Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!

ಗೋಕಾಕ: ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿಯನ್ನು ಆಚರಿಸುತ್ತಿದ್ದು, ನಮ್ಮಲ್ಲಿರುವ ದುಷ್ಟ ಆಲೋಚನೆ ಹಾಗೂ ದುಶ್ಚಟಗಳಿಂದ ದೂರವಿದ್ದು, ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಮರಾಠಗಲ್ಲಿಯಲ್ಲಿ ನವರಾತ್ರಿ ಉತ್ಸವ ಮಂಡಳಿಯವರು ಆಯೋಜಿಸಿದ್ದ ನವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. ಅವುಗಳು ಪ್ರೀತಿ ವಿಶ್ವಾಸದ ಸಂದೇಶವನ್ನು ನಮಗೆ ನೀಡುತ್ತವೆ. ಇವುಗಳ ಆಚರಣೆಯಿಂದ ನಾವೆಲ್ಲರೂ ದೇವರ …

Read More »

ಹಾನಗಲ್ ನಿಂದ ದೇಶಕ್ಕೆ ಸಂದೇಶ ಹೋಗಲಿ: ಸತೀಶ ಜಾರಕಿಹೊಳಿ ಕರೆ

ಹಾನಗಲ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತಕ್ಷೇತ್ರದ ವಿವಿಧೆಡೆ ಇಂದು ಬಿರುಸಿನ  ಪ್ರಚಾರ ನಡೆಸಿದರು. ಮತಕ್ಷೇತ್ರದ ಮಾರನಬೀಡ, ಬೈಚವಳ್ಳಿ ಹಾಗೂ ಸಾವಿಕೇರಿ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಅವರು ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಮತಯಾಚನೆ ಮಾಡಿದರು. ಶ್ರೀನಿವಾಸ್ ಮಾನೆ ಯೋಗ್ಯ ಅಭ್ಯರ್ಥಿ: ಸಾವಿಕೇರಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸತೀಶ ಅವರು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಯೋಗ್ಯ ಅಭ್ಯರ್ಥಿಯಾಗಿದ್ದಾರೆ. ಒಬ್ಬ ಯೋಗ್ಯ ಅಭ್ಯರ್ಥಿಯನ್ನು ಕಳೆದುಕೊಳ್ಳುವುದರಿಂದ …

Read More »

ಸತೀಶ ಶುಗರ್ಸ್: ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಗೋಕಾಕ: ಸಮೀಪದ ಹುಣಶ್ಯಾಳ ಪಿ.ಜಿ. ಯ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ 2021-22ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಶುಕ್ರವಾರ ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಸಂಸ್ಥೆಯ ಚೇರಮನ್‍ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಪ್ರದೀಪಕುಮಾರ ಇಂಡಿ ಅವರು ಮಾತನಾಡಿ, ಜಿಲ್ಲೆಯ ಸತೀಶ ಶುಗರ್ಸ ಕಾರ್ಖಾನೆಯ ರೈತ ಬಾಂಧವರು ಪ್ರಸಕ್ತ ಹಂಗಾಮಿನ ಮೊದಲ ದಿನವೇ 1253 …

Read More »

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ.!

ಗೋಕಾಕ: ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ಎಂಬ ಫಲ ಸಿಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರಬರ ದಡ್ಡಿಯ ಶ್ರೀ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಕಮೀಟಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಭಕ್ತಿ ಎಂಬುದು ಮನುಷ್ಯನಲ್ಲಿ ಇದ್ದರೆ ಸಾಕು. ಪ್ರತಿ ದಿನ …

Read More »

ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ: ಹೊನಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಮೂರ್ತಿ ಪ್ರತಿಷ್ಠಾಪಿಸಲು ಕಟ್ಟೆ ಹಾಗೂ ಸುತ್ತಲೂ ಉದ್ಯಾನ ನಿರ್ಮಿಸಲಾಗುತ್ತಿದ್ದು, ಇದಕ್ಕೆ ರಾಹುಲ್ ಅವರು ಇಂದು ಪೂಜೆ ನೆರವೇರಿಸಿದರು. ಈ ಕಾಮಗಾರಿಗೆ ಕೆಲವು ತಿಂಗಳ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದ್ದರು. ಕಾಮಗಾರಿಗೆ ಈಗಾಗಲೇ ಅಡಿಪಾಯ ಹಾಕಲಾಗಿದ್ದು, …

Read More »

ಹಾನಗಲ್: ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಹಾನಗಲ್: ಮತಕ್ಷೇತ್ರದ ತಿಳವಳ್ಳಿ ಗ್ರಾಮದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಸತೀಶ ಅವರು ಕಾರ್ಯಕರ್ತರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸತೀಶ ಅವರನ್ನು ಸನ್ಮಾನಿಸಿದರು. ಹಾನಗಲ್ ನಲ್ಲಿ ಸೆಕೆಂಡ್ ಡೋಸ್ ಲಸಿಕೆ ಹಾಕೋಣ: ಮಸ್ಕಿಯಲ್ಲಿ ಈಗಾಗಲೇ ಫಸ್ಟ್ ಡೋಸ್ ಲಸಿಕೆ ಆಗಿದೆ. ಈಗ ಹಾನಗಲ್ ನಲ್ಲಿ ಸೆಕೆಂಡ್ ಡೋಸ್ ಲಸಿಕೆ ಯಶಸ್ವಿಯಾಗಿ ಹಾಕಬೇಕಿದೆ. ಎರಡು ಡೋಸ್ …

Read More »

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ’: ಕುಮಾರಸ್ವಾಮಿಗೆ ಸತೀಶ ಜಾರಕಿಹೊಳಿ ತಿರುಗೇಟು

ಹಾನಗಲ್: ಸಮ್ಮಿಶ್ರ ಸರ್ಕಾರ ಪತನವಾಗಿ ಈಗ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಅಪ್ರಸ್ತುತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹಾನಗಲ್ ನಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಉಪಚುನಾವಣೆ ಪ್ರಚಾರ ನಡೆಸುತ್ತಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ‘ಕಾಂಗ್ರೆಸ್ ಮುಳುಗುವ ಹಡಗು’ …

Read More »

ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಗುತ್ತಿಗೆದಾರರು, ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಅಲತಗಾ ಗ್ರಾಮದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಲತಗಾ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ, ಮೂರು ಅಂಗನವಾಡಿಗಳ ದುರಸ್ತಿ ಕಾಮಗಾರಿ ಹಾಗೂ ಸರ್ಕಾರಿ ಶಾಲೆಯ ಕೊಠಡಿಗಳ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 35 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸತೀಶ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ …

Read More »

ಒಂದು ವರ್ಷದಿಂದ ನಗರದ ಅಭಿವೃದ್ಧಿ ಕುಂಠಿತ; ಬಿಜೆಪಿ ಶಾಸಕರೇ ಸ್ಪಷ್ಟೀಕರಣ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ಬಿಜೆಪಿಯ ಇಬ್ಬರು ಶಾಸಕರ ಅಸಹಕಾರದಿಂದ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಈ ಬಗ್ಗೆ ಶಾಸಕರೇ ಸ್ಪಷ್ಟೀಕರಣ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಭಿವೃದ್ಧಿ ಕುಂಠಿತ: ಸ್ಥಳೀಯ ಇಬ್ಬರು ಶಾಸಕರು ಅಧ್ಯಕ್ಷರಿಗೆ …

Read More »

ಪೂರ್ವಭಾವಿ ಸಭೆ: ಕರಾಳ ದಿನಾಚರಣೆಗೆ ಅವಕಾಶ ಇಲ್ಲ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಅ.12) ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರಾಳ ದಿನ ಆಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ರಾಜ್ಯೋತ್ಸವ ಮೆರವಣಿಗೆಗೆ …

Read More »