ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆ ಹೇಳಿರು ಪ್ರಕಾರ, ಇನ್ನೂ ನಾಲ್ಕು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜುಲೈ 18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕರ್ನಾಟಕ …
Read More »ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದವರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ.
ಬೆಂಗಳೂರು : ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿಯನ್ನು ಪ್ರಕಟಗೊಳಿಸಲಾಗಿದೆ. ಇನ್ನೇನು ಚುನಾವಣೆ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷೆಸಲಾಗಿತ್ತು. ಆದ್ರೇ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತ ನಿರ್ಣಯವನ್ನು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಈ ಮೂಲಕ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ …
Read More »ಗೋಕಾಕ ತಾಲೂಕಿನ ಪ್ರವಾಸಿ ತಾಣಗಳ ವೀಕ್ಷಣೆಗೆ ನಿರ್ಭಂದ: ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.
ಗೋಕಾಕ: ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು …
Read More »ಲಸಿಕೆ ದೊರೆಯದೆ ವಾಪಸಾದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ; ಸರ್ಕಾರದ ವಿರುದ್ಧ ಆಕ್ರೋಶ
ಸಾಗರ: ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಇಲ್ಲಿನ ದೇವರಾಜ ಅರಸು ಸಭಾಭವನಕ್ಕೆ ಮಂಗಳವಾರ ಬಂದಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಲಸಿಕಾ ಕೇಂದ್ರದಲ್ಲಿ ಲಸಿಕೆ ಸಂಗ್ರಹವಿಲ್ಲದ ಕಾರಣ ಮನೆಗೆ ಮರಳಬೇಕಾಯಿತು. ಕಾಗೋಡು ತಿಮ್ಮಪ್ಪ ಅವರಿಗೆ ಎರಡನೇ ಡೋಸ್ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಮಂಗಳವಾರ ಬರುವಂತೆ ಅವರ ಮೊಬೈಲ್ಗೆ ಸಂದೇಶ ಕಳುಹಿಸಲಾಗಿತ್ತು. ಆ ಪ್ರಕಾರ ಅವರು ಲಸಿಕಾ ಕೇಂದ್ರಕ್ಕೆ ಬಂದರೆ ‘ಲಸಿಕೆ ಸಂಗ್ರಹವಿಲ್ಲ’ ಎಂಬ ಫಲಕ ನೋಡಿ …
Read More »ಮಾದಕ ವಸ್ತುಗಳಿಂದ ಅಪರಾಧಿಗಳು ಜಾಸ್ತಿ!
ಆನೇಕಲ್: ಆನೇಕಲ್ ಪೊಲೀಸ್ ಉಪ ವಿಭಾಗದ ಏಳು ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದ 100 ಬೈಕ್, ಮೊಬೈಲ್ಗಳು ಮತ್ತು ಚಿನ್ನಾಭರಣ ಸೇರಿದಂತೆ ಒಟ್ಟು ₹ 1.74 ಕೋಟಿ ಮೌಲ್ಯದ ವಸ್ತುಗಳನ್ನು ಹೆಬ್ಬಗೋಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಎಂ. ಚಂದ್ರಶೇಖರ್ ವಾರಸುದಾರರಿಗೆ ಹಸ್ತಾಂತರಿಸಿದರು. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ 37 ಪ್ರಕರಣಗಳಲ್ಲಿ 56 ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಕ್ಕೆ ಪಡೆದಿದ್ದು, ಸಂಬಂಧಿಸಿದವರಿಗೆ ನೀಡಲಾಯಿತು. ಹೆಬ್ಬಗೋಡಿ ಠಾಣೆ …
Read More »ವಿದೇಶಿಯರ ಅಡ್ಡೆಗಳ ಮೇಲೆ ಸಿಸಿಬಿ ದಾಳಿ!
ಬೆಂಗಳೂರು: ಅಪರಾಧಗಳ ರಾಜಧಾನಿಯಾಗಿ ಮಾರ್ಪಾಡು ಆಗುತ್ತಿದೆಯಾ ಅನ್ನುವಷ್ಟು ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ದೃಢ ಸಂಕಲ್ಪ ತೊಟ್ಟಿರುವ ಬೆಂಗಳೂರು ಪೊಲೀಸರು ಕಳೆದ ವಾರ ಸಾವಿರಾರು ರೌಡಿಗಳನ್ನು ಕರೆದು, ಕಟ್ಟೆಚ್ಚರ ನೀಡಿ ಕಳಿಸಿದ್ದಾರೆ. ಅದಾದ ಮೇಲೆ ಪಿಂಚಣಿದಾರರ ಸ್ವರ್ಗವೆಂಬ ಹೆಗ್ಗಳಿಕೆಯ ಬೆಂಗಳೂರಿಗೆ ಪಾತಕ ವಿದೇಶಿಗರು ಪೀಡೆಯಾಗಿ ಪರಿವರ್ತನೆಗೊಂಡಿದ್ದಾರೆ. ಹಾಗಾಗಿ ಇಂದು ಸಿಸಿಬಿ ಪೊಲೀಸರು ಫೀಲ್ಡಿಗೆ ಇಳಿದು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ವಿದೇಶಿಗರನ್ನು ವಿಚಾರಿಸಿಕೊಂಡಿದ್ದಾರೆ. ಸಿಸಿಬಿ …
Read More »ಸದಾ ನಗಿಸುವ ಸೃಜನ್ ಲೋಕೇಶ ಕಣ್ಣಿರಿಟ್ಟದ್ದು ಏಕೆ?
ನಟ ಸೃಜನ್ ಲೋಕೇಶ್ ಅವರು ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಮಜಾ ಟಾಕೀಸ್ ಶೋ ಮೂಲಕ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡ ಸೃಜನ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಅವರು ಈಗ ರಂಗಭೂಮಿ ಬಗ್ಗೆ ಮಾತನಾಡಿದ್ದಾರೆ. ‘ರಾಜ-ರಾಣಿ’ ಹೆಸರಿನ ಹೊಸ ಶೋಅನ್ನು ಕಲರ್ಸ್ ಕನ್ನಡ ವಾಹಿನಿ ಪರಿಚಯಿಸಿದೆ. ಕಳೆದ ವಾರ ಈ ಶೋ ಗ್ರ್ಯಾಂಡ್ ಆರಂಭ ಕಂಡಿದೆ. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ ವೇದಿಕೆ ಮೇಲೆ ಮಾತನಾಡಿಸಲಾಗುತ್ತದೆ. ನಟ ಸೃಜನ್ ಲೋಕೇಶ್ ಹಾಗೂ …
Read More »ಹನಿಟ್ರ್ಯಾಪ್ ಹಾಗೂ ಸುಲಿಗೆ ಮಾಡಿದ ನಾಲ್ವರಿಗೆ ಜೀವಾವಧಿ ಶಿಕ್ಷೆ!
ಹುಬ್ಬಳ್ಳಿ: ಶ್ರೀಮಂತ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿಕೊಂಡು ಅವನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ ಮಾಡಿದ ಯುವತಿ ಸೇರಿದಂತೆ ನಾಲ್ವರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹನಿಟ್ರ್ಯಾಪ್ ಹಾಗೂ ಸುಲಿಗೆ ಮಾಡಿದ ನಾಲ್ವರಿಗೆ ಹುಬ್ಬಳ್ಳಿಯ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದು, ಸುಲಿಗೆಕೋರರು ಕಂಬಿ ಪಾಲಾಗಿದ್ದಾರೆ. ಶ್ರೀಮಂತರನ್ನು ಪತ್ತೆ ಮಾಡಿ ಅವರೊಂದಿಗೆ ಸ್ನೇಹ ಬೆಳೆಸಿ ಸಲುಗೆಯಿಂದ ಹಣ ಕೀಳುವ ಉದ್ದೇಶದಿಂದ ಹುಬ್ಬಳ್ಳಿಯ ನಾಲ್ವರು …
Read More »ಲಂಕೇಶ್ ನಟ ದರ್ಶನ್ ಮೇಲೆ ಆರೋಪ; ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ .
ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಪ್ರಕರಣ ಕೇಸು ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು …
Read More »ನೇರ ಸಂಭಾವಣೆ ಪೌರಕಾರ್ಮಿಕರ ವೇತನ ಕಟ್ ಮಾಡಿ ಇನ್ನೊಬ್ಬರಿಗೆ ನೀಡಿದರೆ ಕಾನೂನು ಕ್ರಮ : ಹರೀಶ ನಾಯಕ
ಬೆಳಗಾವಿ : ಕರ್ನಾಟಕ ರಾಜ್ಯ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ನೇರ ನೇಮಕಾತಿ ಹಿನ್ನಲೆಯಲ್ಲಿ ಮೀಸಲಾತಿಯನ್ನು ಅನುಸರಿಸಿ ನೈಜ್ ಕಾರ್ಮಿಕರನ್ನು ಖಾಯಂಯಾತಿಯಿಂದ ವಂಚಿಸಿದೆ ಎಂದು ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಹರಿಶ್ ನಾಯಕ ಅವರು ಆರೋಪಿಸಿದರು. ಅವರು ಬುಧವಾರ ನಗರದಲ್ಲಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ/ಹೊರಗುತ್ತಿಗೆ ಹಾಗೂ ನೇರ ಸಂಭಾವಣೆಯ ಕಾರ್ಮಿಕರ ಬದುಕು ಅತಂತ್ರಸ್ಥಿತಿಯಲ್ಲಿದೆ. ಪೌರಕಾರ್ಮಿಕರು ಮತ್ತು ಲೋಡರ್, …
Read More »