ನವದೆಹಲಿ, ಜು.08: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2.0 ಸರ್ಕಾರದ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆ ಕೊನೆಯಾಗಿದೆ. 43 ಮಂದಿ ನೂತನ ಸಚಿವರು ಸಂಪುಟ ಸೇರಿದ್ದಾರೆ. ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ್ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ಕರ್ನಾಟಕದ ನಾಲ್ಕು ಮಂದಿ ಕೇಂದ್ರ ಸಂಪುಟ ಸೇರಿದ್ದಾರೆ. ಕೇಂದ್ರ ಸಂಪುಟ ವಿಸ್ತರಣೆ: ದಾಖಲೆಯ ಎಸ್ಸಿ/ಎಸ್ಟಿ ಪ್ರಾತಿನಿಧ್ಯ, …
Read More »ಕನ್ನಂಬಾಡಿ ಕದನ: ಎಚ್.ಡಿ. ಕುಮಾರಸ್ವಾಮಿ, ಸುಮಲತಾ ನಡುವೆ ಮಾತಿನ ಸಿಡಿಗುಂಡುಗಳು
ಮಂಡ್ಯ, ಜು.8- ಕನ್ನಂಬಾಡಿ ಕದನ ಈಗ ತೀವ್ರಗೊಂಡಿದೆ. ಕಳೆದ ಕೆಲವು ದಿನಗಳಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದರಾದ ಸುಮಲತಾ ನಡುವೆ ಮಾತಿನ ಸಿಡಿಗುಂಡುಗಳು ಸಿಡಿಯುತ್ತಿದ್ದು, ಈಗ ಖುದ್ದು ಇಬ್ಬರೂ ಅಖಾಡಕ್ಕಿಳಿದಿದ್ದಾರೆ. ಇದರ ನಡುವೆ ಇಬ್ಬರ ನಡುವಿನ ಹೇಳಿಕೆ, ಪ್ರತಿ ಹೇಳಿಕೆಗಳು ಮುಂಬರುವ ಚುನಾವಣೆಗಳಿಗೆ ಪ್ರಬಲ ಅಸ್ತ್ರಗಳು ಆಗಲಿವೆ. ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರನ್ನು ಸೋಲಿಸಲು ಎಚ್.ಡಿ.ಕುಮಾರಸ್ವಾಮಿ ಶಪಥ ಮಾಡಿದ್ದಾರೆ. ಚುನಾವಣೆಗೂ ನಾಲ್ಕು ತಿಂಗಳು ಮುನ್ನ ಆಡಿಯೋ …
Read More »ಕೋವಿಡ್ ಮೂರನೆ ಅಲೆಯನ್ನು ರಾಜ್ಯಸರ್ಕಾರ ಯಶಸ್ವಿಯಾಗಿ ತಡೆಗಟ್ಟಲಿದೆ : ಸಿಎಂ ಯಡಿಯೂರಪ್ಪ
ಬೆಂಗಳೂರು, ಜು.7- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆ ಆವರಣ ದಲ್ಲಿ ಖಾಸಗಿ ಕಂಪೆನಿಗಳ ಸಿಎಸ್ಆರ್ ಅನುದಾನದಡಿ ನೂತನವಾಗಿ ನಿರ್ಮಿಸಿದ್ದ 70 ಹಾಸಿಗೆಗಳ ಸಾಮಥ್ರ್ಯದ ಮೇಕ್ಶಿಫ್ಟ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್- 19ರ ಮೂರನೆ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಈ ಆಸ್ಪತ್ರೆ ನಿರ್ಮಿಸಲಾಗಿದೆ. ದೇಶದ ಆರು ರಾಜ್ಯಗಳಲ್ಲಿ ಇಂತಹ ಮೇಕ್ಶಿಫ್ಟ್ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಈ …
Read More »ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಸೈಕಲ್ ರ್ಯಾಲಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ್ಯಾಲಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ ಹಾಗೂ ಇಂಧನ ಬೆಲೆ ಏರಿಕೆ …
Read More »8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ಸಿಗುವುದು ಅನುಮಾನ!
ಬೆಂಗಳೂರು : ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಕಾರಣದಿಂದ ಸರ್ಕಾರಿ/ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ. 2019-20 ನೇ ಸಾಲಿನಲ್ಲಿ ರಾಜ್ಯದಲ್ಲಿ 2,44,901 ಬಾಲಕಿಯರು ಹಾಗೂ 2,59,624 ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ …
Read More »ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ವಿದ್ಯಾರ್ಥಿಗಳ ಗಮನಕ್ಕೆ!
ಬೆಂಗಳೂರು : 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಈ ಹಿಂದಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ಅಭ್ಯರ್ಥಿಯಾಗಿದ್ದರೇ, ಹಿಂದಿನ ಪರೀಕ್ಷೆಯ ಅಂಕ ಪಡೆಯಬಹುದು, ಇಲ್ಲವೇ ಫಲಿತಾಂಶ ಘೋಷಣೆಯ ಬಗ್ಗೆ ಅವಕಾಶವನ್ನು ನೀಡಿ ತಮ್ಮ ನಿಲುವನ್ನು ಅರ್ಜಿಯೊಂದಿಗೆ ಸಲ್ಲಿಸಲು ಜುಲೈ.12, 2021ರವರೆಗೆ ಅವಕಾಶ ನೀಡಲಾಗಿದೆ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19ರ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ …
Read More »ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಸಚಿವರಾಗಿ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕಾರ.
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ 2.0 ವಿಸ್ತರ್ಣೆಯಾಗಿದೆ. ಇಂತಹ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಶೋಭಾ ಕರಂದ್ಲಾಜೆ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವ ಸಂಪುಟವು ಪುನಾರಚನೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ 43 ಸಚಿವರು ಸೇರ್ಪಡೆಗೊಳ್ಳುತ್ತಿದ್ದಾರೆ. ಇಂತಹ ಮೋದಿ ನೇತೃತ್ವದ ಸಚಿವ ಸಂಪುಟಕ್ಕೆ ಕರ್ನಾಟಕದಿಂದ ಸಂಸದ ರಾಜೀವ್ …
Read More »ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್.ಡಿ.ಪಿ.ಆರ್. ಇಲಾಖೆಯ 25 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೆಳವಂಕಿ ಗ್ರಾಮ ಪಂಚಾಯತಿ ಸಮಗ್ರ …
Read More »ಗೋಕಾಕದಲ್ಲಿ ಕೋವಿಡ ಲಸಿಕೆ ಕೊರತೆ, ಕಾದು ನೋಡುತ್ತಿರುವ ಜನತೆ!
–C L ಖಡಕಭಾಂವಿ ಗೋಕಾಕ: ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಲಸಿಕೆ ಕೊರತೆ ಹೆಚ್ಚಾಗುತ್ತಿದೆ. ಲಸಿಕೆ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಕ್ಸಿನ್ ಕೇಂದ್ರದಲ್ಲಿ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ನಗರ ಹಾಗೂ ಅನೇಕ ಹಳ್ಳಿಗಳಲ್ಲಿ ಜನರು ಲಸಿಕೆಗಾಗಿ ಕಾಯುತ್ತಿದ್ದಾರೆ. ನಿನ್ನೆ ಲಸಿಕೆ ಪಡೆಯಲು ಬಂದಾಗ ನಾಳೆ ಬನ್ನಿ ಎಂದಿದ್ದರು. ಆದರೆ ಇಂದು ಔಟ್ ಆಫ್ ಸ್ಟಾಕ್ ಎಂದು ಹೇಳುತ್ತಿದ್ದಾರೆ.ಈಗ “ನಾವು ಏನು ಮಾಡಬೇಕು, ಇನ್ನೂ ಏವಾಗ …
Read More »ಡಿ ವಿ ಸದಾನಂದಗೌಡ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ!
ನವದೆಹಲಿ, ಜು.7- ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಪುನಾರ್ರಚನೆಯಾಗುವ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ್ ಗಂಗ್ವಾರ್, ಶಿಕ್ಷಣ ಸಚಿವ ರಮೇಶ್ ಪೊಕ್ರಿಯಾಲ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ದಿಬೇಶ್ರೀ ಚೌದರಿ ಸೇರಿದಂತೆ ಹಲವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿವಿ ಸದಾನಂದ ಗೌಡ ಅವರೂ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಥಾವರ್ …
Read More »