Breaking News

ಬೆಳಗಾವಿಯಲ್ಲಿ ‘ಮಹಿಳೆ ಹಲ್ಲೆ ಪ್ರಕರಣ: ರಾಜ್ಯ ಸರ್ಕಾರದಿಂದ ‘ಸಂಸತ್ರಸ್ತೆಗೆ 5 ಲಕ್ಷ’ ಪರಿಹಾರ ಘೋಷಣೆ.


ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದಂತ ಪ್ರಕರಣ ನಡೆದಿತ್ತು. ಈ ಘಟನೆಯಿಂದಾಗಿ ಸಂತ್ರಸ್ತ ಮಹಿಳೆ ಆಘಾತಕ್ಕೂ ಒಳಗಾಗಿದ್ದರು. ಅಂತಹ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದರಿಂದ ಯುವತಿಯ ಕುಟುಂಬಸ್ಥರು ಕೋಪಗೊಂಡು, ಯುವಕನ ಮನೆಗೆ ನುಗ್ಗಿ, ಅವರ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು.

ಈ ಪ್ರಕರಣ ಸಂಬಂಧ 9 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಹಲವರನ್ನು ಬಂಧಿಸಲಾಗಿತ್ತು. ಈ ಘಟನೆಯ ಬಳಿಕ ನಾಪತ್ತೆಯಾಗಿದ್ದಂತ ಜೋಡಿ, ಬೆಳಗಾವಿ ಪೊಲೀಸ್ ಆಯುಕ್ತರ ಮುಂದೆ ಹಾಜರಾಗಿ, ತಮಗೆ ರಕ್ಷಣೆ ನೀಡುವಂತೆ ಕೋರಿದ್ದರು.

ಇದೀಗ ಈ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಮಾಹಿತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಂಚಿಕೊಂಡಿದ್ದು, ವಂಟಮೂರಿ ಗ್ರಾಮದಲ್ಲಿ ನಡೆದಂತ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.

ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ 50 ಸಾವಿರ ಪರಿಹಾರವನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಮೂಲಕ ರಾಜ್ಯ ಸರ್ಕಾರರಿಂದ ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ನಡೆದಂತ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಮಹಿಳೆಗೆ ಪರಿಹಾರವನ್ನು ಘೋಷಣೆ ಮಾಡಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ರೈತರ ಖಾತೆಗಳಿಗೆ ಪರಿಹಾರವನ್ನು ಜಮೆ ಮಾಡಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಕಳೆದ ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ