Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿಯೇ ಇಲ್ಲ ಉಲ್ಟಾ ಹೊಡೆದ ಸಂಸದೆ ಸುಮಲತಾ!

ಮಂಡ್ಯ: ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿ, ಇದೀಗ ಆ ರೀತಿ ಹೇಳಿಯೇ ಇಲ್ಲ ಎಂದು ಸಂಸದೆ ಸುಮಲತಾ ಉಲ್ಟಾ ಹೊಡೆದಿದ್ದಾರೆ. ಮೈಸೂರು: ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ನಾನು ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿಲ್ಲ. ಬಿರುಕು ಬಿಟ್ಟಿದಿಯಾ ಅಂತ ದಿಶಾ ಸಭೆಯಲ್ಲಿ ಕೇಳಿದ್ದೇನೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ನನಗೆ ಈಗಲೂ ಶೇ.500 ಇದೆ. ಇದನ್ನೇ ನಾನು ಸಭೆಯಲ್ಲಿ ಹೇಳಿದ್ದೇನೆ. ಆದರೆ ಅದನ್ನೇ …

Read More »

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್?

ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಟ್ಟು, ಇದೀಗ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬೆನ್ನಲ್ಲೇ ಇದೀಗ ರಾಜ್ಯದ ಮತ್ತೋರ್ವ ಖಡಕ್ ಐಪಿಎಸ್ ಅಧಿಕಾರಿ ಕೂಡ ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್, ಅಣ್ಣಾಮಲೈ ರೀತಿಯಲ್ಲೇ ಪಾಲಿಟಿಕ್ಸ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ವಿವಿಧ ಮಠಗಳಿಗೆ ಭೇಟಿ ನೀಡುತ್ತಿರುವ ರವಿ ಡಿ ಚೆನ್ನಣ್ಣನವರ್, ಹಲವು ಸ್ವಾಮೀಜಿಗಳನ್ನು …

Read More »

ನಿವೃತ್ತ ಪೋಲೀಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಜನರಿಗೆ ವಂಚನೆ

ಬೆಂಗಳೂರು: ಅಪರಿಚಿತ ದುಷ್ಕರ್ಮಿಯೊಬ್ಬ ನಿವೃತ್ತ ಪೊಲೀಸ್ ಅಧಿಕಾರಿ ಬಿಬಿ ಅಶೋಕ್ ಕುಮಾರ್ ಅವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ವಂಚಿಸಲು ಯತ್ನಿಸಿದ್ದಾನೆ. ಆರೋಪಿಯು ಅಧಿಕಾರಿಯ ಸಂಪರ್ಕಗಳಿಂದ ಹಣಕಾಸಿನ ಸಹಾಯವನ್ನು ಕೋರಿದ್ದಾನೆ. ಪ್ರಕರಣ ದಾಖಲಿಸಲು ಅಶೋಕ್ ಕುಮಾರ್ ಸಿಇಎನ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೂ, ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅಶೋಕ್ ಕುಮಾರ್ ಅವರು ದೂರವಾಣಿ ಮೂಲಕ ನಮ್ಮನ್ನು ಸಂಪರ್ಕಿಸಿ ಘಟನೆ ಬಗ್ಗೆ ದೂರು ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. …

Read More »

ಜಿಯೋ ಕಛೇರಿ ಮುಂದೆ ಶವ ಇಟ್ಟು ಪ್ರತಿಭಟನೆ.

ಹಾಸನ: ಅಪಘಾತದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನಗರದ ಎಂ.ಜಿ. ರಸ್ತೆಯಲ್ಲಿರುವ ಜಿಯೋ ಡಿಜಿಟಲ್‌ ಲೈಫ್‌ ಕಚೇರಿ ಎದುರು ಮಂಗಳವಾರ ಶವವಿಟ್ಟು ಮೃತನ ಸಂಬಂಧಿಕರು ಧರಣಿ ನಡೆಸಿದರು. ತಾಲ್ಲೂಕಿನ ಸಾಲಗಾಮೆ ಹೋಬಳಿಯ ಸುಂಡಳ್ಳಿ ಗ್ರಾಮದ ಸ್ವಾಮಿ (33) ಮೃತ ವ್ಯಕ್ತಿ. ಹನ್ನೊಂದು ವರ್ಷಗಳಿಂದ ಅರಸೀಕೆರೆ ತಾಲ್ಲೂಕಿನ ಬಾಣವಾರ ಹಾಗೂ ಜಾವಗಲ್ ಹೋಬಳಿಯ ಟವರ್ ಟೆಕ್ನಿಷಿಯನ್ ಆಗಿ ಸ್ವಾಮಿ ಕೆಲಸ ಮಾಡುತ್ತಿದ್ದರು. ಜಾವಗಲ್‌ನಲ್ಲಿ ಸೋಮವಾರ ರಾತ್ರಿ ಕೆಲಸ …

Read More »

ಜಲಜೀವನ ಮಿಷನ್ ಕಾಮಗಾರಿಗೆ 36.50 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ವಡೇರಹಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅನುದಾನದಡಿ ಅರಭಾವಿ ಮತಕ್ಷೇತ್ರಕ್ಕೆ ಜೆಜೆಎಂ ಯೋಜನೆಯಡಿ 36.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದoದು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ 1.60 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿವೆ …

Read More »

ಮಾಜಿ ಬ್ಯಾಟ್ಸ್ ಮನ್ ಯಶಪಾಲ್ ಶರ್ಮಾ ನಿಧನ.

ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಮಾಜಿ ಬ್ಯಾಟ್ಸ್ ಮನ್ ಯಶಪಾಲ್ ಶರ್ಮಾ (66) ಅವರು ಹೃದಯಾಘಾತದಿಂದ ಇಂದು ಬೆಳಗ್ಗೆ 7.30 ರ ಸುಮಾರಿಗೆ ನಿಧನರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ನೇತೃತ್ವದ ವಿಶ್ವಕಪ್ ವಿಜೇತ ತಂಡದ ಸದಸ್ಯರೂ ಆಗಿದ್ದ ಯಶ್ ಪಾಲ್ ಶರ್ಮಾ ಅವರು 37 ಏಕದಿನ ಮತ್ತು 49 ಟೆಸ್ಟ್ ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ ಮತ್ತು 1979-83 ರವರೆಗೆ ಭಾರತ ಕ್ರಿಕೆಟ್ ತಂಡದ …

Read More »

ರಾಜ್ಯದಲ್ಲಿ ಮುಂಗಾರು ಬಿರುಸಿನ ಆರ್ಭಟ, ಇನ್ನೂ 2 ದಿನ ಮಳೆ ಸಾಧ್ಯತೆ.

ಬೆಂಗಳೂರು,ಜು.13- ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಕೊಡಗು, ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಒಟ್ಟು 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಒಂದು ವಾರದ ಬಿಡುವಿನ ನಂತರ ರಾಜ್ಯದಲ್ಲಿ ನೈಋತ್ಯ ಮುಂಗಾರು ಆರಂಭಗೊಂಡಿದೆ. ಅನೇಕ ಕಡೆ ಸಾಧಾರಣ ಮಳೆಯಾಗುತ್ತಿದ್ದು, ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಪ್ರಾರಂಭವಾಯಿತು. …

Read More »

ವೀರ ಯೋಧನ ಅಂತಿಮ ದರ್ಶನ ಪಡೆದ ಗಣ್ಯರು!

ಗೋಕಾಕ: ನಾಗಾಲ್ಯಾಂಡನ ಗಡಿ ಪ್ರದೇಶದಲ್ಲಿ ಅಪಘಾತದಲ್ಲಿ ಮೃತರಾದ ವೀರ ಯೋಧನ ಮಂಜುನಾಥ ಗೌಡಣ್ಣವರ ಅಂತ್ಯಕ್ರಿಯೆ ಶಿವಾಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜರುಗಿತು. ಮಂಗಳವಾರದಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಪಾರ್ಥಿವ ಶರೀರವನ್ನು ತರಲಾಯಿತು. ಯೋಧನ ಪಾರ್ಥಿವ ಶರೀರವನ್ನು ಕೆಲವು ಸಮಯ ಶಿವಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ನಂತರ ಗ್ರಾಮದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಯಿತು. ಸಂಸದೆ ಮಂಗಲಾ ಅಂಗಡಿ, …

Read More »

ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ.

ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರಾö್ಯಕ್ಟರ್ ಮಾಲೀಕರು ಹಾಗೂ ಮಕ್ತೆದಾರರ …

Read More »

ಅಸಂಘಟಿತ ವಲಯದ ಕಾರ್ಮಿಕರು ಪ್ಯಾಕೇಜ್ ಪಡೆಯಲು ಮಾಹಿತಿ

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು. ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ …

Read More »