Breaking News

ಎಸಿಬಿ ಬಲೆಗೆ ಬಿದ್ದ ಸದಲಗಾ ಪಿಎಸ್ಐ, ಇಬ್ಬರು ಪೇದೆಗಳು!


ಬೆಳಗಾವಿ: ‘ಅನಧಿಕೃತವಾಗಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ’ ಎಂದು ಹೆದರಿಸಿ ಅದರ ಮಾಲಿಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಇಬ್ಬರು ಕಾನ್ಸಟೆಬಲ್ ಗಳು ಭೃಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಇಂದು ಸಂಜೆ ಠಾಣೆಯ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪಿಎಸ್ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೆಬಲ್ ಗಳಾದ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ರೂ.೪೦ ಸಾವಿರ ಲಂಚ ಪಡೆಯುವಾಗ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಸರ್ಕಾರದ ಅಗತ್ಯ ಎಲ್ಲ ಪರವಾನಗಿ ಪಡೆದು ಗಡಿಗ್ರಾಮ ಬೋರಗಾಂವದಲ್ಲಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದ ಇಚಲಕರಂಜಿ ಮೂಲಕ ರಾಜು ಪಾಶ್ಚಾಪುರೆ ಅವರನ್ನು ಹೆದರಿಸಿದ್ದ ಪಿಎಸ್ಐ ಮತ್ತು ಪೇದೆಗಳು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕಾರ್ಖಾನೆ ಮಾಲಿಕ ಎಸಿಬಿಗೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಠಾಣೆಯ ಮೇಲೆ ದಾಳಿ ನಡೆಸಿದರು.

ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನ ಮತ್ತು ಡಿವೈಎಸ್ಪಿ ಜೆ.ಎಂ.ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಹೆಚ್ ಸುನಿಲಕುಮಾರ, ಎ.ಎಸ್.ಗುದಿಗೊಪ್ಪ, ಧಾರವಾಡದ ಅಲಿ ಶೇಖ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ