Breaking News

ವಿಶ್ವ ಪರಿಸರ ದಿನ; ನಿಸರ್ಗದಲ್ಲಿಯೇ ಸಮಯ ಕಳೆದ ಸಚಿವ ಸತೀಶ್‌ ಜಾರಕಿಹೊಳಿ


ಗೋಕಾಕ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರು ಪಟ್ಟಣದ ಹೊರ ವಲಯದ ಮಾರ್ಕಂಡೇಯ ನದಿ ಪಕ್ಕದಲ್ಲಿರುವ ಯೋಗಿ ಕೊಳ್ಳದ ನಿಸರ್ಗದಲ್ಲಿಯೇ ಸಮಯ ಕಳೆದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ನಾವು ಸ್ಥಳೀಯ ಆಹಾರಗಳನ್ನು ಸೇವಿಸಿದರೆ ರೋಗಗಳಿಂದ ದೂರವಿರಬಹುದು. ಹಿರಿಯರು ಅತಿ ಹೆಚ್ಚು ವರ್ಷಗಳ ಕಾಲ ಆರೋಗ್ಯವಂತರಾಗಿ ಬದುಕಲು ಅವರು ಸೇವಿಸುವ ಆಹಾರ ಕಾರಣ ಮತ್ತು ಅವರು ನಿಸರ್ಗದೊಂದಿಗೆ ನಿಕಟವಾದ ಸಂಬಂಧವನ್ನು ಇಟ್ಟುಕೊಂಡಿದ್ದರು ಎಂದು ಹೇಳಿದರು.

ಪರಿಸರ ಕಾಳಜಿ ಕೇವಲ ವರ್ಷದಲ್ಲಿ ಒಂದು ದಿನಕ್ಕೆ ಮಾತ್ರ ಸೀಮತವಾಗದೆ ಅದು ನಿತ್ಯದ ಕಾಯಕವಾಗಬೇಕು. ಪರಿಸರ ಸ್ವಚ್ಛತೆ ಮತ್ತು ಸಂರಕ್ಷ ಣೆ ನಮ್ಮ ಮನೆ ಮತ್ತು ಕಚೇರಿಯಿಂದಲೇ ಆರಂಭವಾಗಬೇಕು. ಪರಿಸರ ಶುಚಿತ್ವ ಮತ್ತು ಸಂರಕ್ಷ ಣೆ ನಿತ್ಯದ ಅರಿವು ಆಗಬೇಕು. ಕೇವಲ ಪರಿಸರ ದಿನಾಚರಣೆಯಂದು ಪರಿಸರ ಸಂರಕ್ಷ ಣೆ ಬಗ್ಗೆ ಎಚ್ಚೆತ್ತುಕೊಂಡರೆ ಸಾಲದು ಎಂದು ಸಲಹೆ ನೀಡಿದರು.  

ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡ ವಿವೇಕೆ ಜತ್ತಿ ಸೇರಿದಂತೆ ಅನೇಕ ಮುಖಂಡರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ