ಹುಕ್ಕೇರಿ : ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿಂದು ರೈತರು ಮತ್ತು ಸಾರ್ವಜನಿಕರ ಒತ್ತಾಯಗಳನ್ನು ಪರಿಗಣಿಸಿ, 15 ದಿನಗಳ ಕಾಲ ನೀರಿನ ಹರಿವನ್ನು ಇನ್ನೂ 5 ದಿನ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಚಿಂಚಲಿ ಮಾಯಕ್ಕಾ ಜಾತ್ರಾ ಮಹೋತ್ಸವಕ್ಕೆ ಸಹ ಅನುಕೂಲ ಕಲ್ಪಿಸುವ ಈ ನಿರ್ಣಯದಿಂದ ಜನರಿಗೆ ಹೆಚ್ಚಿನ ಸಹಾಯವಾಗುವ ನಿರೀಕ್ಷೆಯಿದೆ ಎಂದರು. ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ …
Read More »ಬೀದಿನಾಯಿಗಳು ಕಾಟವನ್ನು ನಿಯಂತ್ರಿಸುವಂತೆ ಆಗ್ರಹಿಸಿ ಕರವೇ ಆಗ್ರಹ ಮನವಿ
ಗೋಕಾಕ : ನರಗದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಕಾಟವನ್ನು ತಡೆಯುವಂತೆ ಆಗ್ರಹಿಸಿ ಇಲ್ಲಿನ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಶುಕ್ರವಾರದಂದು ನಗರದಲ್ಲಿ ಪ್ರತಿಭಟನೆ ನಡೆಸಿ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿ ಅವರಿಗೆ ಮನವಿ ಅರ್ಪಿಸಿದರು. ನಗರದ ವಿವಿಧ ಗಲ್ಲಿ ಗಲ್ಲಿಗಳಲ್ಲಿ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಮಹಿಳೆಯರು, ಶಾಲಾಮಕ್ಕಳು, ವಯೋವೃದ್ಧರು ಒಬ್ಬಂಟಿಯಾಗಿ ಓಡಾಡಲು ಹೆದರುವಂತಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳು ಕೆಲವು ಸಲ ಬೈಕ್ ಸವಾರರ ಮೇಲೂ …
Read More »ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 28 ರಿಂದ 15 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ಬೆಳಿಗ್ಗೆ …
Read More »ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ
ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ ಮರೆತಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಶ್ರಮಿಸಿದ ಜನರಿಗೆ, ಗೆಲುವಿಗೆ ದುಡಿದ ಸಂಘಟನೆಗಳಿಗೆ,ಸಮುದಾಗಳಿಗೆ ಕೃತಜ್ಞತೆ ಸಲ್ಲಿಸುವ ಕೆಲಸವನ್ನು ಮಾನವ ಬಂಧುತ್ವ ವೈದಿಕೆ,ಶೋಷಿತ ಸಮುದಾಯಗಳ ಒಕ್ಕೂಟ ಮಾಡುತ್ತಿದೆ. ಹೌದು, ನವೆಂಬರ್ 23 ಶಿಗ್ಗಾವಿ – ಸವಣೂರಿನ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಗೆ ಐತಿಹಾಸಿಕ ದಿನ ಎಂದರೆ ತಪ್ಪಾಗಲಾರದು. ಕಳೆದ 30 ವರ್ಷಗಳ ಕಾಂಗ್ರೆಸ್ …
Read More »ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ):* ಮೂಡಲಗಿ ಪಟ್ಟಣದ ಆರ್ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಪ್ರೊ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ಅಕ್ಕಿ ಮಾತನಾಡಿ, ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು …
Read More »ನಾಗನೂರು ಪಟ್ಟಣ ಪಂಚಾಯಿತಿ ಉಪ ಚುನಾವಣೆ; ಶಾಂತಿಯುತ ಮತದಾನ…!
ಮೂಡಲಗಿ: ನಾಗನೂರು ಪಟ್ಟಣ ಪಂಚಾಯಿತಿಯ ಉಪಚುನಾವಣೆಯಲ್ಲಿ ಶಾಂತಿಯುತ ಮತದಾನ ನಡೆಯಿತು. ನಾಗನೂರು ಪಟ್ಟಣ ಪಂಚಾಯಿತಿ ವಾರ್ಡ್ ನಂ 4 ರ ಉಪ ಚುನಾವಣೆಯು ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿದ್ದು, ಸರಕಾರಿ ಶಾಲೆ ಕೇರಮಡ್ಡಿಯಲ್ಲಿ ನಡೆಯಿತು.ಈ ವಾರ್ಡ್ ದಲ್ಲಿ 720 ಮತದಾರರು ಮತದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳು, ಪೋಲಿಸ್ ಇಲಾಖೆ ಅಧಿಕಾರಿಗಳು, ಹಾಗೂ ಶಿಕ್ಷಕರು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಅಭ್ಯರ್ಥಿಗಳ ಭವಿಷ್ಯ ಮತದಾನ ಪೆಟ್ಟಿಗೆಯಲ್ಲಿ, ಯಾರಿಗೆ ಒಲಿಯುತ್ತೆ ವಿಜಯಮಾಲೆ …
Read More »ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು …
Read More »ವಕೀಲರ ಸಂಘದ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ ಜಾರಕಿಹೊಳಿ
ರಾಯಬಾಗ: ರಾಯಬಾಗದಲ್ಲಿರುವ ವಕೀಲರ ವಿವಿಧ ಬೇಡಿಕೆಗಳನ್ನು ಹಂತ- ಹಂತವಾಗಿ ಈಡೇರಿಸಲಾಗುವುದು. ಅಲ್ಲದೇ ನಮ್ಮ ಸರ್ಕಾರದ ಅವಧಿಯಲ್ಲಿ ನ್ಯಾಯಾಲಯ ಹಾಗೂ ವಕೀಲರ ಸಂಘಕ್ಕೆ ಮೂಲ ಸೌಕರ್ಯ ಒದಗಿಸಲು ಪ್ರಮುಖ ಪಾತ್ರ ವಹಿಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ರಾಯಬಾಗ ವಕೀಲರ ಸಂಘದ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ನ್ಯಾಯವಾದಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ ಸಚಿವರು, ಕಾಂಗ್ರೆಸ್ …
Read More »ಸಹಕಾರಿ ರಂಗ ಇನ್ನಷ್ಟು ಗಟ್ಟಿಯಾಗಿ ನಿಲ್ಲಲಿ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ದೇಶದ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ರಂಗ ಶಕ್ತಿಯುತ್ತವಾಗಿ ನಿಂತಿದೆ. ಸಹಕಾರಿ ರಂಗ ಇನ್ನಷ್ಟು ಗಟ್ಟಿಯಾಗಿ ನಿಂತಾಗ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಕೆ.ಎಲ್.ಇ. ಸಂಸ್ಥೆಯ ಜೆ.ಎನ್.ಎಂ.ಸಿ. ಆವರಣ, ಡಾ. ಬಿ.ಎಸ್. ಜಿರಗಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಇವರ ವತಿಯಿಂದ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ …
Read More »ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ
ಗೋಕಾಕ- ಯುವ ನಾಯಕರು, ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕರೂ ಆಗಿರುವ ಸರ್ವೋತ್ತಮ ಜಾರಕಿಹೊಳಿ ಅವರ ೨೪ ನೇ ಹುಟ್ಟು ಹಬ್ಬದ ನಿಮಿತ್ತ ಅವರ ಅಭಿಮಾನಿ ಕಾರ್ಯಕರ್ತರು ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬೆಳಗಿನ ಉಪಹಾರ ವಿತರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ ಮಾತನಾಡಿ, ಸರ್ವೋತ್ತಮ ಜಾರಕಿಹೊಳಿ ಅವರು ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ …
Read More »