Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕ್ರೀಡಾಪಟುಗಳು ಗ್ರಾಮೀಣ ಕ್ರೀಡೆಗಳಿಗೆ ಒತ್ತು ನೀಡಬೇಕು: ಯುವ ನಾಯಕ ರಾಹುಲ್ ಜಾರಕಿಹೊಳಿ

ಮೂಡಲಗಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ತಾಲೂಕಿನ ರಾಜಾಪುರದಲ್ಲಿ ಇಂದು ಏರ್ಪಡಿಸಿದ್ದ ಟಗರಿನ ಕಾಳಗ ಪಂದ್ಯಾವಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಟಗರಿನ ಕಾಳಗ ಪರಂಪರಾಗತವಾಗಿ ಸಾಗಿ ಬಂದಿರುವ ಕ್ರೀಡೆಯಾಗಿದೆ. ಇದನ್ನು ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಹೇಳಿದರು. ಕ್ರೀಡಾಪಟುಗಳು ಸಾಧನೆ ಮಾಡುವತ್ತಾ ಗಮನಹರಿಸಬೇಕು. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ಕೊಡಬೇಕು. ಸತತ ಪ್ರಯತ್ನದಿಂದ ಸಾಧನೆಯತ್ತ ಮುನ್ನುಗ್ಗಬೇಕು ಎಂದರು.   ತಂದೆ ಸತೀಶ …

Read More »

ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಎಂದು ಘೋಷಣೆ.

ಬೆಂಗಳೂರು : ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಮಳೆಹಾನಿ, ಬೆಳೆಹಾನಿ, ಮೂಲಸೌಕರ್ಯಗಳಿಗೆ ಹಾನಿ, ಜೀವ ಹಾನಿ ಉಂಟಾಗಿದೆ. ಪ್ರವಾಹ ಪೀಡಿತ ತಾಲೂಕುಗಳಲ್ಲಿ ಮಾರ್ಗಸೂಚಿಯ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಾಂದರ್ಭಿಕ ರಜೆ ಕುರಿತಂತೆ ಪೊಲೀಸ್ …

Read More »

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಬೆನ್ನಲೆ;ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭ!

ಬೆಂಗಳೂರು,ಆ.11- ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಪಿಯುಸಿ ಪ್ರವೇಶ ಪ್ರಕ್ರಿಯೆಗೆ ಆರಂಭಗೊಂಡಿದ್ದು, ಆಗಸ್ಟ್ 31ರವರೆಗೆ ಮುಂದುವರಿಯಲಿದೆ. ಇದೇ ಸಮಯದಲ್ಲಿಯೇ ವಿದ್ಯಾರ್ಥಿಗಳು ತಮ್ಮ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆಗಸ್ಟ್ 16ರಿಂದ ಆನ್‍ಲೈನ್ ತರಗತಿಗಳು ಕೂಡ ಪ್ರಾರಂಭವಾಗಲಿವೆ. ಆಗಸ್ಟ್ 31ರ ನಂತರ ಪ್ರವೇಶ ಪಡೆದವರಿಗೆ ಇಲಾಖೆ ದಂಡ ವಿಧಿಸಲಿದೆ. ಸೆಪ್ಟೆಂಬರ್ 1ರಿಂದ 11ರವರೆಗೆ ಪ್ರವೇಶ ಪಡೆದವರಿಗೆ 670 ರೂ., ಸೆಪ್ಟೆಂಬರ್ 13ರಿಂದ 25ರವರೆಗೆ ಪ್ರವೇಶ ಪಡೆದವರಿಗೆ 2 ,890 ರೂ. ದಂಡ ವಿಧಿಸಲಾಗುತ್ತದೆ. ವಿದ್ಯಾರ್ಥಿಗಳು …

Read More »

ಗ್ರಾಮದ ಸ್ವಚ್ಚತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ: ಬಂತಿ

ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …

Read More »

ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು …

Read More »

ಶುಕ್ರವಾರ ದಿ. 13 ರಂದು ಗೋಕಾಕ ನಗರದ ಶ್ರೀ ಸಿದ್ದೇಶ್ವರ ಜಾತ್ರೆ

ಗೋಕಾಕ ಅ 11 : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ …

Read More »

ಬೆಳಗಾವಿ ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿ

ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಬೆಳಗಾಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್​ 3ರಂದು ಚುನಾವಣೆ ನಡೆಯಲಿದ್ದು ಸೆಪ್ಟೆಂಬರ್​ 6ನೇ ತಾರೀಖಿನಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಆಗಸ್ಟ್​ 6ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹಾಗೂ ಆಗಸ್ಟ್​ 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ಕಳೆದ 2 ವರ್ಷಗಳಿಂದ ಮಹಾನಗರ ಪಾಲಿಕೆ ಚುನಾವಣೆ ನೆನೆಗುದಿಗೆ ಬಿದ್ದಿತ್ತು. ಇತ್ತ ಕಲಬುರಗಿ ಜಿಲ್ಲೆಯಲ್ಲಿಯೂ ಕಳೆದ 3 ವರ್ಷಗಳಿಂದ …

Read More »

ಸರ್ಕಾರಿ ಶಾಲೆಗಳ ನೂತನ ಕಟ್ಟಡ ಮತ್ತು ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ ಮತಕ್ಷೇತ್ರದ ವಿವಿಧ ಶಾಲೆಗಳಲ್ಲಿ 93 ಕೊಠಡಿಗಳ ನಿರ್ಮಾಣ; 2 ಕೋಟಿ ರೂ. ವೆಚ್ಚದಲ್ಲಿ ಶಾಲಾ ಕೊಠಡಿಗಳ ದುರಸ್ತಿ ಯಮಕನಮರಡಿ: ಶಾಸಕ ಸತೀಶ ಜಾರಕಿಹೊಳಿ ಅವರು ದಡ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬೆನಕನಹೊಳಿ, ನರಸಿಂಗಪೂರ, ದಡ್ಡಿ ಗುಡಗನಟ್ಟಿ ಹಾಗೂ ಬಿದರೆವಾಡಿ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಇಂದು ನೂತನ ಕಟ್ಟಡ ಹಾಗೂ ಕೊಠಡಿಗಳನ್ನು ಉದ್ಘಾಟಿಸಿದರು. ನಂತರ ಮಾನಗಾಂವ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡಿದರು. ನರಸಿಂಗಪೂರ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನ …

Read More »

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಬದಲಿ …

Read More »

ಜಿಪಂ. ಚುನಾವಣೆ ಗೆಲ್ಲುವಿಗಾಗಿ ನಿಮ್ಮ ಶಕ್ತಿ ಪ್ರದರ್ಶನ ಮಾಡಿ : ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕರಾದ ಪ್ರದೀಪ.ಎಂ.ಜೆ. ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸೋಮವಾರ ಅಧಿಕಾರ ಹಸ್ತಾಂತರಿಸಿ, ಸನ್ಮಾನಿಸಿದರು. ಬಳಿಕ ನೂತನ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ., ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು. ತದನಂತರ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಸತೀಶ್ ಜಾರಕಿಹೊಳಿ ಮಾತನಾಡಿದರು. ಸಧ್ಯದಲ್ಲೆ ಜಿಲ್ಲಾ ಪಂಚಾಯತ್ ಚುನಾವಣೆ …

Read More »