Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ

ಯಮಕನಮರಡಿ: ಮತಕ್ಷೇತ್ರದ ಚಿಕ್ಕಲದಿನ್ನಿ, ಗುಟಗುದ್ದಿ ಹಾಗೂ ಶಾಬಾಂದರ್ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 80 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು. ನಂತರ ಇಸ್ಲಾಂಪುರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರ ಅನುದಾನದಡಿ ನೂತನವಾಗಿ ನಿರ್ಮಿಸಿದ ಮಸೀದಿ ಹಾಗೂ ಶಾಲಾ ಕೊಠಡಿಯನ್ನು ರಾಹುಲ್ ಉದ್ಘಾಟನೆ ಮಾಡಿದರು. ಸಮಾಜದ ಮುಖಂಡರಾದ ಮೌಲಾಸಾಬ ದೇಸಾಯಿ ಸೇರಿ ಇನ್ನಿತರರು ಹಾಜರಿದ್ದರು. ಗ್ರಾಮದಲ್ಲಿ …

Read More »

ಡ್ರಗ್ಸ್ ಪ್ರಕರಣ; ಆಫ್ರೀಕನ್ ಪ್ರಜೆಗಳ ಗುಂಡಾ ವರ್ತನೆ: ಲಾಠಿ ಚಾರ್ಜ್.

ಬೆಂಗಳೂರು : ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿದ್ದಂತ ಆಫ್ರೀಕನ್ ಪ್ರಜೆಯೊಬ್ಬ ಸಾವನ್ನಪ್ಪಿದ್ದನು. ಈ ಪ್ರಕರಣ ಸಂಬಂಧ ಠಾಣೆಯ ಮುಂದೆ ಅನೇಕ ಆಫ್ರೀಕನ್ ಪ್ರಜೆಗಳು ಪೊಲೀಸರ ಹಲ್ಲೆಯಿಂದ ಸಾವನ್ನಪ್ಪಿರೋದಾಗಿ ಪ್ರತಿಫಟನೆ ನಡೆಸುತ್ತಿದ್ದರು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರಿಂದಾಗಿ, ಸ್ಥಳದಲ್ಲಿ ಬಿಗುವಿನ ವಾತಾವರಣ ಕೂಡ ಉಂಟಾಗಿತ್ತು. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮೂಲಕ, ಪ್ರತಿಭಟನಾ ನಿರತರನ್ನು ಚದುರಿಸಿದ ಘಟನೆ ನಡೆದಿದೆ. 5 ಗ್ರಾಂ ಎಂಡಿಎಂ …

Read More »

ದಡ್ಡಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾನ ಹಾನಿ ಪರಿಶೀಲಿಸಿದ ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿಪಂ ವ್ಯಾಪ್ತಿಯ ದಡ್ಡಿ, ಮೋದಗಾ, ಶೆಟ್ಟಿಹಳ್ಳಿ, ಧೋಂಡಗಟ್ಟಿ, ಕೋಟ ಹಾಗೂ ಸಲಾಮವಾಡಿ ಗ್ರಾಮಗಳಿಗೆ ತೆರಳಿ ಮಳೆ ಹಾಗೂ ಪ್ರವಾಹದಿಂದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ಪರಿಶೀಲನೆ …

Read More »

ಸಚಿವ ಸಂಪುಟ ರಚನೆ ಕಸರತ್ತು; ಹೊರಬಿತ್ತು ಸಂಭಾವ್ಯ ಪಟ್ಟಿ

ಬೆಂಗಳೂರು : ಸಚಿವ ಸಂಪುಟ ರಚನೆಗೆ ಸಂಬಂಧಿಸಿ ಪಕ್ಷದ ವರಿಷ್ಠರ ಭೇಟಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಲ್ಲಿಗೆ ತೆರಳಿರುವ ಬೆನ್ನಲ್ಲೆ ಸಚಿವರ ಸಂಭಾವ್ಯ ಪಟ್ಟಿಯೊಂದು ಹರಿದಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು -ಗೃಹ ಖಾತೆಯನ್ನು ತನ್ನಲ್ಲೆ ಉಳಿಸಿಕೊಳ್ಳಲಿದ್ದರೆ ಎನ್ನಲಾಗುತ್ತಿದ್ದು, ಉಪ ಮುಖ್ಯಮಂತ್ರಿಗಳಾಗಿ ಆರ್.ಅಶೋಕ್, ಬಿ.ಶ್ರೀರಾಮುಲು ಸ್ಥಾನ ಪಡೆಯಲಿದ್ದಾರೆ. ಗೋವಿಂದ ಕಾರಜೋಳ ಡಿಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅದೇರೀತಿ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ ಸಚಿವ ಸ್ಥಾನ ಉಳಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ರೇಣುಕಾಚಾರ್ಯ, ಎಸ್.ರಾಮದಾಸ್ …

Read More »

3ನೇ ಅಲೆ ಆತಂಕ; ಬೆಳಗಾವಿ ಗಡಿಯಲ್ಲಿ ಕಟ್ಟು ನಿಟ್ಟಿನ ತಪಾಸಣೆ.

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಗಡಿಯ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಅಲ್ಲಿಂದ ಬರುವವರಿಂದ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಅದು ಇಲ್ಲದಿದ್ದರೆ ಕೋವಿಡ್ ಡೋಸ್‌ ಪಡೆದಿರುವ ಬಗ್ಗೆ ಪ್ರಮಾಣಪತ್ರ ಪ್ರಸ್ತುತಪಡಿಸಬೇಕು. ಇವೆರಡೂ ಇಲ್ಲದಿದ್ದರೆ ಪ್ರವೇಶ ನೀಡುತ್ತಿಲ್ಲ. ಅಲ್ಲಿಂದಲೇ ವಾಪಸ್ ಕಳುಹಿಸಲಾಗುತ್ತಿದೆ. ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗಡಿಯ ವಿವಿಧೆಡೆ 22 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ ಕೊಗನೊಳ್ಳಿ ಟೋಲ್‌ನಾಕಾ ಬಳಿಯ ಚೆಕ್‌ಪೋಸ್ಟ್‌ನಲ್ಲಿ …

Read More »

ಕುರುಬ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ನೀಡಿ ರಾಮು ಕೋಣಿ ಒತ್ತಾಯ.

ಗೋಕಾಕ:-ರಾಜ್ಯ ರಾಜಕಾರಣ ಕೇಂದ್ರಿತವಾಗಿರುವುದು ಜಾತಿಯಲ್ಲಿಯೇ, ಜಾತಿ ಇಲ್ಲದೇ ರಾಜಕೀಯ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತದೆ ಅನ್ಯಮಾರ್ಗವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ಹೋರಾಟ ರಚನಾ ಸಮಿತಿ, ಗೋಕಾಕ ತಾಲೂಕಾ ಉಪಾಧ್ಯಕ್ಷ ರಾಮು ಕೋಣಿ ತಿಳಿಸಿದರು. ಹೌದು ರಾಜ್ಯ ಬಿಜೆಪಿಯಲ್ಲಿರುವ ಹಿಂದುಳಿದ ವರ್ಗಗಳ ಏಕೈಕ ನಾಯಕ ಈಶ್ವರಪ್ಪ ಅವರೊಂದಿಗೆ …

Read More »

ಕುರುಬ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಹಾಗೂ ಇನ್ನೂ ೩ ಜನರಿಗೆ ಸಚಿವ ಸ್ಥಾನ ನಿಡಲು ಒತ್ತಾಯ.

ಮುಗಳಖೋಡ:-ರಾಜ್ಯ ರಾಜಕಾರಣ ಕೇಂದ್ರಿತವಾಗಿರುವುದು ಜಾತಿಯಲ್ಲಿಯೇ, ಜಾತಿ ಇಲ್ಲದೇ ರಾಜಕೀಯ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತದೆ ಅನ್ಯಮಾರ್ಗವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ಹೋರಾಟ ರಚನಾ ಸಮಿತಿ, ಬೆಳಗಾವಿ ಜಿಲ್ಲೆಯ ಉಪಾಧ್ಯಕ್ಷ ಬಾಳು ತೇರದಾಳ ತಿಳಿಸಿದರು. ಹೌದು ರಾಜ್ಯ ಬಿಜೆಪಿಯಲ್ಲಿರುವ ಹಿಂದುಳಿದ ವರ್ಗಗಳ ಏಕೈಕ ನಾಯಕ ಈಶ್ವರಪ್ಪ ಅವರೊಂದಿಗೆ …

Read More »

ಮಹಾರಾಷ್ಟ್ರ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ

ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು …

Read More »

ಕುರುಬರ ಸಂಘದ ನೂತನ ಕಾರ್ಯಾಧ್ಯಕ್ಷರಿಂದ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ

ಗೋಕಾಕ: ಬೆಳಗಾವಿ ಜಿಲ್ಲೆಯ ಕುರುಬರ ಸಂಘದ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಅಮಸಿದ್ಧ ವಡೇರ ರವರು  ನಗರದ ಹಿಲ್ ಗಾರ್ಡನ್  ಕಚೇರಿಗೆ ಭೇಟಿ ನೀಡಿ,  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ  ಕೃತಜ್ಞತೆ ಸಲ್ಲಿಸಿ, ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಶಿವು ಕಿಲಾರಿ,  ವಿಠ್ಠಲ ಮುರಕಿಬಾವಿ, ಲಕ್ಷ್ಮಣ ಅಲಕನೂರ,  ಉದಯ ಛಪರಿ, ಅಲ್ಲಪ್ಪಾ ಗಣೆಶವಾಡಿ, ಮಾದೇವ ವಡೇರ, ಯಮನಪ್ಪ ವಡೇರ, ನಿಂಗಪ್ಪಾ ವಡ್ಡರಗಾಂವಿ,  ವಿನಾಯಕ ಕಟ್ಟಿಕಾರ ಹಾಗೂ ಇತರರು …

Read More »

ಕೊರೊನಾ 3ನೇ ಅಲೆ ಆತಂಕ; ಕರ್ನಾಟಕ ರಾಜ್ಯ ಸರ್ಕಾರ ಹೈ ಅಲರ್ಟ್ ಸೂಚನೆ.

ಬೆಂಗಳೂರು: 8 ಜಿಲ್ಲೆಗಳಲ್ಲಿ ಕೊವಿಡ್ ಸ್ಥಿತಿಗತಿ ಬಗ್ಗೆ ಸಭೆ ನಡೆಸಿದ್ದೇನೆ. 2ನೇ ಅಲೆಯಲ್ಲೂ ಕೇರಳದಿಂದಲೇ ಸೋಂಕು ಹೆಚ್ಚಾಗಿತ್ತು. ಹೀಗಾಗಿ ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಗಳಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಸೂಚಿಸಿದ್ದೇನೆ. ವ್ಯಾಕ್ಸಿನ್‌ ನೀಡುವುದನ್ನೂ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಕೊವಿಡ್ ಹೆಚ್ಚಿರುವ ಜಿಲ್ಲೆಗಳ ಜತೆ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯಕ್ಕೆ ವ್ಯಾಕ್ಸಿನ್ ಪ್ರಮಾಣ ಹೆಚ್ಚಿಸುವುದಾಗಿ ಕೇಂದ್ರ ಭರವಸೆ ನೀಡಿದೆ. ಕೇಂದ್ರ ಆರೋಗ್ಯ …

Read More »