ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ಪಾಲಿಟೆಕ್ನಿಕ್ಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರದಂದು ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ …
Read More »ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಜ್ಜಾಗಿ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ ಭೀತಿ …
Read More »ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ.
ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ. ಅರಭಾವಿ: ತಾಲೂಕಿನ ಅರಭಾಂವಿ -ದುರದುಂಡಿಯ ಸತ್ತಿಗೇರಿ ತೋಟದಲ್ಲಿ ಶ್ರೀ ಬಸವಗೋಪಾಲ ನೀಲಮಾಣಿಕ ಮಠ, ಸುಕ್ಷೇತ್ರದ ಬಂಡಿಗಣಿ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳ ಆಶ್ರಯದಲ್ಲಿ ಶ್ರೀ ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ ಪ್ರಯುಕ್ತ ಭೂದೇವಿ ಹಾಗೂ 2000 ಕ್ಕೂ ಹೆಚ್ಚು ಮುತ್ತೈದೆಯರಿಗೆ ಉಡಿ ತುಂಬವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ತಾಲೂಕಿನ ದುರದುಂಡಿ ಗ್ರಾಮದ ಸತ್ತಿಗೇರಿ …
Read More »ಮುಂಬೈನಲ್ಲಿ ಬಾರಿ ಮಳೆ, ರಸ್ತೆ ಮಾರ್ಗಗಳು ಜಲಾವೃತ!
ಮುಂಬೈ : ಮುಂಬೈನ ಹಲವಾರು ಭಾಗಗಳು ಶುಕ್ರವಾರ ಬೆಳಿಗ್ಗೆ ರಾತ್ರಿ ಸುರಿದ ಮಳೆಯಿಂದ ಜಲಾವೃತವಾದ ನಂತರ ರಸ್ತೆ, ರೈಲು ಮಾರ್ಗಗಳು ನೀರಿನಲ್ಲಿ ಮುಳುಗಿವೆ. ಮಳೆಯು ರೈಲು ಸಂಚಾರದಲ್ಲಿ ವಿಳಂಬಕ್ಕೆ ಕಾರಣವಾಗಿದೆ ಮತ್ತು ಮುಂಬೈನ ಬಸ್ ಮಾರ್ಗಗಳಲ್ಲಿ ಬದಲಾವಣೆಗೆ ಕಾರಣವಾಗಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಮುಂಬೈ ಮತ್ತು ಉಪನಗರ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರ ಬೆಳಿಗ್ಗೆ ೮ ಗಂಟೆ ಸುಮಾರಿಗೆ, ಮುಂದಿನ ೨-೩ ಗಂಟೆಗಳಲ್ಲಿ …
Read More »ಬೆಳ್ಳಂ ಬೆಳಗ್ಗೆ 9 ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ, ಪತ್ತೆಯಾದ ಆಸ್ತಿ, ಮನೆ, ಚಿನ್ನ ಎಷ್ಟು ಗೊತ್ತಾ?
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ 9 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲಕ್ಕೆ ರಾಜ್ಯಾದ್ಯಂತ ನಡೆಸಿದ ದಾಳಿ ವೇಳೆ ಕೋಟ್ಯಂತರ ರೂಪಾಯಿ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಒಟ್ಟು 310 ಎಸಿಬಿ ಅಧಿಕಾರಿಗಳ 43 ತಂಡಗಳಿಂದ ದಾಳಿ ನಡೆದಿದ್ದು, ಭಾರೀ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲಾ ಅಧಿಕಾರಿಗಳು ಮನೆ, ಸಂಬಂಧಿಕರ ಮನೆ, ಕಚೇರಿ, ನಿಕಟವರ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ …
Read More »“ಆದರ್ಶ ಸಮಾಜ ಭೂಷಣ” ಗೌರವ ಪ್ರಶಸ್ತಿಗೆ ಭಾಜನರಾದ ಭೀಮಶಿ ಭರಮಣ್ಣವರ.
ನಿಪ್ಪಾಣಿ: ಕೈ .ಬಸವಂತ ನಾಗು ಶಿಂಗಾಡೆ ಚೈರಟೆಬಲ ಟ್ರಸ್ಟ್ ವತಿಯಿಂದ ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮಾಜ ಸೇವಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಗೋಕಾಕ ತಾಲೂಕಿನ ಸಮಾಜ ಸೇವಕ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ ” ಆದರ್ಶ ಸಮಾಜ ಭೂಷಣ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಗೋಕಾಕ ತಾಲೂಕಿನಲ್ಲಿ ಅನೇಕ ವರ್ಷಗಳಿಂದ ಪತ್ರಕರ್ತರಾಗಿ, ಮಾಜಿ ನಗರ ಸಭೆ ಸದಸ್ಯ ಹಾಗೂ ಗೋಕಾಕ ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ …
Read More »ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು ಗ್ರಾಮದ ಅಭಿವೃದ್ಧಿಗೆ ಪಣ ತೊಡಿ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು …
Read More »ರಾಜ್ಯಾದ್ಯಂತ ಭಾರಿ ಮಳೆ ,ಜಲಾಶಯದತ್ತ ಹರಿದು ಬರುತ್ತಿದೆ ನೀರು!
ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆ ಹೇಳಿರು ಪ್ರಕಾರ, ಇನ್ನೂ ನಾಲ್ಕು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜುಲೈ 18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕರ್ನಾಟಕ …
Read More »ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದವರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ.
ಬೆಂಗಳೂರು : ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿಯನ್ನು ಪ್ರಕಟಗೊಳಿಸಲಾಗಿದೆ. ಇನ್ನೇನು ಚುನಾವಣೆ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷೆಸಲಾಗಿತ್ತು. ಆದ್ರೇ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತ ನಿರ್ಣಯವನ್ನು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಈ ಮೂಲಕ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ …
Read More »ಗೋಕಾಕ ತಾಲೂಕಿನ ಪ್ರವಾಸಿ ತಾಣಗಳ ವೀಕ್ಷಣೆಗೆ ನಿರ್ಭಂದ: ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.
ಗೋಕಾಕ: ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು …
Read More »