Breaking News

*ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೊಲ್ಲೆಯವರ ಫಾರ್ಮ ಹೌಸ್ ನಲ್ಲಿ ನಡೆದ ಔಪಚಾರಿಕ ಸಭೆ*


ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಕಡಾಡಿಯವರನ್ನು ಸತ್ಕರಿಸಿ ಗೌರವಿಸಿದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷ ಜಯಕುಮಾರ ಖೋತ

ನಿಪ್ಪಾಣಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆಯವರ ನೇತೃತ್ವದಲ್ಲಿ ಇಲ್ಲಿನ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಸೋಮವಾರದಂದು ನಡೆದಿದ್ದು, ನೂತನ ಅಧ್ಯಕ್ಷರಾಗಿ ಜಯಕುಮಾರ ಖೋತ ಮತ್ತು ಉಪಾಧ್ಯಕ್ಷರಾಗಿ ಗೀತಾ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಂತರ ಜೊಲ್ಲೆಯವರ ಫಾರ್ಮ ಹೌಸನಲ್ಲಿ ನಡೆದ ಔಪಚಾರಿಕ ಸಭೆಯಲ್ಲಿ ಕಾರ್ಖಾನೆಯ ಅಧ್ಯಕ್ಷ- ಉಪಾಧ್ಯಕ್ಷರು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ರಾಜ್ಯಸಭಾ ಸದಸ್ಯ ಈರಪ್ಪ ಕಡಾಡಿಯವರನ್ನು ಸತ್ಕರಿಸಿ, ಗೌರವಿಸಿದರು.

ನೂತನವಾಗಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಖೋತ ಮತ್ತು ಪಾಟೀಲ ಅವರನ್ನು ಅಭಿನಂದಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಕಡಾಡಿಯವರು ಶುಭ ಕೋರಿದರು.

ಶಾಸಕಿ ಶಶಿಕಲಾ ಜೊಲ್ಲೆ, ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಜಯಕುಮಾರ ಖೋತ, ಉಪಾಧ್ಯಕ್ಷೆ ಗೀತಾ ಪಾಟೀಲ, ಗಣ್ಯ ಉದ್ಯಮಿಗಳಾದ ಜೆ.ಎನ್‌.ಶೆಟ್ಟಿ, ಸೈದಪ್ಪ ಗದಾಡಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*2028 ಕ್ಕೆ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಆಡಳಿತ ಚುಕ್ಕಾಣಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಆತ್ಮವಿಶ್ವಾಸ*

ಖಾನಾಪೂರದ ಕುಸಮಳ್ಳಿಯಲ್ಲಿ ನಡೆಯುತ್ತಿರುವ ಪಂ. ದೀನ ದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತ ಬಲಾಢ್ಯ ರಾಷ್ಟ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ