ಸಾವಳಗಿ: ಉಮೇಶ್ ನಂದಗಾಂವ ಪತ್ರಕರ್ತರು ಮನವಿ ಪ್ರತಿ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಆಂಧ್ರ ಪ್ರದೇಶದಲ್ಲಿರುವ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಶ್ರೀ ಶೈಲ್ ಮಲ್ಲಿಕಾರ್ಜುನ ದರ್ಶನಕ್ಕೆ
ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ನೇರ ರೈಲು ಸೌಲಭ್ಯ ಇಲ್ಲದ ಕಾರಣ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ಅಥವಾ ಘಟಪ್ರಭಾ ರೈಲು ನಿಲ್ದಾಣದಿಂದ, ಇಲ್ಲವಾದರೆ ಮಿರಜ್ ರೈಲು ನಿಲ್ದಾಣದಿಂದ ವಿಜಯವಾಡವರೆಗೆ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸುವಂತೆ ಭಕ್ತರು ಹಾಗೂ ಸಾರ್ವಜನಿಕರು ಬೆಳಗಾವಿ ಹಾಗೂ ಚಿಕ್ಕೋಡಿ ಸಂಸದರು ಮತ್ತು ರಾಜ್ಯ ಸಭಾ ಸದಸ್ಯರು. ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.
ಯುಗಾದಿ ಹಬ್ಬದ ಸಮಯದಲ್ಲಿ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದರೆ ಭಕ್ತರಿಗೆ ಅನುಕೂಲವಾಗುವುದರ ಜೊತೆಗೆ ಸುರಕ್ಷಿತ ಹಾಗೂ ಸುಲಭ ಪ್ರಯಾಣ ಸಾಧ್ಯವಾಗುತ್ತದೆ. ವಿಶೇಷವಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಕುಟುಂಬ ಸಮೇತ ಪ್ರಯಾಣಿಸುವವರಿಗೆ ಇದು ಬಹಳ ಸಹಾಯಕವಾಗಲಿದೆ ಎಂದು ಭಕ್ತರು ತಿಳಿಸಿದ್ದಾರೆ.
ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ರೈಲ್ವೆ ಇಲಾಖೆ ಈ ಕುರಿತು ಗಮನ ಹರಿಸಿ ಯುಗಾದಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಪ್ರಾರಂಭಿಸುವಂತೆ ಸಾರ್ವಜನಿಕರು ಹಾಗೂ ಪತ್ರಕರ್ತ ಉಮೇಶ್ ನಂದಗಾಂವ. ಆಗ್ರಹಿಸಿದ್ದಾರೆ
CKNEWSKANNADA / BRASTACHARDARSHAN CK NEWS KANNADA