Breaking News

ಬಿಜೆಪಿಯು ಶಿಸ್ತಿನ ಪಕ್ಷ. ಕಾರ್ಯಕರ್ತರೇ ನಮಗೆ ಆಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ


ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಬುಧವಾರ ಸಂಜೆ ನಗರದ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದಿಂದಲೇ ಕನಿಷ್ಟ 75 ಸಾವಿರ ಮತದಾರರನ್ನು ಸದಸ್ಯತ್ವದ ನೋಂದಣಿಯನ್ನು ಮಾಡಿಸುವ ಮೂಲಕ ಮುಂಬರುವ ತಾ.ಪಂ., ಜಿ.ಪಂ. ಚುನಾವಣೆಯಲ್ಲಿ ನಮ್ಮವರು ಗೆಲ್ಲಲು ಈಗೀನಿಂದಲೇ ಪ್ರಯತ್ನ ಮಾಡುವಂತೆ ಅವರು ಹೇಳಿದರು.

ಬಿಜೆಪಿಯು ಶಿಸ್ತಿನ ಪಕ್ಷ. ಕಾರ್ಯಕರ್ತರೇ ನಮಗೆ ಆಸ್ತಿ. ಇಲ್ಲಿ ಕಾರ್ಯಕರ್ತರಿಗಿರುವ ಗೌರವ ಬೇರೇ ಯಾವ ಪಕ್ಷದಲ್ಲೂ ಇಲ್ಲ. ಇದರಿಂದಾಗಿಯೇ ನಮ್ಮ ಹೆಮ್ಮೆಯ ಪಕ್ಷವಾಗಿರುವ ಬಿಜೆಪಿಯು ಇಂದು ಜಾಗತಿಕ ಮಟ್ಟದಲ್ಲಿ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಪಕ್ಷವಾಗಿ ಗುರುತಿಸಿಕೊಂಡಿದೆ. ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ಪಂಡಿತ ದೀನ್ ದಯಾಳ್ ಉಪಾಧ್ಯೆಯವರ ತ್ಯಾಗ ಮತ್ತು ಪರಿಶ್ರಮದಿಂದ ವಿಶ್ವದಲ್ಲಿಯೇ ನಮ್ಮ ಸರ್ಕಾರ ರಾರಾಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ನಮ್ಮ ಭಾರತ ದೇಶವು ಪ್ರಪಂಚದಲ್ಲಿಯೇ ಶಕ್ತಿಶಾಲಿ ರಾಷ್ಟçವಾಗುವತ್ತ ಹೆಜ್ಜೆ ಹಾಕುತ್ತಿದೆ ಎಂದು ತಿಳಿಸಿದರು.

ಸೆ.2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ನವದೆಹಲಿಯಲ್ಲಿ ಚಾಲನೆ ನೀಡಲಿದ್ದಾರೆ. ಎರಡು ಹಂತಗಳಲ್ಲಿ ಈ ಅಭಿಯಾನ ಜರುಗಲಿದೆ. ಸೆ.2 ರಿಂದ 25 ರತನಕ ಒಂದು ಹಂತವಾದರೆ, ಎರಡನೇ ಹಂತವು ಅ.1 ರಿಂದ 15 ರವರೆಗೆ ನಡೆಯಲಿದ್ದು, ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಅಗತ್ಯ ಬಿದ್ದರೆ ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ಇದರ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು.ಕಳೆದ ಮೂರು ಅವಧಿಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚು ಒತ್ತು ನೀಡುವಂತೆ ಕಾರ್ಯರಿಗೆ ಕರೆ ಕೊಟ್ಟರು.

ಈಗಿರುವ ಕಾಂಗ್ರೆಸ್ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಅಭಿವೃದ್ಧಿ ಕಾಮಗಾರಿಗಳು ನೆನಗುದಿಗೆ ಬಿದ್ದಿವೆ. ಯಾವ ಯೋಜನೆಗಳಿಗೂ ಅನುದಾನ ಕೊಡುತ್ತಿಲ್ಲ. ಎಲ್ಲವೂ ಗ್ಯಾರಂಟಿಗೆ ಹೋಗುತ್ತಿದೆ. ಅಭಿವೃದ್ಧಿಯಂತೂ ಇಲ್ವೇ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಕೊಂಡಿದ್ದಾಗಿ ಅವರು ಹೇಳಿದರು.

ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 6 ಲಕ್ಷ ಸದಸ್ಯರನ್ನು ನೋಂದಣಿ ಮಾಡುವ ಗುರಿ ಹೊಂದಲಾಗಿದೆ. ಎರಡು ಹಂತಗಳಲ್ಲಿ ಇದನ್ನು ಮಾಡಲಾಗುತ್ತಿದೆ. ಕಳೆದ ಅವಧಿಯಲ್ಲಿ ಇಡೀ ರಾಜ್ಯದಲ್ಲಿಯೇ ಅರಭಾವಿ ಕ್ಷೇತ್ರವು ಸದಸ್ಯತ್ವ ಅಭಿಯಾನದಲ್ಲಿ ಹೊಸ ಭಾಷ್ಯೆ ಬರೆದಿತ್ತು. ಈ ಬಾರಿಯೂ ಈ ದಾಖಲೆಯನ್ನು ಮಾಡುವ ಮೂಲಕ ರಾಜ್ಯದಲ್ಲಿಯೇ ಅರಭಾವಿಯ ಕ್ಷೇತ್ರದ ಹೆಸರು ರಾರಾಜಿಸಬೇಕು. ಕಾರ್ಯಕರ್ತರು ಸದಸ್ಯತ್ವ ಅಭಿಯಾನಕ್ಕೆ ತಮ್ಮನ್ನು ತಾವು ಮನಸಾ:ಪೂರ್ವಕವಾಗಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ವೇದಿಕೆಯಲ್ಲಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಸದಸ್ಯತ್ವ ಅಭಿಯಾನದ ಜಿಲ್ಲಾ ಪ್ರಭಾರಿ ದಾದಾಗೌಡ ಬಿರಾದಾರ, ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಪ್ರಶಾಂತ ಅಮ್ಮಿನಭಾವಿ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

*ಕೋಟ್*

ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕಾ ಪಂಚಾಯತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ಈಗಿಂದಲೇ ಕಾರ್ಯಪ್ರವೃತ್ತರಾಗಬೇಕು. ಮುಂದಿನ ಅಕ್ಟೋಬರ್ ತಿಂಗಳಲ್ಲಿ ಚುನಾವಣೆಯ ಸಂಬಂಧ ದೊಡ್ಡ ಪ್ರಮಾಣದಲ್ಲಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗುವುದು. ಮುಂದಿನ ತಿಂಗಳಿನಿಂದ ನಡೆಯಲಿರುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ಸದಸ್ಯರು ಈ ಟೊಲ್ ಫ್ರೀ (8800002024) ಸಂಖ್ಯೆಗೆ ಮಿಸ್ಡ್ ಕಾಲ್ ಕೊಟ್ಟು ಬಿಜೆಪಿ ಸದಸ್ಯರಾಗಿ. *_ಬಾಲಚಂದ್ರ ಜಾರಕಿಹೊಳಿ*

*ಶಾಸಕರು ಅರಭಾವಿ*

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ