Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಜನಪ್ರತಿನಿಧಿಗಳು 5 ವರ್ಷಗಳಿಗೊಮ್ಮೆ ಚುನಾವಣೆ ಇದ್ದಾಗ ಮಾತ್ರ ಜನರ ಬಳಿ ಬರಬಾರದು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ

ಸವದತ್ತಿ: “ಸ್ಥಳೀಯ ಶಾಸಕರು ಹಾಗೂ ಸಚಿವರು ತಾಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಚುನಾವಣಾ ಮೀಸಲಾತಿಯಲ್ಲಿ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನೀತಿ, ನಿಯಮಗಳನ್ನು ಬಿಟ್ಟು ಸರ್ಕಾರ ಮೀಸಲಾತಿ ಪ್ರಕಟಿಸಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ತಾಲೂಕಿನ ತಲ್ಲೂರ ಗ್ರಾಮದಲ್ಲಿ ಇಂದು (ಮಂಗಳವಾರ) ನಡೆದ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಕೆಲವು ಕ್ಷೇತ್ರಗಳಲ್ಲಿ ಕಳೆದ ಬಾರಿ ಇದ್ದ ಮೀಸಲಾತಿಯನ್ನೇ ಮತ್ತೆ ಪ್ರಕಟಿಸಲಾಗಿದೆ. …

Read More »

ಜಿಲ್ಲೆಯ ಯಾವುದೇ ಗ್ರಾಮಗಳ ಜನರ ಸಮಸ್ಯೆಯಿದ್ದರೂ ನಿಮ್ಮ ನೆರವಿಗೆ ನಾವಿದ್ದೇವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಸವದತ್ತಿ:”ಜಿಲ್ಲೆಯ ಯಾವುದೇ ಗ್ರಾಮಗಳ ಜನರ ಸಮಸ್ಯೆಯಿದ್ದರೂ ನಿಮ್ಮ ನೆರವಿಗೆ ನಾವಿದ್ದೇವೆ. ಚುನಾವಣೆಯಲ್ಲಿ ಸೋತರೂ ಕೂಡ ನಿಮ್ಮ ಸಹಕಾರಕ್ಕೆ ನಾವು ಸದಾ ಸಿದ್ಧ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಮಾಡಮಗೇರಿ, ಯರಝರ್ವಿ, ಕಡಬಿ, ತಲ್ಲೂರ ಮತ್ತು ಯರಗಟ್ಟಿ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಇಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. “ಚುನಾವಣೆಯ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ …

Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ನೇಮಕ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಢೀರ್ ರಾಜ್ಯಪಾಲರ ಬದಲಾವಣೆ ಮಾಡಲಾಗಿದ್ದು, ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಅಧಿಕಾರಾವಧಿ ಮುಗಿದಿರುವ ಹಿನ್ನೆಲೆಯಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು …

Read More »

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ನಿಧನರಾದ ಮಾಜಿ ಜಿಪಂ.ಉಪಾಧ್ಯಕ್ಷೆ ತೇಜಸ್ವಿನಿ ನಾಯಕವಾಡಿ ಮನೆಗೆ ರಾಹುಲ್ , ಪ್ರಿಯಾಂಕಾ ಜಾರಕಿಹೊಳಿ ಭೇಟಿ

ಮೂಡಲಗಿ : ತಾಲ್ಲೂಕಿನ ಕಂಕನವಾಡಿ ಗ್ರಾಮದಲ್ಲಿ ಇತ್ತಿಚೇಗೆ ನಿಧನರಾದ ಮಾಜಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ತೇಜಶ್ವಿನಿ ನಾಯಕವಾಡಿ ಅವರ ಮನೆಗೆ ಕಾಂಗ್ರೆಸ್ ಯುವ ಮುಖಂಡ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಪುಣ್ಯ ಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಹುಲ್ ಜಾರಕಿಹೊಳಿ ಮಾತನಾಡಿ, ಇತ್ತಿಚೇಗೆ ನಿಧನರಾದ ಮಾಜಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ತೇಜಸ್ವಿನಿ ನಾಯಕವಾಡಿ ಅವರ ಕಾಲಾವಧಿಯಲ್ಲಿ  ಅನೇಕ ಕೆಲಸಗಳನ್ನು  ಮಾಡಿದ್ದಾರೆ ಎಂದು ಅವರ ಕಾರ್ಯವನ್ನು …

Read More »

ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಸತೀಶ್ ಜಾರಕಿಹೊಳಿ

ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು. ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು ಮಂಡಳದ ಮುಖಂಡರಿಗೆ ಹಸ್ತಾಂತರಿಸಿದರು. …

Read More »

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ಹಾಗೂ …

Read More »

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ‌: ಅಮರನಾಥ ಜಾರಕಿಹೊಳಿ

ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …

Read More »

ಕೊರೊನಾ ವಾರಿಯರ್ಸ್ ಗಳ ಕಾರ್ಯ ನಿಜಕ್ಕೂ ಶ್ಲಾಘನೀಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಚಿಕ್ಕೋಡಿ: “ಕೊರೊನಾ ನಿಯಂತ್ರಣಕ್ಕಾಗಿ ತಮ್ಮ ಜೀವದ ಹಂಗು ತೊರೆದು ಜನರ ಜೀವ ಉಳಿಸುವ ಕಾರ್ಯವನ್ನು ಮಾಡಿರುವ ಪಂಚಾಯತ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರ ಕಾರ್ಯ ನಿಜಕ್ಕೂ ಶ್ಲಾಘನೀಯ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಕರೋಶಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಶನಿವಾರ ನಡೆದ ಕರೋಶಿ, ನಾಗರಮುನ್ನೋಳಿ, ಕಬ್ಬೂರ ಗ್ರಾಮಗಳ ಕೊರೊನಾ ವಾರಿಯರ್ಸಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. “ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳು ಮಾಡಿರುವ …

Read More »

ಯಮಕನಮರಡಿ ಹೊರವಲಯದ ಹಿಡಕಲ್ ಡ್ಯಾಂ ರಸ್ತೆಯಲ್ಲಿ ನೂತನ ಸಂಚಾರಿ ಹಣ್ಣಿನ ಮಾರುಕಟ್ಟೆಗೆ ಸತೀಶ್ ಜಾರಕಿಹೊಳಿ ಚಾಲನೆ

ಯಮಕನಮರಡಿ: ಜಿಲ್ಲಾ ಪಂಚಾಯತ ಹಾಗೂ ಹುಕ್ಕೇರಿ ತೋಟಗಾರಿಕಾ ಇಲಾಖೆಯಿಂದ ಎನ್ಎಂಎಚ್ ಯೋಜನೆಯಡಿ ಯಮಕನಮರಡಿ ಹೊರವಲಯದ ಹಿಡಕಲ್ ಡ್ಯಾಂ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಂಚಾರಿ ಹಣ್ಣಿನ ಮಾರುಕಟ್ಟೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊದಲಿನಿಂದಲೂ ಇಲ್ಲಿ ವ್ಯಾಪಾರಿಗಳು ರಸ್ತೆ ಬದಿಯಲ್ಲಿಯೇ ಕುಳಿತು ವ್ಯಾಪಾರ ಮಾಡುತ್ತಿದ್ದರು. ಹೀಗಾಗಿ, ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಚಾರಿ ಮಾರುಕಟ್ಟೆಯನ್ನು ನಿರ್ಮಿಸಿಕೊಡಲಾಗಿದೆ” …

Read More »