Breaking News

*ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*


ಸಾಲದ ಶೂಲಕ್ಕೆ ದೂಡಿದ ಬಜೆಟ್‌ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್‌ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ ಮನವೊಲಿಸಿ ತಮ್ಮ ಸಿಎಂ ಸೀಟನ್ನು ಭದ್ರ ಮಾಡಿಕೊಂಡಿದ್ದಾರೆ. ಆದರೆ, ಕಿತ್ತೂರು ಕರ್ನಾಟಕ ಭಾಗಕ್ಕೆ ಮೂಗಿಗೆ ತುಪ್ಪ ಒರೆಸುವಂತೆ ಕೃಷ್ಣಾ ಸಂತ್ರಸ್ತರ ಬಾಧಿತರಿಗೆ ಸಮರ್ಪಕ ಪರಿಹಾರ ಎಂದಷ್ಟೇ ಹೇಳಿದ್ದಾರೆ. ಎಷ್ಟು ಹಣ ಎಂದು ಹೇಳಿಲ್ಲ. ಹಣಕಾಸಿನ ಪರಿಸ್ಥಿತಿ ಸುಧಾರಿಸುವ ಯಾವುದೇ ದಿಟ್ಟ ಕ್ರಮವನ್ನು ಕೈಗೊಂಡಿಲ್ಲ. ಹೀಗಾಗಿ ಹೆಚ್ಚಿನ ಸಾಲ ತೆಗೆದುಕೊಳ್ಳುವುದೇ ಇವರ ಸಾಧನೆಯಾಗಿದೆ. ಸಾಲ ತೆಗೆದುಕೊಂಡು ಜನರ ಮೇಲೆ ಭಾರ ಹಾಕಿದ್ದಾರೆ. ಹೀಗಾಗಿ ಇದೊಂದು ಜನ ವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ ಆಗಿದೆ. ಮೈಸೂರು, ಬೆಂಗಳೂರಿನಲ್ಲಿ ಕೈಗಾರಿಕೆ ಮತ್ತು ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡಿ ತಮ್ಮ ಭಾಗದ ಜನರಿಗೆ ಹೆಚ್ಚು ಉದ್ಯೋಗ ನೀಡಲು ಅನುಕೂಲವಾಗುವಂತೆ ಬಜೆಟ್‌ ಮಂಡಿಸಿದ್ದಾರೆ. ಕಳೆದ ಬಾರಿ ಕೂಡ ಪ.ಪಂಗಡ ಮತ್ತು ಪ.ಜಾತಿ ಅವರಿಗೆ ಮೀಸಲಾಗಿದ್ದ ಹಣವನ್ನು ಗ್ಯಾರಂಟಿಗೆ ಬಳಸುವ ಮೂಲಕ ಆ ಜನಾಂಗಕ್ಕೆ ಅನ್ಯಾಯ ಮಾಡಿದ್ದರು. ಈ ಬಾರಿಯೂ ಅದೇ ಪರಿಸ್ಥಿತಿ ಉಂಟಾಗಲಿದೆ. ಒಟ್ಟಾರೆ ಈ ಬಜೆಟ್‌ ರಾಜ್ಯಕ್ಕೆ ಆರ್ಥಿಕ ಚೈತನ್ಯ ನೀಡದೆ ಸಾಲ ಶೂಲಕ್ಕೆ ರಾಜ್ಯವನ್ನು ದೂಡಿದಂತಾಗಿದೆ.

-ಬಾಲಚಂದ್ರ ಜಾರಕಿಹೊಳಿ, ಶಾಸಕ, ಬೆಮ್ಯುಲ್‌ ಅಧ್ಯಕ್ಷರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ