33/11 ಕೆ.ವಿ ದಿಂದ 110/11 ಕೆ.ವಿ ವಿದ್ಯುತ್ ಉಪಕೇಂದ್ರ ಉನ್ನತೀಕರಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಬೆಳಗಾವಿ: ಬೆಳಗಾವಿಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಹತ್ತು ವರ್ಷಗಳ ವಿದ್ಯುತ್ ಬೇಡಿಕೆ ಮುಂದಿರಿಸಿ ಇಂದು ನಗರದಲ್ಲಿ ಹಾಲಿ ಇರುವ 33/11 ಕೆ.ವಿ ಕಿಲ್ಲಾ ವಿದ್ಯುತ್ ಉಪಕೇಂದ್ರವನ್ನು 33.91 ಕೋಟಿ ರೂ. ವೆಚ್ಚದಲ್ಲಿ 110/11 ಕೆ.ವಿ ವಿದ್ಯುತ್ ಉಪಕೇಂದ್ರವಾಗಿ ಉನ್ನತೀಕರಿಸಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು …
Read More »*ಬಬಲಾದಿ ಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸುಕ್ಷೇತ್ರ ಅರಭಾವಿ ಬಬಲಾದಿ ಮಠಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುರುವಾರ ಸಂಜೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಬಲಾದಿ ಮಠದ ಜಾತ್ರೆಯು ನಾಳೆಯಿಂದ ಅದ್ದೂರಿಯಿಂದ ಜರುಗಲಿದೆ. ನಮ್ಮ ರಾಜ್ಯವಲ್ಲದೇ ನೆರೆಯ ರಾಜ್ಯಗಳ ಅಪಾರ ಭಕ್ತರು ಈ ಐತಿಹಾಸಿಕ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ನನ್ನ ಪೂರ್ವ ನಿಗದಿತ ಕಾರ್ಯಕ್ರಮ ನಿಗದಿಯಾಗಿದ್ದರಿಂದ ನಾಳಿನ …
Read More »*ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ!*
ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸಮೀಕ್ಷೆಗಳು ಕೂಡ …
Read More »*ಗೋಕಾಕದ ಉಪ್ಪಾರ ಓಣಿಯಲ್ಲಿ ದಿ. 20 ರಿಂದ 23ರ ವರೆಗೆ ಶ್ರೀ ಬಲಭೀಮ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ*
ಗೋಕಾಕ : ನಗರದ ಉಪ್ಪಾರ ಓಣಿಯ ಶ್ರೀ ಬಲಭೀಮ ದೇವಸ್ಥಾನದ ಜೀರ್ಣೊದ್ಧಾರ ಮತ್ತು ಶ್ರೀ ಬಲಭೀಮ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮವು ದಿ. 20 ರಿಂದ 23ರ ವರೆಗೆ ಅತಿ ವಿಜೃಂಭಣೆಯಿಂದ ಜರುಗಲಿದೆ. ದಿ. 20 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಉಪ್ಪಾರ ಓಣ ಯ ಹರಿ (ಪಾಂಡುರಂಗ) ದೇವಸ್ಥಾನದಿಂದ ಶ್ರೀ ಬಲಭೀಮ ದೇವರ ಮೂರ್ತಿಯನ್ನು ನೂತನ ದೇವಸ್ಥಾನಕ್ಕೆ ಬರಮಾಡಿಕೊಳ್ಳುವುದು. ನಂತರ 4 ಗಂಟೆಯಿಂದ ದೇವರ ಮೂರ್ತಿಗೆ …
Read More »*ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ …
Read More »ಶ್ರೀ ಮಹಾಲಕ್ಷ್ಮಿ ಮಂಟೂರ ಏತ ನೀರಾವರಿ ಯೋಜನೆ ಜ.23 ರಂದು ಉದ್ಘಾಟನೆ.
ಬೀಳಗಿ: ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಶ್ರೀ ಮಹಾಲಕ್ಷ್ಮಿ ಮಂಟೂರ ಏತ ನೀರಾವರಿ ಯೋಜನೆ ದಿನಾಂಕ 23-1- 2024 ಉದ್ಘಾಟನೆಯಾಗಲಿದೆ. ಈ ಯೋಜನೆಯು ಬೀಳಗಿ ಮತ ಕ್ಷೇತ್ರದಲ್ಲಿ ಸುಮಾರು 30,000 ಎಕರೆ ಬಿಳಗಿ ತಾಲೂಕಿನ 33 ಹಾಗೂ ಮುಧೋಳ್ ತಾಲೂಕಿನ 13 ಹಳ್ಳಿ ಜನರಿಗೆ ಅನುಕೂಲವಾಗಲಿದೆ. ಈ ಕಾರ್ಯವನ್ನು ಮುಖಂಡರಾದ ವೆಂಕಣ್ಣ ಜಂಬಗಿ, ಪಂಡಿತಪ್ಪ ಅಮಲಜರಿ, ಶ್ರೀಶೈಲ್ ಅ೦ಟಿನ ಹಾಗೂ ಅಧಿಕಾರಿಗಳಾದ ಜಿ ಎಲ್ ಬಿ …
Read More »ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ : ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ.
ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ …
Read More »9 ನೇ ಕರ್ನಾಟಕ ರಾಜ್ಯ T20 ಟೆನಿಸ್ ಬಾಲ್ ಕಿವುಡರ ಕ್ರಿಕೆಟ್ ಚಾಂಪಿಯನ್ ಶಿಪ್; ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ.
ಗೋಕಾಕ : ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟ ಬೆಂಗಳೂರು ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಕಿವುಡರ ಸಂಘ ಆಯೋಜಿಸಿದ್ದ 9 ನೇ ಕರ್ನಾಟಕ ರಾಜ್ಯ T20 ಟೆನಿಸ್ ಬಾಲ್ ಕಿವುಡರ ಕ್ರಿಕೆಟ್ ಚಾಂಪಿಯನ್ ಶಿಪ್ ಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ರಾಹುಲ್ ಜಾರಕಿಹೊಳಿ ಅವರು ಯುವಕರಲ್ಲಿ ಉತ್ಸಾಹ ತುಂಬಿದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪಾಂಡು …
Read More »ಗೋಕಾಕದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ.
ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶೋಷಿತರ ಎದೆಯಲ್ಲಿ ಮೊದಲ ಅಕ್ಷರ ಬರೆದು ಅಕ್ಷರದ ಅವ್ವ ಎಂದೇ ಪ್ರಸಿದ್ಧಿ ಪಡೆದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕ ಪಾಂಡು ಮನ್ನಿಕೇರಿ, ಮುಖಂಡರಾದ ವಿವೇಕ ಜತ್ತಿ, ಕಲ್ಲಪ್ಪಾಗೌಡ ಲಕ್ಕಾರ, ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪ್ರಹ್ಲಾದ್ ನಾಡಿಗೇರ, ಪಾಂಡು …
Read More »*ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡುವ ಮೂಲಕ ಗೋಕಾಕದಲ್ಲಿ 139 ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ*
ಗೋಕಾಕ : 139 ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಅವರು ಮಾತನಾಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಲಾಗುತ್ತಿದೆ, ಭಾರತೀಯ ಕಾಂಗ್ರೇಸ್ ಪಕ್ಷವು ತನ್ನದೆ ಆದಂತಹ ಇತಿಹಾಸವನ್ನು ಹೊಂದಿದೆ ಭಾರತದ ಆಡಳಿತದಲ್ಲಿ ಈ ರಾಷ್ಟ್ರೀಯ ಕಾಂಗ್ರೇಸ್ …
Read More »