ಬೆಳಗಾವಿ: ‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಅಧಿಕಾರಿಗಳು ಆದ್ಯತೆ ನೀಡುತ್ತಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು. ನಗರದ ಸುರೇಶ ಯಾದವ ಪ್ರತಿಷ್ಠಾನದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿಗೆ ವಿತರಿಸಲು ನೀಡಲಾದ 13ಸಾವಿರ ಮಾಸ್ಕ್‌ಗಳನ್ನು ಡಿಡಿಪಿಐ ಎ.ಬಿ. ಪುಂಡಲೀಕ ಅವರಿಗೆ ಬುಧವಾರ ಹಸ್ತಾಂತರಿಸಿ ಅವರು ಮಾತನಾಡಿದರು. ‘ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ …
Read More »ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ;ಕಣ್ಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ.
ಗದಗ : ಡಂಬಳ ಹೋಬಳಿ ಗ್ರಾಮಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ. ಸ್ಥಳೀಯರು ಸಾಕಷ್ಟು ಬಾರಿ ದೂರು ನೀಡಿದರೂ ಅಬಕಾರಿ ಇಲಾಖೆ, ಪೊಲೀಸ್ ಇಲಾಖೆಯವರು ಇತ್ತ ಕಣ್ಣೆತ್ತಿ ನೋಡದಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಡಂಬಳ, ಮೇವುಂಡಿ, ಪೇಠಾಆಲೂರ, ಕದಾಂಪೂರ, ಜಂತ್ಲಿ- ಶಿರೂರ, ಡೋಣಿ, ಹಳ್ಳಿಕೇರಿ, ಹಿರೇವಡ್ಡಟ್ಟಿ, ಮುರಡಿ ತಾಂಡ, ಹಳ್ಳಿಗುಡಿ ಗ್ರಾಮಗಳಲ್ಲಿ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮ ಮದ್ಯ ಮಾರಾಟ ಹಲವು ದಿನಗಳಿಂದ ನಡೆದು ಬಂದಿದೆ. ಹಲವು ಗ್ರಾಮಗಳ …
Read More »ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ರೆ ಮಾತ್ರ ಮಹಾರಾಷ್ಟ್ರದಿಂದ ಬೆಳಗಾವಿಗೆ ಎಂಟ್ರಿ!
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್‌ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ ಕೋವಿಡ್ …
Read More »ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ.
ಸುಬ್ರಹ್ಮಣ್ಯ: ನಿರಂತರ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕಳೆದ 4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಅಲ್ಲದೆ ಘಟ್ಟ ಪ್ರದೇಶ ಹಾಗೂ ಕುಮಾರ ಪರ್ವತದಲ್ಲಿ ಭಾರಿ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕ್ಷೇತ್ರಕ್ಕೆ ಬಂದಿರುವ ಭಕ್ತಾದಿಗಳು ಕುಮಾರಧಾರಾ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲೇ ತೀರ್ಥಸ್ನಾನ ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಸ್ನಾನಘಟ್ಟದ ಬಳಿಯಿರುವ ಕಿಂಡಿ ಅಣೆಕಟ್ಟು ಕೂಡ ಸಂಪೂರ್ಣ ಮುಳುಗಡೆಯಾಗಿದೆ.
Read More »ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವಂತೆ ಮುಖ್ಯಮಂತ್ರಿ ಗಳಿಗೆ ಹೊರಟ್ಟಿ ಒತ್ತಾಯ.
ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಈ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಅಧಿವೇಶನ ನಡೆಯಬೇಕೆಂದು 15 ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಜೊತೆದೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆಯನ್ನೂ ನಡೆಸಿದ್ದೇನೆಂದು ಹೇಳಿದ್ದಾರೆ. 2018ರ …
Read More »ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಬಸ್ ಚಾಲಕ!
ಮಹಾರಾಷ್ಟ್ರ: ಮಹಾರಾಷ್ಟ್ರದ ರಾಯಘಡದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇಂತಹ ಪ್ರವಾಹ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಬಸ್ ಚಾಲಕನೊಬ್ಬ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಾಡ ತಾಲೂಕಿ ನದಿಯಲ್ಲಿ ಭಾರಿ ಪ್ರವಾಹದಿಂದ ಕೆಳ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ನದಿಗೂ ಸೇತುವೆಗೂ ವ್ಯತ್ಯಾಸವಿಲ್ಲದ ಪರಿಸ್ಥಿತಿಯಲ್ಲಿ ಹತ್ತಾರು ಪ್ರಯಾಣಿಕರಿದ್ದ ಬಸ್ನ್ನ ಚಾಲಕ ಕಳೆ ಹಂತದ ಸೇತುವೆ ದಾಟಿಸಿದ್ದಾರೆ. …
Read More »ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿಯೇ ಇಲ್ಲ ಉಲ್ಟಾ ಹೊಡೆದ ಸಂಸದೆ ಸುಮಲತಾ!
ಮಂಡ್ಯ: ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿ, ಇದೀಗ ಆ ರೀತಿ ಹೇಳಿಯೇ ಇಲ್ಲ ಎಂದು ಸಂಸದೆ ಸುಮಲತಾ ಉಲ್ಟಾ ಹೊಡೆದಿದ್ದಾರೆ. ಮೈಸೂರು: ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ನಾನು ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿಲ್ಲ. ಬಿರುಕು ಬಿಟ್ಟಿದಿಯಾ ಅಂತ ದಿಶಾ ಸಭೆಯಲ್ಲಿ ಕೇಳಿದ್ದೇನೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ನನಗೆ ಈಗಲೂ ಶೇ.500 ಇದೆ. ಇದನ್ನೇ ನಾನು ಸಭೆಯಲ್ಲಿ ಹೇಳಿದ್ದೇನೆ. ಆದರೆ ಅದನ್ನೇ …
Read More »ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್?
ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಟ್ಟು, ಇದೀಗ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬೆನ್ನಲ್ಲೇ ಇದೀಗ ರಾಜ್ಯದ ಮತ್ತೋರ್ವ ಖಡಕ್ ಐಪಿಎಸ್ ಅಧಿಕಾರಿ ಕೂಡ ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್, ಅಣ್ಣಾಮಲೈ ರೀತಿಯಲ್ಲೇ ಪಾಲಿಟಿಕ್ಸ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ವಿವಿಧ ಮಠಗಳಿಗೆ ಭೇಟಿ ನೀಡುತ್ತಿರುವ ರವಿ ಡಿ ಚೆನ್ನಣ್ಣನವರ್, ಹಲವು ಸ್ವಾಮೀಜಿಗಳನ್ನು …
Read More »ನಿವೃತ್ತ ಪೋಲೀಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಜನರಿಗೆ ವಂಚನೆ
ಬೆಂಗಳೂರು: ಅಪರಿಚಿತ ದುಷ್ಕರ್ಮಿಯೊಬ್ಬ ನಿವೃತ್ತ ಪೊಲೀಸ್ ಅಧಿಕಾರಿ ಬಿಬಿ ಅಶೋಕ್ ಕುಮಾರ್ ಅವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ವಂಚಿಸಲು ಯತ್ನಿಸಿದ್ದಾನೆ. ಆರೋಪಿಯು ಅಧಿಕಾರಿಯ ಸಂಪರ್ಕಗಳಿಂದ ಹಣಕಾಸಿನ ಸಹಾಯವನ್ನು ಕೋರಿದ್ದಾನೆ. ಪ್ರಕರಣ ದಾಖಲಿಸಲು ಅಶೋಕ್ ಕುಮಾರ್ ಸಿಇಎನ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೂ, ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅಶೋಕ್ ಕುಮಾರ್ ಅವರು ದೂರವಾಣಿ ಮೂಲಕ ನಮ್ಮನ್ನು ಸಂಪರ್ಕಿಸಿ ಘಟನೆ ಬಗ್ಗೆ ದೂರು ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. …
Read More »ಜಿಯೋ ಕಛೇರಿ ಮುಂದೆ ಶವ ಇಟ್ಟು ಪ್ರತಿಭಟನೆ.
ಹಾಸನ: ಅಪಘಾತದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನಗರದ ಎಂ.ಜಿ. ರಸ್ತೆಯಲ್ಲಿರುವ ಜಿಯೋ ಡಿಜಿಟಲ್ ಲೈಫ್ ಕಚೇರಿ ಎದುರು ಮಂಗಳವಾರ ಶವವಿಟ್ಟು ಮೃತನ ಸಂಬಂಧಿಕರು ಧರಣಿ ನಡೆಸಿದರು. ತಾಲ್ಲೂಕಿನ ಸಾಲಗಾಮೆ ಹೋಬಳಿಯ ಸುಂಡಳ್ಳಿ ಗ್ರಾಮದ ಸ್ವಾಮಿ (33) ಮೃತ ವ್ಯಕ್ತಿ. ಹನ್ನೊಂದು ವರ್ಷಗಳಿಂದ ಅರಸೀಕೆರೆ ತಾಲ್ಲೂಕಿನ ಬಾಣವಾರ ಹಾಗೂ ಜಾವಗಲ್ ಹೋಬಳಿಯ ಟವರ್ ಟೆಕ್ನಿಷಿಯನ್ ಆಗಿ ಸ್ವಾಮಿ ಕೆಲಸ ಮಾಡುತ್ತಿದ್ದರು. ಜಾವಗಲ್‌ನಲ್ಲಿ ಸೋಮವಾರ ರಾತ್ರಿ ಕೆಲಸ …
Read More »