Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಹೇಳುವವರಿಲ್ಲ ಕೇಳುವವರಿಲ್ಲ ಜನತಾ ಪ್ಲಾಟ್ ಜನರ ಸಮಸ್ಯೆ!

ಗೋಕಾಕ:  ತಾಲೂಕಿನ ಕೊಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕಟ್ಟಿ ಗ್ರಾಮದ ಜನತಾ ಪ್ಲಾಟ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಬೆಳಗಾದರೆ ಅಲ್ಲಿಯ ಜನ ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಶಪಿಸುವಂತಾಗಿದೆ . ಚರಂಡಿಯ ನೀರು ಸರಿಯಾದ ಚರಂಡಿಯ ವ್ಯವಸ್ಥೆ ಇಲ್ಲದೆ ಎಲ್ಲೆಂದರಲ್ಲಿ ಹರಿದು ಕೊಳಕು ವಾಸನೆ ಹಾಗೂ ಮಾರಕ ರೋಗಗಳಿಂದ ಜನರು ತತ್ತರಿಸುತ್ತಿದ್ದಾರೆ. ದಿನ ಬೆಳಗಾದರೆ ಆಸ್ಪತ್ರೆಗೆ ಡೆಂಗ್ಯೂ ಹಾಗೂ ಮಲೆರಿಯಾದಂತ ರೋಗದಿಂದ ಬಳಲುತ್ತಿದ್ದ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ.ಸರಿಯಾದ ಕರೆಂಟ್ ವ್ಯವಸ್ಥೆ ಇಲ್ಲದೆ …

Read More »

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ: ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಅಲ್ಲಿನ ವ್ಯವಸ್ಥೆಯ ಕುರಿತು ಸತೀಶ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳ ಕುರಿತು ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸ್ಥಳದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ರೋಗಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಒದಗಿಸಿ ಎಂದು ತಿಳಿಸಿದರು. ಆಸ್ಪತ್ರೆಯ …

Read More »

ಇಡೀ ಜೀವನ ಸಮಾಜ ಸೇವೆಗಾಗಿ: ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯವಾಗುತ್ತಿದೆ. ಜತೆಗೆ ಸಮುದಾಯ ಭವನಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿದರೆ, ಬಡವರಿಗೂ ತುಂಬಾ ಅನುಕೂಲವಾಗಲಿದೆ. ಪ್ರತಿ ಸಮಸ್ಯೆಗಳಿಗೂ ಸತೀಶ ಜಾರಕಿಹೊಳಿ ಫೌಂಡೇಶನ್ ಕೈ ಜೋಡಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಜಾಧವ್ ನಗರ ನಿವಾಸದಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು (ಗುರುವಾರ) ದೇವಸ್ಥಾನ, ಮಸ್ಜಿದ್ , ಚರ್ಚ್ ಟ್ರಸ್ಟಿಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ …

Read More »

ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ: ತಾಲೂಕಿನ ಕೇದನೂರ ಹಾಗೂ ಮಣ್ಣಿಕೇರಿಯಲ್ಲಿ ನಿನ್ನೆ (ಬುಧವಾರ) ಏರ್ಪಡಿಸಿದ್ದ ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿಯವರು ಚಾಲನೆ ನೀಡಿದರು. ಕೇದನೂರಿನಲ್ಲಿ ಮಾತನಾಡಿದ ರಾಹುಲ್ ಅವರು, ಆರೋಗ್ಯವೇ ಶ್ರೇಷ್ಠ ಸಂಪತ್ತಾಗಿದ್ದು ಎಲ್ಲರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಗ್ರಾಮೀಣ ಭಾಗದ ಯುವಕರಲ್ಲಿ ಸಾಕಷ್ಟು ಪ್ರತಿಭೆ ಇದೆ. ಆದರೆ, ಪ್ರೋತ್ಸಾಹದ ಕೊರೆತೆಯಿಂದ ಅವರು ಬೆಳೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಗ್ರಾಮೀಣ …

Read More »

ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಕೆಎಂಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು ಬೇಗನೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಕಳೆದ ಸೋಮವಾರದಂದು ಮೂಡಲಗಿ ಹಾಗೂ ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂತ್ರಸ್ಥ ಕುಟುಂಬಸ್ಥರಿಗೆ ಯಾವುದೇ ತೊಂದರೆಯಾಗದಂತೆ ಕರ್ತವ್ಯ …

Read More »

ಪೋಲಿಸರ ಭರ್ಜರಿ ಬೇಟೆ.! ಅಂದರ್ ಬಾಹರ್ ಆಟಗಾರರು ಅಂದರ್.!

ಗೋಕಾಕ: ಮಂಗಳವಾರ ರಾತ್ರಿ ಭರ್ಜರಿ ಬೇಟೆಯಾಡಿದ ಗೋಕಾಕ ಪೋಲಿಸರು ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೋಡಗಿದ್ದ ೨೬ಜನರು ಬಂಧಿಸಿ, ೧ಲಕ್ಷಕ್ಕೂ ಹೆಚ್ಚು ಹಣ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಪ್ರೋಬೇಷನರಿ ಡಿವೈಎಸ್‌ಪಿ ಡಿ ಎಚ್ ಮುಲ್ಲಾ ಮತ್ತು ಸಿಪಿಐ ಗೋಪಾಲ ರಾಠೋಡ ನೇತ್ರತ್ವದಲ್ಲಿ ದೀಪಾವಳಿ ಕಡೆಯ ಪಾಡ್ಯ ಹಬ್ಬದ ದಿನದಂದು ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೋಡಗಿದ್ದವರನ್ನು ಬಂಧಿಸಿದ್ದಾರೆ. ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ. …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಮಾಲೋಚನೆ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ನಂತರ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರಲಿಲ್ಲ. ಹೀಗಾಗಿ, ಸತೀಶ ಜಾರಕಿಹೊಳಿಯವರು ಇಂದು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಮೇಲ್ಮನೆ ಚುನಾವಣೆಯನ್ನು ಯಾವ …

Read More »

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ. ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »

ಕರ್ನಾಟಕ ವಿಧಾನಪರಿಷತ್ತಿನ ಚುನಾವಣೆಗೆ ದಿನಾಂಕ ನಿಗದಿ!

ಬೆಂಗಳೂರು: ದಿನಾಂಕ 05-01-2022ರಂದು ಕೊನೆಗೊಳ್ಳಲಿರುವಂತ ಕರ್ನಾಟಕ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ದಿನಾಂಕ 10-12-2021ರಂದು ಚುನಾವಣೆ ನಿಗದಿ ಪಡಿಸಲಾಗಿದೆ. ದಿನಾಂಕ 14-12-2021ರಂದು ಚುನಾವಣೆಯ ಮತಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗವು ( Election Commission of India ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-11-2021ರಂದು ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ( Legislative Council Election ) …

Read More »

ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ‘ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನದ ಬದ್ಧತೆ ಇರಬೇಕು’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಸೋಮವಾರದಂದು ಕನ್ನಡಪರ ಸಂಘಟನೆಗಳ ಆಶ್ರಯದೊಂದಿಗೆ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣ ಗೆ ನಿಮಿತ್ಯ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅತ್ಯಂತ ಪ್ರಾಚೀನ ಮತ್ತು ಶಾಸ್ತ್ರೀಯ ಭಾಷೆಯಾಗಿರುವ ಕನ್ನಡ ನಾಡಿನ ಹಿರಿಮೆಯು ವಿಶ್ವವ್ಯಾಪ್ತಿಯಾಗಿ ಬೆಳೆದಿದೆ ಎಂದು …

Read More »