Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

೨೦೨೨ರ ನೂತನ “ನ್ಯೂ ಗೋಕಾಕ” ದಿನದರ್ಶಿಕೆ ಬಿಡುಗಡೆಗೊಳಿಸಿದ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಗೋಕಾಕ: ನ್ಯೂ ಗೋಕಾಕ ತಂಡದಿಂದ ಹೊರತರಲಾದ ೨೦೨೨ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರು ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೇನ್ನವರ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಲಕ್ಷ್ಮಣ ಖಡಕಭಾಂವಿ, ನ್ಯೂ ಗೋಕಾಕ ತಂಡದ ಅಕ್ಷಯ ಕುರಬೇಟ, ವಿನಾಯಕ ಬನ್ನಿಶೆಟ್ಟಿ, ಹರ್ಷವರ್ಧನ ಚಿಗಡೊಳ್ಳಿ ಉಪಸ್ಥಿತರಿದ್ದರು.

Read More »

ಕೇಂದ್ರ  ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು : ಸತೀಶ್ ಜಾರಕಿಹೊಳಿ

ರಾಯಬಾಗ : ಕೇಂದ್ರ  ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವಂತ ಪ್ರಯತ್ನ ಮಾಡಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು. ಅವುಗಳೇ ಚುನಾವಣೆ ಗೆಲ್ಲಲು ನಮಗೆ ಶ್ರೀರಕ್ಷೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಡಿ.27ರಂದು ನಡೆಯುವ ತಾಲ್ಲೂಕಿನ ಚಿಂಚಲಿ, ಹಾರೋಗರಿ ಪಟ್ಟಣ ಪಂಚಾಯ್ತಿ ಚುನಾವಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯನ್ನು ಉದ್ದೇಶೀಸಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 3ರಿಂದ 4 ಲಕ್ಷ …

Read More »

ಮುನವಳ್ಳಿ ಪುರಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪರ ಸತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ

ಸವದತ್ತಿ : ಈಗಾಗಲೇ ಬಿಜೆಪಿ ಸರ್ಕಾರದ ಸ್ಪೀಡ್ ಅನ್ನ ಕಡಿಮೆ ಮಾಡಿದ್ದೇವೆ. ಇನ್ನೂ 18 ತಿಂಗಳ ಅವಧಿಯಲ್ಲಿ ಮತ್ತಷ್ಟು ಸ್ಪೀಡ್ ಕಡಿಮೆ ಮಾಡಲಿದ್ದೇವೆ. ಪಟ್ಟಣ ಪಂಚಾಯ್ತಿ  ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದರು. ಮುನವಳ್ಳಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ನಡೆದ ಪ್ರಚಾರ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಆನಂದ ಮಾಮನಿ ಅವರು ಸತತ ಮೂರು ಬಾರಿ ಶಾಸಕರಾಗಿದ್ದಾರೆ. ಮುನವಳ್ಳಿ …

Read More »

ಚರ್ಚೆಯೇ ಆಗದಿರುವ ಬಿಲ್ ಪಾಸ್ ಮಾಡಿ, ಜನರ ದಾರಿ ತಪ್ಪಿಸುವ ಕೆಲಸ ಸರ್ಕಾರದ್ದು : ಸತೀಶ್ ಜಾರಕಿಹೊಳಿ

ಗೋಕಾಕ : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನ ( ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2021)  ಗುರುವಾರ ಅಂಗೀಕಾರ ಮಾಡಿದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತ ಪಡಿಸಿದರು. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಯಾವಾಗಲೂ ತರಾತುರಿಯಲ್ಲಿ ಅಂಗೀಕಾರ ಮಾಡುತ್ತಾರೆ. ಬೆಳಗ್ಗೆ ಬಿಲ್ ತಂದು, ಸಂಜೆ ಪಾಸ್  ಮಾಡುತ್ತಾರೆ. ವಿಧಾನಸಭೆಯಲ್ಲಿ ಚರ್ಚೆಯಾಗಬೇಕು, ಚರ್ಚೆಯೇ ಆಗದಿರುವ ಬಿಲ್ ಪಾಸ್ ಮಾಡಿ, ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ …

Read More »

ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು ಆಯ್ಕೆಯಾಗಲು …

Read More »

ಜೋಡೆತ್ತು ಖಾಲಿ ಗಾಡಾ ಸ್ಪರ್ಧೆಗೆ ರಾಹುಲ್ ಜಾರಕಿಹೊಳಿ ಚಾಲನೆ

ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದಲ್ಲಿ ಬಸವಣ್ಣ ದೇವರ ಕಾರ್ತಿಕೋತ್ಸವದ ಅಂಗವಾಗಿ  ಗುರುವಾರ  ಏರ್ಪಡಿಸಿದ್ದ ಜೋಡೆತ್ತಿನ ಖಾಲಿ ಗಾಡಾ ಸ್ಪರ್ಧೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ  ಚಾಲನೆ ನೀಡಿದರು.   ಕುಂದರಗಿಯ ಅಡವಿಸಿದ್ದೇಶ್ವರ ಮಠದ ಅಮರಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಡಿಸೆಂಬರ್ 22ರಿಂದ 25ರವೆಗೆ ಕಾರ್ತಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, ಪ್ರತಿ‌ದಿನವೂ ವಿವಿಧ ಸ್ಪರ್ಧೆಗಳಾದ ಜೋಡು ಎತ್ತಿನ ಖಾಲಿ ಗಾಡಾ ಓಡಿಸುವ , ಟಗರು ಕಾಳಗ, ರಂಗೋಲಿ ಸ್ಪರ್ಧೆ, ಸ್ಲೋ ಸೈಕಲ್ ಸ್ಪರ್ಧೆ, …

Read More »

ರಾಷ್ಟ್ರೀಯ ಗಣಿತ ದಿನ ಆಚರಣೆಯ ಕಾರ್ಯಕ್ರಮವನ್ನ ಉದ್ಘಾಟಿಸಿದ ಯುವ ನಾಯಕ ಸನತ್ ಜಾರಕಿಹೊಳಿ

ಗೋಕಾಕ : ಗಣಿತ ವಿಷಯದಲ್ಲಿ ಫೆಲೋಸಿಫ್ ಪಡೆದ ಪ್ರಥಮ ಭಾರತೀಯ ಶ್ರೀನಿವಾಸ ರಾಮಾನುಜ : ಬಿ ಕೆ ಕುಲಕರ್ಣಿ ಗಣಿತ ತಜ್ಞ ಶ್ರೀನಿವಾಸ ರಾಮಾನುಜ ಅವರು ಗಣಿತ ಲೋಕಕ್ಕೆ ನೀಡಿದ ಕೊಡುಗೆಯ ನೆನಪಿಗಾಗಿ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಎಸ್.ಎಲ್.ಜೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಿ ಕೆ ಕುಲಕರ್ಣಿ ಹೇಳಿದರು . ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಆಚರಿಸಲಾದ ರಾಷ್ಟ್ರೀಯ ಗಣಿತ ದಿನ …

Read More »

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ,ಸಂಧಾನ ಸಫಲ!

ಬೆಳಗಾವಿ : ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ ಹಾಕಿದ್ದು, ಅಧ್ಯಕ್ಷ ರಮೇಶ ಕತ್ತಿ ಮತ್ತು ಬ್ಯಾಂಕಿನ ನಿರ್ದೇಶಕರುಗಳ ಮಧ್ಯೆ ನಡೆದ ಸಂಧಾನ ಸಭೆ ಯಶಸ್ವಿಯಾಗುವ ಮೂಲಕ ಅಧ್ಯಕ್ಷ ಹುದ್ದೆಯಲ್ಲಿಯೇ ಕತ್ತಿ ಅವರನ್ನು ಮುಂದುವರೆಯಲಿದ್ದಾರೆ. ಬುಧವಾರ ಸಂಜೆ ನಗರದ ಖಾಸಗಿ ಹೊಟೇಲ್‌ನಲ್ಲಿ ಜರುಗಿದ ಸಂಧಾನ ಸಭೆಯಲ್ಲಿ ರಮೇಶ ಕತ್ತಿ ಮತ್ತು ನಿರ್ದೇಶಕರುಗಳ ಮಧ್ಯೆ ಮೂಡಿದ್ದ ಬಿರುಕು ಸಂಪೂರ್ಣ ನಿವಾರಣೆಯಾಗಿದ್ದು, ಕತ್ತಿ …

Read More »

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದಂತ ಸಂವಿಧಾನದಿಂದ ನಾವೆಲ್ಲರೂ ಬೆಳೆಯಲು ಅನುಕೂಲ : ಸತೀಶ್ ಜಾರಕಿಹೊಳಿ

ಬೆಳಗಾವಿ : ದೇಶದಲ್ಲಿ ಕೆಲ ರಾಜ್ಯಗಳಲ್ಲಿ ಅಲ್ಪಸಂಖ್ಯಾತರು ಹಾಗೂ ದಲಿತರ ಸ್ಥಿತಿ ಶೋಚನೀಯವಾಗಿದೆ. ಸ್ವಾತಂತ್ರ್ಯ ಬಂದು 74 ವರ್ಷಗಳ ಕಳೆದರೂ ಇಂದಿಗೂ ಕುದುರೆ ಮೇಲೆ ಕುಳಿತು ಮದುವೆಯಲ್ಲಿ ಸಂಭ್ರಮಿಸುವ ಹಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದರು. ಇಲ್ಲಿನ ಗಾಂಧಿಭವನದಲ್ಲಿ ಬುಧವಾರ ಅಲ್ಪಸಂಖ್ಯಾತ ಸಮಿತಿ ಆಶ್ರಯದಲ್ಲಿ ನಡೆದ ನಮ್ಮ ನಡೆ ಐಕ್ಯತೆ ಮತ್ತು ವಿಶ್ವಾಸದ ಕಡೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಲ್ಪ ಸಂಖ್ಯಾತರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ …

Read More »

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ್ : ಇತ್ತೀಚೆಗೆ ಗಂಗಾವತಿಯಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಪ್ರತಿನಿಧಿಸಿ, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಚೆಕ್ ಮೂಲಕ  ಧನ ಸಹಾಯ ಮಾಡಿದರು. ಗೋಕಾಕದ ಕರಾಟೆ ಪಟುಗಳಾದ ಕಿರಣ್ ಹೊರಟ್ಟಿ ( ಪ್ರಥಮ), ಅಬ್ಬನ್ ಸಾಬ್ ಮುಲ್ಲಾ( ದ್ವಿತಿಯ), ವಿಷ್ಟು ಮಾವರ್ಕರ್ (ತೃತಿಯ) ಸ್ಥಾನ ಪಡೆದಿದ್ದಾರೆ. ಡಿ.24,25ರಂದು ಹರಿಯಾಣದಲ್ಲಿ ನಡೆಯುವ ಕರಾಟೆ ಸ್ಪರ್ಧೆಯಲ್ಲಿ ರಾಜ್ಯದಿಂದ …

Read More »