ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …
Read More »ನಿಧನರಾದ ಮಾಜಿ ಜಿಪಂ.ಉಪಾಧ್ಯಕ್ಷೆ ತೇಜಸ್ವಿನಿ ನಾಯಕವಾಡಿ ಮನೆಗೆ ರಾಹುಲ್ , ಪ್ರಿಯಾಂಕಾ ಜಾರಕಿಹೊಳಿ ಭೇಟಿ
ಮೂಡಲಗಿ : ತಾಲ್ಲೂಕಿನ ಕಂಕನವಾಡಿ ಗ್ರಾಮದಲ್ಲಿ ಇತ್ತಿಚೇಗೆ ನಿಧನರಾದ ಮಾಜಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ತೇಜಶ್ವಿನಿ ನಾಯಕವಾಡಿ ಅವರ ಮನೆಗೆ ಕಾಂಗ್ರೆಸ್ ಯುವ ಮುಖಂಡ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಪುಣ್ಯ ಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಹುಲ್ ಜಾರಕಿಹೊಳಿ ಮಾತನಾಡಿ, ಇತ್ತಿಚೇಗೆ ನಿಧನರಾದ ಮಾಜಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ತೇಜಸ್ವಿನಿ ನಾಯಕವಾಡಿ ಅವರ ಕಾಲಾವಧಿಯಲ್ಲಿ ಅನೇಕ ಕೆಲಸಗಳನ್ನು ಮಾಡಿದ್ದಾರೆ ಎಂದು ಅವರ ಕಾರ್ಯವನ್ನು …
Read More »ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಸತೀಶ್ ಜಾರಕಿಹೊಳಿ
ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು. ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು ಮಂಡಳದ ಮುಖಂಡರಿಗೆ ಹಸ್ತಾಂತರಿಸಿದರು. …
Read More »ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ಹಾಗೂ …
Read More »ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ: ಅಮರನಾಥ ಜಾರಕಿಹೊಳಿ
ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …
Read More »ಕೊರೊನಾ ವಾರಿಯರ್ಸ್ ಗಳ ಕಾರ್ಯ ನಿಜಕ್ಕೂ ಶ್ಲಾಘನೀಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಚಿಕ್ಕೋಡಿ: “ಕೊರೊನಾ ನಿಯಂತ್ರಣಕ್ಕಾಗಿ ತಮ್ಮ ಜೀವದ ಹಂಗು ತೊರೆದು ಜನರ ಜೀವ ಉಳಿಸುವ ಕಾರ್ಯವನ್ನು ಮಾಡಿರುವ ಪಂಚಾಯತ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರ ಕಾರ್ಯ ನಿಜಕ್ಕೂ ಶ್ಲಾಘನೀಯ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಕರೋಶಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಶನಿವಾರ ನಡೆದ ಕರೋಶಿ, ನಾಗರಮುನ್ನೋಳಿ, ಕಬ್ಬೂರ ಗ್ರಾಮಗಳ ಕೊರೊನಾ ವಾರಿಯರ್ಸಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. “ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳು ಮಾಡಿರುವ …
Read More »ಯಮಕನಮರಡಿ ಹೊರವಲಯದ ಹಿಡಕಲ್ ಡ್ಯಾಂ ರಸ್ತೆಯಲ್ಲಿ ನೂತನ ಸಂಚಾರಿ ಹಣ್ಣಿನ ಮಾರುಕಟ್ಟೆಗೆ ಸತೀಶ್ ಜಾರಕಿಹೊಳಿ ಚಾಲನೆ
ಯಮಕನಮರಡಿ: ಜಿಲ್ಲಾ ಪಂಚಾಯತ ಹಾಗೂ ಹುಕ್ಕೇರಿ ತೋಟಗಾರಿಕಾ ಇಲಾಖೆಯಿಂದ ಎನ್ಎಂಎಚ್ ಯೋಜನೆಯಡಿ ಯಮಕನಮರಡಿ ಹೊರವಲಯದ ಹಿಡಕಲ್ ಡ್ಯಾಂ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಂಚಾರಿ ಹಣ್ಣಿನ ಮಾರುಕಟ್ಟೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊದಲಿನಿಂದಲೂ ಇಲ್ಲಿ ವ್ಯಾಪಾರಿಗಳು ರಸ್ತೆ ಬದಿಯಲ್ಲಿಯೇ ಕುಳಿತು ವ್ಯಾಪಾರ ಮಾಡುತ್ತಿದ್ದರು. ಹೀಗಾಗಿ, ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಚಾರಿ ಮಾರುಕಟ್ಟೆಯನ್ನು ನಿರ್ಮಿಸಿಕೊಡಲಾಗಿದೆ” …
Read More »ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ …
Read More »ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರ ಬಹುದಿನಗಳ ಕನಸು ಇನ್ನು ಮೂರು ತಿಂಗಳೊಳಗೆ ನನಸಾಗಲಿದೆ ಎಂದು ಅವರು ಹೇಳಿದರು. ಸಣ್ಣ ನೀರಾವರಿ ಇಲಾಖೆಯಿಂದ ಕಲ್ಮಡ್ಡಿ …
Read More »ಕೋವಿಡ್ ನಿರ್ವಹಣೆಗಾಗಿ ಶಾಸಕರ ನಿಧಿ ಸಂಪೂರ್ಣ ವ್ಯಯಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧಾರ
ಗೋಕಾಕದಲ್ಲಿಂದು ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೋವಿಡ್-೧೯ ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಕಾರ್ಯ ಪ್ರಶಂಸನೀಯ. ಇಡೀ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿಗಳು ಮತ್ತು ಕೊರೋನಾ ವಾರಿರ್ಸ್ಗಳಿಗೆ ಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ …
Read More »