Breaking News

ಎಸ್ಐಆರ್ ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ


ಯಾದವಾಡ ಗ್ರಾಮದಲ್ಲಿ ಮನೆ- ಮನೆಗೆ ತೆರಳಿ ಅಭಿಯಾನದ ಯಶಸ್ಸಿಗೆ ಕರೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಎಸ್ಐಆರ್ ಅಭಿಯಾನದ ಪ್ರಯುಕ್ತ ಪ್ರತಿ ಕಾರ್ಯಕರ್ತರು 20 ಮನೆ- ಮನೆಗೆ ತೆರಳಿ ಅದರ ಸಮಗ್ರ ಮಾಹಿತಿಯನ್ನು ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕರೆ ನೀಡಿದರು.

ಶನಿವಾರದಂದು ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡ ಎಸ್ಐಆರ್ ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಐಆರ್ ಅಭಿಯಾನದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಭಾಗಿಯಾಗಿ ಅಭಿಯಾನವನ್ನು ಯಶಸ್ವಿ ಮಾಡುವಂತೆ ಅವರು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಯಾದವಾಡ ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಮತದಾರ ಪಟ್ಟಿಯ ಪರೀಕ್ಷರಣೆಯಲ್ಲಿ ಪಾಲ್ಗೊಂಡು ಮನೆ- ಮನೆಗೆ ಭೇಟಿ ನೀಡಿ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು.

ಯಾದವಾಡದ 258 ಮತ್ತು 259 ರ ಮತಗಟ್ಟೆಗಳಿಗೆ ಭೇಟಿ ನೀಡಿ ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಬೆಳಗಾವಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ ಪಾಟೀಲ, ಅರಭಾವಿ ಬಿಎಲ್ಎ-1 ಗೋವಿಂದ ಕೊಪ್ಪದ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪ್ರಕಾರ್ಯದರ್ಶಿ ಪ್ರಮೋದ ನುಗ್ಗಾನಟ್ಟಿ, ಬಿಎಲ್ಓ, ಬಿಎಲ್ಎ-2, ಪಕ್ಷದ ಪದಾಧಿಕಾರಿಗಳು, ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಹೊಸಟ್ಟಿ ಗ್ರಾಮದಲ್ಲಿ 1.16 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ : ಗ್ರಾಮದ ಅಭಿವೃದ್ಧಿಯಲ್ಲಿ ನಾಗರೀಕರ ಸಹಕಾರ ಅಗತ್ಯವಾಗಿದ್ದು, ಈ ದಿಸೆಯಲ್ಲಿ ಹೊಸಟ್ಟಿ ಗ್ರಾಮಸ್ಥರು ಒಂದಾಗಿ ಸೇರಿಕೊಂಡು ಗ್ರಾಮಾಭಿವೃದ್ಧಿಗೆ ದುಡಿಯುತ್ತಿರುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ