ಮೂಡಲಗಿ- ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.
ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು ಈ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ. ೬೦ ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು ೩ ಸಾವಿರ ರೂಪಾಯಿ ವೇತನ ನೀಡುತ್ತಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಕಾರ್ಮಿಕರು ಮೃತಪಟ್ಟರೆ ಅಂತಹವರಿಗೆ ರೂಪಾಯಿ ೫ ಲಕ್ಷ ವರೆಗೆ ವಿಮಾ ಸೌಲಭ್ಯವಿದೆ. ಸುಮಾರು ೨ ಲಕ್ಷ ರೂಪಾಯಿವರೆಗಿನ ಆರೋಗ್ಯದ ವೆಚ್ಚವನ್ನು ಇಲಾಖೆಯೇ ಭರಿಸಲಿದೆ. ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿ ಗುರುತಿನ ಚೀಟಿಗಳನ್ನು ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ೨೦೨೩-೨೪ ನೇ ಸಾಲಿನ ಕಾರ್ಮಿಕರಿಗೆ ೧೨೦೦ ಕಿಟ್ ಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಿಕ ಅಶೋಕ ವಡ್ಡರ, ಅನ್ವರ ನದಾಫ, ಹಣಮಂತ ಗುಡ್ಲಮನಿ, ಸುಭಾಸ ಗೋಡ್ಯಾಗೋಳ, ಪುರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
Check Also
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ
ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …