Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಬಸವರಾಜ ಬೊಮ್ಮಾಯಿ ಅವರು ಸಮತೋಲನ ಆಡಳಿತ ನೀಡುತ್ತಾರೆ :ಮುರುಘಾ ಶರಣರು

ಗೋಕಾಕ: ‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ನೀಡಿದ ಹೊಸ ಯೋಜನೆಗಳನ್ನು ಮತ್ತು ಜನಹಿತ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಮೂಲಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮತೋಲನ ಆಡಳಿತ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಇಲ್ಲಿನ ಶೂನ್ಯ ಸಂಪಾದನಮಠದಲ್ಲಿ ಪಾದಪೂಜೆ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದರು. ‘ಬಸವರಾಜ ಅವರು ಯಡಿಯೂರಪ್ಪ ಮಾರ್ಗದರ್ಶನ ಪಡೆಯಲಿದ್ದಾರೆ. ರಾಜ್ಯದ ಗೃಹ ಮಂತ್ರಿಯಾಗಿ ಮತ್ತು …

Read More »

ಘಟಪ್ರಭೆ, ಮಲಪ್ರಭೆ ಅಬ್ಬರ ಕಡಿಮೆ, ಕೃಷ್ಣೆ ಯಥಾಸ್ಥಿತಿ

ಬೆಳಗಾವಿ/ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ ತೀರದಲ್ಲಿರುವ ಚಿಕ್ಕೋಡಿ, ಅಥಣಿ, ಕಾಗವಾಡ, ರಾಯಬಾಗ ತಾಲ್ಲೂಕುಗಳಲ್ಲಿನ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಮಹಾರಾಷ್ಟ್ರದ ಕಡೆಯಿಂದ 3.43 ಲಕ್ಷ ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ಬುಧವಾರ 3.82 ಲಕ್ಷ ಕ್ಯುಸೆಕ್‌ ನೀರು ಬರುತ್ತಿತ್ತು. 24 ಗಂಟೆಗಳ ಅವಧಿಯಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗುರು ವಾರ ಮಲಪ್ರಭಾ ಹಾಗೂ …

Read More »

ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು ರಾಹುಲ್ ಪರಿಶೀಲಿಸಿದರು. …

Read More »

ಹುಬ್ಬಳ್ಳಿ ಮಹಿಳಾ ಘಟಕದ ಕಾರ್ಯವನ್ನು ಶ್ಲಾಘೀಸಿದ ಸತೀಶ್ ಜಾರಕಿಹೊಳಿ

ಹುಬ್ಬಳ್ಳಿ : ‘ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ, ಪಕ್ಷ ಸಂಘಟನೆಯಲ್ಲಿ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಗುರುವಾರ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್  ಸಂದರ್ಭದಲ್ಲಿ ಮೊದಲೆ ಹಾಗೂ ಎರಡನೇ ಅಲೆಯಲ್ಲಿ ಮಹಿಳಾ ಕಾಂಗ್ರೆಸ್ ಬಡವರಿಗೆ ಕಿಟ್ ನೀಡುವ ಮೂಲಕ ಒಳ್ಳೆಯ ಕಾರ್ಯವನ್ನು ಮಾಡಿದ್ದೀರಿ …

Read More »

ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳ ಸದುಪಯೋಗಕ್ಕೆ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಕರೆ

ಯಮಕನಮರಡಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮತಕ್ಷೇತ್ರದ ಮಾವನೂರ ಸರ್ಕಾರಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳನ್ನು ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಿಯಾಂಕಾ ಅವರು ಗ್ರಾಮ ಪಂಚಾಯತ್ 14ನೇ ಹಣಕಾಸು ಯೋಜನೆಯಡಿ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು ನೂತನ ಕೊಠಡಿಗಳನ್ನು ಹಾಗೂ ಕ್ರೀಡಾ ಸಾಮಗ್ರಿಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.   ಮುಖಂಡರಾದ ಕುಮಾರ ಗುಡಗನಟ್ಟಿ, ಶಿವಪ್ಪ ಈರನಟ್ಟಿ, ಯಲ್ಲನಾಯ್ಕ …

Read More »

ಸಂಕಷ್ಟದಲ್ಲಿರುವ ಜನರಿಗೆ ಕರ್ತವ್ಯದಲ್ಲಿರುವರು ಕೈಜೋಡಿಸಿ : ಮುರುಘಾ ಶರಣರು

ಬೆಳಗಾವಿ : 12 ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಅನಾವರಣವಾಯಿತು. ಆಗ ಎಲ್ಲರು ಕಲ್ಯಾಣ ಕೈ ಬಿಸಿ ಕರೆಯುತ್ತಿದೆ ಎಂದು. ಆದರೆ ಇಂದು ಮಠಾಧೀಶರು, ರಾಜಕಾರಣಿಗಳಿಗೆ ಕರ್ತವ್ಯ ಕರೆಯುತ್ತಿದೆ ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾಮಠದ ಶರಣರು ಹೇಳಿದರು. ಅವರು ಗುರುವಾರ ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದರು. ಬಸವಣ್ಣನವರ ಕಾಲದ …

Read More »

ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ ಸನದಿ ಚಾಲನೆ

ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಎಲ್ಲ ಮನೆ ಗಳಿಗೆ ಜಲಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿಗೆ ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ ಸನದಿ ಅವರು ಬುಧವಾರ ದಂದು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಶಿಂದಿಕುರಬೇಟ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮದ ಹಿರಿಯರು ಹಾಗೂ …

Read More »

ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಭೇಟಿ.

ಗೋಕಾಕ/ಮೂಡಲಗಿ : ತಾಲ್ಲೂಕಿನ ಅಡಿಬಟ್ಟಿ ಚಿಗಡೋಳ್ಳಿ ಮೇಳವಂಕಿ ಕಲಾರಕೊಪ್ಪ ಹಡಗಿನಾಳ ಉದಗಟ್ಟಿ ತಳಕಟನಾಳ ತಿಗಡಿ ಸುಣಧೋಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಇಂದು ತೆರಳಿ ಪ್ರವಾಹ ಹಾಗೂ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು. ಗ್ರಾಮದ ಹಿರಿಯರೊಂದಿಗೆ ಸಭೆ ನಡೆಸಿದ ಸರ್ವೋತ್ತಮ ಜಾರಕಿಹೊಳಿ ಮಳೆಯಿಂದ ಹಾನಿಯಾಗಿರುವ ಮನೆ ,ಹೊಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ, ಸಾಂತ್ವನ ಹೇಳುವ ಮೂಲಕ ಧೈರ್ಯ …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …

Read More »

ಪ್ರವಾಹದಿಂದಾದ ಹಾನಿ ವೀಕ್ಷಿಸಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ

ಹುಕ್ಕೇರಿ : ಹುಕ್ಕೇರಿ ತಾಲ್ಲೂಕಿನ ಕುಂದರಗಿ ಹಾಗೂ ಬೆಳಗಾವಿ ತಾಲ್ಲೂಕಿನ ಹುದಲಿ, ತುಮ್ಮರಗುದ್ದಿ, ಮುಚ್ಚಂಡಿ, ಅಂಕಲಗಿ, ಡುಮ್ಮುಉರಬನಟ್ಟಿ, ಕಲಕಾಂಬ, ಖನಗಾಂವ ಸೇರಿದಂತೆ ವಿವಿಧ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ತೆರಳಿ ಪ್ರವಾಹ ಹಾಗೂ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು. ಗ್ರಾಮದ ಮುಖಂಡರೊಂದಿಗೆ ಸಭೆ ನಡೆಸಿದ ರಾಹುಲ್ ಜಾರಕಿಹೊಳಿ ಮಳೆಯಿಂದ ಹಾನಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ, ಸಾಂತ್ವನ ಹೇಳುವ …

Read More »