ಗೋಕಾಕ: ಮತಕ್ಷೇತ್ರದ ಗ್ರಾಮಗಳಲ್ಲಿ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ …
Read More »ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ.
ಕಲಬುರ್ಗಿ: ಭಾರಿ ಬೆಲೆಬಾಳುವ ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಆಳಂದ ತಾಲ್ಲೂಕಿನ ನಿಂಬರ್ಗಾ ಠಾಣೆ ಪೊಲೀಸರು ಅವರಿಂದ ₹ 3.91 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ ಅವರಿಂದ ₹ 1.27 ಲಕ್ಷ ಮೌಲ್ಯದ ಪ್ಲಾಸ್ಮಾ ಕಟಿಂಗ್ ಮಷಿನ್, ₹ 64 ಸಾವಿರ ಮೌಲ್ಯದ ಗಿಯರ್ ಬಾಕ್ಸ್, 25,984 ಮೌಲ್ಯದ ಎಲ್ಇಡಿ ಲೈಟ್ ಫಿಟ್ಟಿಂಗ್ ಮಟೀರಿಯಲ್ಸ್, …
Read More »ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ!
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ ಮುಂದುವರೆದಿದ್ದು, ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಕ್ಷಮೆ ಕೇಳುವಂತಹ ಪದ ಬಳಕೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೆ.ಆರ್.ಎಸ್. ಡ್ಯಾಂ ನಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳಿರುವ ಸುಮಲತಾ ಅವರು ಮಾಧ್ಯಮ ಹಾಗೂ ಅಧಿಕಾರಿಗಳ ತಂಡವನ್ನು ಕರೆದುಕೊಂಡು ಕೆ.ಆರ್.ಎಸ್. ಗೆ ಹೋಗಿ ಪರಿಶೀಲನೆ ನಡೆಸಬೇಕು. ಅದನ್ನು ಬಿಟ್ಟು ಅಲ್ಲೆಲ್ಲೋ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು …
Read More »ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ!
ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಟಿ. ನುಲೇನೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್ ಅವರು ಗುರುಶಾಂತಪ್ಪ ಅವರಿಂದ ಎರಡು ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಜಾಬ್ ಕಾರ್ಡ್ ನೀಡಲು ಗುರುಶಾಂತಪ್ಪ ಅವರ ಹಳೆಯ ಬ್ಯಾಲೆನ್ಸ್ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊದಲು ಇ-ಸ್ವತ್ತು ಮಾಡಿಸಲು 6 ಸಾವಿರ …
Read More »ಮೂಡಲಗಿಯಲ್ಲಿ ನೂತನ ಕ್ರೀಡಾ ಮಳಿಗೆ ಉದ್ಘಾಟಿಸಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ
ಮೂಡಲಗಿ: ಪಟ್ಟಣದ ಗೋಕಾಕ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಪುಣ್ಯಕೋಟಿ ಸ್ಪೋರ್ಟ್ಸ್ ಮಳಿಗೆ’ಯನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನೂತನ ಕ್ರೀಡಾ ಸಾಮಗ್ರಿಗಳ ಮಳಿಗೆಗೆ ಶುಭ ಹಾರೈಸಿದರು. ಮಳಿಗೆಯಲ್ಲಿನ ಸಾಮಗ್ರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಳಿಗೆಯ ಮಾಲೀಕರಾದ ಚಂದ್ರೇಶ ಶೆಟ್ಟಿ ಹಾಗೂ ಬಸವರಾಜ ಹೊಸಮನಿ ಅವರು ರಾಹುಲ್ ಅವರನ್ನು ಸನ್ಮಾನಿಸಿದರು. ಮಳಿಗೆಯ ಮಾಲೀಕರ ಸ್ನೇಹಿತರು, ಬಂಧುಗಳು ಸೇರಿ ಇನ್ನಿತರರು …
Read More »ಗೋಕಾಕನಲ್ಲಿ ಸೈಕಲ್ ತುಳಿದು ಪ್ರತಿಭಟಿಸಿದ ಕಾಂಗ್ರೆಸ್ ಯುವ ನಾಯಕರಾದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಪಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು. ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ ವೃತ್ತದ …
Read More »ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ ನಾವು …
Read More »ಜನಪ್ರತಿನಿಧಿಗಳು 5 ವರ್ಷಗಳಿಗೊಮ್ಮೆ ಚುನಾವಣೆ ಇದ್ದಾಗ ಮಾತ್ರ ಜನರ ಬಳಿ ಬರಬಾರದು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ
ಸವದತ್ತಿ: “ಸ್ಥಳೀಯ ಶಾಸಕರು ಹಾಗೂ ಸಚಿವರು ತಾಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಚುನಾವಣಾ ಮೀಸಲಾತಿಯಲ್ಲಿ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನೀತಿ, ನಿಯಮಗಳನ್ನು ಬಿಟ್ಟು ಸರ್ಕಾರ ಮೀಸಲಾತಿ ಪ್ರಕಟಿಸಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ತಾಲೂಕಿನ ತಲ್ಲೂರ ಗ್ರಾಮದಲ್ಲಿ ಇಂದು (ಮಂಗಳವಾರ) ನಡೆದ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಕೆಲವು ಕ್ಷೇತ್ರಗಳಲ್ಲಿ ಕಳೆದ ಬಾರಿ ಇದ್ದ ಮೀಸಲಾತಿಯನ್ನೇ ಮತ್ತೆ ಪ್ರಕಟಿಸಲಾಗಿದೆ. …
Read More »ಜಿಲ್ಲೆಯ ಯಾವುದೇ ಗ್ರಾಮಗಳ ಜನರ ಸಮಸ್ಯೆಯಿದ್ದರೂ ನಿಮ್ಮ ನೆರವಿಗೆ ನಾವಿದ್ದೇವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಸವದತ್ತಿ:”ಜಿಲ್ಲೆಯ ಯಾವುದೇ ಗ್ರಾಮಗಳ ಜನರ ಸಮಸ್ಯೆಯಿದ್ದರೂ ನಿಮ್ಮ ನೆರವಿಗೆ ನಾವಿದ್ದೇವೆ. ಚುನಾವಣೆಯಲ್ಲಿ ಸೋತರೂ ಕೂಡ ನಿಮ್ಮ ಸಹಕಾರಕ್ಕೆ ನಾವು ಸದಾ ಸಿದ್ಧ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಮಾಡಮಗೇರಿ, ಯರಝರ್ವಿ, ಕಡಬಿ, ತಲ್ಲೂರ ಮತ್ತು ಯರಗಟ್ಟಿ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಇಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. “ಚುನಾವಣೆಯ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ …
Read More »ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ನೇಮಕ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಢೀರ್ ರಾಜ್ಯಪಾಲರ ಬದಲಾವಣೆ ಮಾಡಲಾಗಿದ್ದು, ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಅಧಿಕಾರಾವಧಿ ಮುಗಿದಿರುವ ಹಿನ್ನೆಲೆಯಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು …
Read More »