂಜಾರಿ ಅವರು ಯಾವುದೇ ದುಡಿಕಿ ನಿರ್ಧಾರ ತೆಗೆದುಕೊಳ್ಳಬಾರದು ನಾನು ಸಹಿತ ಆಕಾಂಕ್ಷಿಯಾಗಿದ್ದೆ ಆದರೆ ಹೈಕಮಾಂಡ್ ಸರ್ವೆಮೂಲಕ ಟಿಕೆಟ್ ಹಂಚಿಕೆ ಮಾಡಿದೆ. ಇದರಿಂದ ಕಾಂಗ್ರೆಸ್ ಪಕ್ಷದ ನಿಲುವಿಗೆ ಬದ್ಧರಾಗಿರೋಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋಣ, ಹಾಗೂ ಅಶೋಕ್ ಪೂಜಾರಿ ಅವರ ಬೆಂಬಲಿಗರಲ್ಲಿ ಕೂಡಾ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಈ ಕುರಿತು ನಾಳೆ ಮುಂಜಾನೆ 11 ಗಂಟೆಗೆ ಬಸವೇಶ್ವರ ವೃತ್ತದ ಹತ್ತಿರದಲ್ಲಿರುವ ಮಹಾಲಕ್ಷ್ಮೀ ಟ್ರಾವೆಲ್ಸ್ ಏಜೆನ್ಸಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ತಿಳಿಸಿದರು