Breaking News

ಚಿಕ್ಕೋಡಿ ಕ್ಷೇತ್ರದ ಜನರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ:ಸಂಸದೆ ಪ್ರಿಯಾಂಕಾ ಜಾರಕಿಹೊಳಿ


ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜನರ ಪ್ರತಿಯೊಂದು ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   

ಪಟ್ಟಣದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಜರುಗಿದ ಜನಸಂಪರ್ಕ ಸಭೆಯಲ್ಲಿ ಜನರ ಸಹ್ವಾಲು ಸ್ವೀಕರಿಸಿ ಅವರು ಮಾತನಾಡಿದರು.

ಜನರ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಚಿಕ್ಕೋಡಿಯಲ್ಲಿ ಸಂಸದರ ಕಚೇರಿ ಆರಂಭಿಸಲಾಗಿದೆ. ಆದ್ದರಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜನರು ಚಿಕ್ಕೋಡಿಯಲ್ಲಿರುವ ತಮ್ಮ ಕಚೇರಿಗೆ ಬಂದು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಕೆಲವು ಸಮಸ್ಯೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆಮಾಡಿ ಸ್ಥಳದಲ್ಲಿಯೇ ಬಗೆಹರಿಸುವ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾದರು. 

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಬೂಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಎಚ್.ಎಸ್.ನಸಲಾಪೂರೆ, ಪ್ರಭಾಕರ ಕೋರೆ, ಮುದ್ದುಸಾರ ಜಮಾದಾರ, ಗುಲಾಬಹುಸೇನ ಬಾಗವಾನ ಮುಂತಾದವರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ