Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ; ಮಧ್ಯಂತರ ಚುನಾವಣೆ ನಡೆದರೂ ನಡೆಯಬಹುದು: ಸತೀಶ್ ಜಾರಕಿಹೊಳಿ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ …

Read More »

ಸಿಸಿಬಿ ಇನ್‌ಸ್ಪೆಕ್ಟರ್ ಸೋಗಿನಲ್ಲಿ 10 ಲಕ್ಷ ರೂ. ಪಡೆದು ವಂಚನೆ!

ಬೆಂಗಳೂರು: ಜಮೀನು ವ್ಯಾಜ್ಯ ಸರಿಪಡಿಸುವುದಾಗಿ ಸಿಸಿಬಿ ಇನ್‌ಸ್ಪೆಕ್ಟರ್ ಸೋಗಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಿಂದ 10 ಲಕ್ಷ ರೂ. ಪಡೆದು ವಂಚಿಸಿದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಜಯನಗರದ ನಿವಾಸಿ ವೆಂಕಟೇಶ್ ಬಂಧಿತ. ಜೆಪಿ ನಗರ ನಿವಾಸಿ ನಾರಾಯಣ್ (88) ಕೊಟ್ಟ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಜಯನಗರ ಪೊಲೀಸರು ವೆಂಕಟೇಶ್‌ನ್ನು ಬಂಧಿಸಿದ್ದಾರೆ. ದೂರುದಾರ ನಾರಾಯಣ್ ನಗರದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ತಾವರೆಕೆರೆ ಹೋಬಳಿ ನರಸಿಂಹಪುರ ಗ್ರಾಮದಲ್ಲಿ 11 ಎಕರೆ …

Read More »

ಭಾರಿ ಮಳೆಯಿಂದ ಮಹಾರಾಷ್ಟ್ರದಲ್ಲಿ ಎರಡು ಕಡೆ ಭೂಕುಸಿಕ,23ಜನ ಸಾವು!

ಮುಂಬೈ : ಭಾನುವಾರ ಮುಂಜಾನೆ ಭಾರಿ ಮಳೆಯಿಂದಾಗಿ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಜಲಾವೃತವಾಯಿತು, ಇದು ನಗರದ ಹಲವಾರು ಭಾಗಗಳಲ್ಲಿ ದೈನಂದಿನ ಪ್ರಯಾಣಿಕರ ಸಂಚಾರದ ಮೇಲೆ ಪರಿಣಾಮ ಬೀರಿತು. ಭಾರಿ ಮಳೆಯಿಂದಾಗಿ ರೈಲ್ವೆ ಹಳಿಗಳು ಮತ್ತು ಬೀದಿಗಳು ಸಹ ಜಲಾವೃತವಾಗಿದ್ದವು. ಆದಾಗ್ಯೂ, ಬುಧವಾರದಿಂದ ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾದ ನಂತರ, ಕಡಿಮೆ ಉಬ್ಬರವಿಳಿತ ಪ್ರಾರಂಭವಾಗುತ್ತಿದ್ದಂತೆ ಅನೇಕ ಸ್ಥಳಗಳಲ್ಲಿ ನೀರು ಕಡಿಮೆಯಾಗಲು ಪ್ರಾರಂಭಿಸಿತು. ಭಾರೀ ಮಳೆಯ ಹಿನ್ನೆಲೆಯಲ್ಲಿ …

Read More »

ಸ್ಮಾರ್ಟ್ ಸಿಟಿ ಅಧಿಕಾರಿಗಳ ನಿರ್ಲಕ್ಷ್ಯ,ಬೆಳಗಾವಿಯಲ್ಲಿ ವೃದ್ಧನ ಬಲಿ!

ಬೆಳಗಾವಿ : ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯಕ್ಕೆ ವೃದ್ಧರೊಬ್ಬರು ಬಲಿಯಾದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣ ಎದುರು ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿ ಮೆಹಮುದ್ ಅಬ್ದುಲ್ ದಸ್ತಗೀರ್ ಮುಲ್ಲಾ(65) ಮೃತ ದುರ್ದೈವಿಯಾಗಿದ್ದಾರೆ. ರಸ್ತೆ ದಾಟುವಾಗ ಆಯತಪ್ಪಿ ನಿರ್ಮಾಣ ಹಂತದ ಡಿವೈಡರ್ ಮೇಲೆ ಬಿದ್ದು ಮೆಹಮುದ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಿರ್ಮಾಣ ಹಂತದ ಡಿವೈಡರ್ ನಿರ್ಮಿಸಲು ಹಾಕಲಾಗಿದ್ದ ಕಬ್ಬಿಣದ ಸರಳುಗಳ ಮೇಲೆ ಮೆಹಮುದ್ ಬಿದ್ದಿದ್ದರು. ತೀವ್ರ …

Read More »

ಕರಾವಳಿ ಭಾರಿ ಮಳೆ, ಗುಡ್ಡ ಕುಸಿತ ರೈಲು ಸಂಚಾರಕ್ಕೆ ತಡೆ!

ಪುತ್ತೂರು : ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ‌ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕುಮಾರಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕುಮಾರಧಾರಾ ನದಿಯು ಧುಮ್ಮಿಕ್ಕಿ ಹರಿಯಲಾರಂಭಿಸಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.‌ ನಿನ್ನೆ ಈ ಭಾಗದಲ್ಲಿ ಮಳೆಯ ಪ್ರಮಾಣ ಕೊಂಚ ಇಳಿಮುಖವಾದ ಕಾರಣ ಮುಳುಗಡೆಯಾಗಿದ್ದ …

Read More »

ರಸ್ತೆಯಲ್ಲಿ ಗುಂಡಿ ತಗ್ಗುಗಳ ಮಹಾಪುರ; ಕಣ್ಣ್ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು.

ಬೀದರ್ : ಅವಳಿ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಜನರು ಸಂಚರಿಸಲು ಹರಸಾಹಸ ಪಡಬೇಕಾಗಿದೆ. ಗದಗ-ಬೆಟಗೇರಿಯ ಜನ ಜೀವ ಅಂಗೈಯಲ್ಲಿ ಹಿಡಿದು ಪ್ರತಿನಿತ್ಯ ಸಂಚಾರ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಸರ್ಕಲ್, ಪಂಡಿತ ಪುಟ್ಟರಾಜ ಗವಾಯಿಗಳ ಸರ್ಕಲ್, ಬೆಟಗೇರಿಯ ರೈಲ್ವೆ ಬ್ರಿಡ್ಜ್ ರಸ್ತೆ, ಮುಳಗುಂದ ನಾಕಾ, ಮುಳಗುಂದ ರಸ್ತೆ ಸೇರಿದಂತೆ ಅವಳಿ ನಗರದ ಪ್ರಮುಖ ರಸ್ತೆಯಲ್ಲಿ ತಗ್ಗು ಗುಂಡಿಗಳು ರಾರಾಜಿಸುತ್ತಿವೆ. ಅದರಲ್ಲೂ ಮಳೆಯಾದರೆ ಸಾಕು ರಸ್ತೆಯಲ್ಲಿ ತಗ್ಗು ಗುಂಡಿಗಳು ನೀರಿನಿಂದ …

Read More »

ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ ಆರ್ಥಿಕ ಚಟುವಟಿಕೆಗಳಿಗೆ …

Read More »

ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ.

ಬಾಗಲಕೋಟೆ: ವಾಲ್ಮೀಕಿ ಸಮುದಾಯಕ್ಕೆ ರಾಜ್ಯದಲ್ಲಿ 70 ರಿಂದ 80 ಸೀಟು ಗೆಲ್ಲಿಸುವ ಸಾಮರ್ಥ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಖಾಸಗಿ ಹೋಟೆಲ್ ಸಭಾಭವನದಲ್ಲಿ ರವಿವಾರ ನಡೆದ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಎಸ್ಟಿ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಎಸ್ಟಿ ಸಮುದಾಯದ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಮುದಾಯದ ಜನರಿಗೆ ಪಕ್ಷ ಸಂಘಟನೆ, ಸೈದ್ಧಾಂತಿಕ ತರಬೇತಿ: ಬೇರೆ ಬೇರೆ ಪಕ್ಷಗಳತ್ತ …

Read More »

ಗಂಡನನ್ನು ಕೊಲ್ಲಲು ಸುಪಾರಿ ಕೊಟ್ಟ ಹೆಂಡತಿ!

ಬೆಂಗಳೂರು: ಪೊಲೀಸರು ಆ ಕ್ಷಣ ಎಚ್ಚೆತ್ತುಕೊಂಡಿಲ್ಲ ಅಂದಿದ್ದರೆ ಮುಗ್ಧ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗುತ್ತಿತ್ತು. ಮಾದನಾಯಕನಹಳ್ಳಿ ಪೊಲೀಸರ ಸಮಯ ಪ್ರಜ್ಞೆಯಿಂದ ಆ ವ್ಯಕ್ತಿಯ ಜೀವ ಉಳಿಸಿದೆ. ಮಾತ್ರವಲ್ಲ ಕೊಲೆಗೆ ಸ್ಕೆಚ್ ಹಾಕಿದ್ದ ಆಮಾಯಕ ವ್ಯಕ್ತಿಯ ಹೆಂಡತಿಯೇ ಇದೀಗ ಜೈಲು ಪಾಲಾಗಿದ್ದಾಳೆ. ಆರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಮಾಡಿದ ಮಹಾ ಘನಂದಾರಿ ಕೆಲಸ ಇಲ್ಲಿದೆ ನೋಡಿ. ಮಾದನಾಯಕನಹಳ್ಳಿ ಸಮೀಪ ಗಿರೀಶ್ ಎಂಬಾತ ಹೋಗುತ್ತಿದ್ದ. ಮಂಕಿ ಕ್ಯಾಪ್ ಧರಿಸಿದ್ದ …

Read More »

ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ, ಪಿಎಸ್‌ಐ ವಿರುದ್ಧ ಎಫ್‌ಐಆರ್!

ಕಲಬುರ್ಗಿ; ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪಿಎಸ್‌ಐ ನಾಡಗೌಡ ಪಾಟೀಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 47 ಜಾನುವಾರುಗಳನ್ನು ಸೇಡಂ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಹೀಗೆ ವಶಕ್ಕೆ ಪಡೆಯಲಾಗಿದ್ದ ಜಾನುವಾರುಗಳನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ನಂದಿ ಅನಿಮಲ್ ವೆಲ್ಫೇರ್ ಸೊಸೈಟಿ ಹುಣಚಿರಾಯ್ ಮೋಟಗಿ ಅವರ ಗೋಶಾಲೆಗೆ ನೀಡಲಾಗಿತ್ತು. ಹೀಗೆ ನೀಡಿದ್ದ ಜಾನುವಾರುಗಳಲ್ಲಿ ಒಂದು …

Read More »