Breaking News

ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ವಿರುದ್ಧ ಪ್ರತಿಭಟನೆ


ಹುಕ್ಕೇರಿ: ನಿರಂತರ ಜ್ಯೋತಿ ಯೋಜನೆಯಡಿ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ವಿವಿಧ ಗ್ರಾಮಸ್ಥರು ಹುಕ್ಕೇರಿ ಪಟ್ಟಣದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ನೂರಾರು ಜನರಿಂದ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನೆಗೆ ರೈತ ಹಾಗೂ ದಲಿತ ಸಂಘಗಳು ಬೆಂಬಲ ನೀಡಿದ್ದವು. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ತಕ್ಷಣ ನಿರಂತರ ವಿದ್ಯುತ್ ಪೂರೈಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಸಮಸ್ಯೆ ಬಗೆಹರಿಸುವ ಭರವಸೆ ಬಳಿಕ ಪ್ರತಿಭಟನೆ ವಾಪಸ್ಸ ಪಡೆಯಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ನೂರಾರು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ತುಕ್ಕಾನಟ್ಟಿಗೆ ಭಗೀರಥ ಜಯಂತಿಗೆ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

ಒಟ್ಟು 2.45 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ತುಕ್ಕಾನಟ್ಟಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ