ಬೆಂಗಳೂರು: ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.
ಬೆಂಗಳೂರು: ನಗರದ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ(ABVP) ಪ್ರತಿಭಟನೆ ನಡೆಸಿದ್ದು, ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು(Karnataka Police) ಲಾಠಿಚಾರ್ಜ್ ಮಾಡಿದ್ದಾರೆ.ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು (ಜನವರಿ 31) ಎಬಿವಿಪಿ ಪ್ರತಿಭಟನೆ (Protest) ನಡೆಸುತ್ತಿದೆ. ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.
ವಿವಿ ಮುತ್ತಿಗೆ ಹಾಕಲು ಮುಂದಾಗಿದ್ದ ಅಖಿಲಾ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಹಾಸ್ಟೆಲ್ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ವಿವಿಗೆ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಈ ವೇಳೆ ವಿದ್ಯಾರ್ಥಿ ಸಂಘಟನೆಗಳು ನಡವೆಯೇ ಮಾರಾಮಾರಿಯಾಗಿದೆ.
ಬೇರೆ ಬೇರೆ ವಿಚಾರಗಳಿಗಾಗಿ ಪ್ರತಿಭಟನೆಗೆ ಮುಂದಾಗಿದ್ದ, ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದೆ. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮಧ್ಯೆಯೇ ಗಲಾಟೆಯಾಗಿದೆ..
ಪೊಲೀಸರ ಲಾಠಿಚಾರ್ಜ್ ವೇಳೆ ವಿದ್ಯಾರ್ಥಿನಿ ತಲೆಗೆ ಗಾಯ
ಪೊಲೀಸರ ಲಾಠಿಚಾರ್ಜ್ ವೇಳೆ ವಿದ್ಯಾರ್ಥಿನಿ ಹೇಮಶ್ರೀ ತಲೆಗೆ ಗಂಭೀರ ಗಾಯವಾಗಿದೆ. ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಬಿವಿಪಿ ಧರಣಿ ನಡೆಸುತ್ತಿರುವ ವೇಳೆ ಗಂಭೀರ ಗಾಯವಾಗಿದ್ದು, ತಲೆಗೆ ಸ್ಟಿಚ್ಚಿಂಗ್ ಹಾಕಲಾಗಿದೆ. ಕಳೆದ 2 ವರ್ಷದಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೇಮಾಶ್ರೀ ಗಾಯಗೊಂಡಿದ್ದಾರೆ.