Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ರಾಕ್ ಲೈನ್ ವೆಂಕಟೇಶ್ ನಿವಾಸದ ಮೇಲೆ ಬಿಯರ್ ಬಾಟಲ್ ಎಸೆದು ಕಿಡಿಗೇಡಿಗಳು ದಾಳಿ

ಬೆಂಗಳೂರು : ಸಂಸದೆ ಸುಮಲತಾ ವರ್ಸಲ್ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ವಾದ ಕೊಂಚ ತಣ್ಣಗಾದಂತ ಸಂದರ್ಭದಲ್ಲಿಯೇ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಕಳೆದ ರಾತ್ರಿ ಬಿಯರ್ ಬಾಟಲ್ ಎಸೆದು ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅಂಬರೀಶ್ ಬಗ್ಗೆ ಮಾತನಾಡಿದ್ದರ ಕುರಿತಂತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಸಂಸದೆ ಸುಮಲತಾಗೆ ಬೆಂಬಲಿಸಿ ಮಾತನಾಡಿದ್ದರು. …

Read More »

ಒಂದೂವರೆ ಕಿ.ಮೀ. ಹೆಚ್ಚಾಗುತ್ತದೆಂದು ಹಿಂದೇಟು, “ಮೃತ್ಯುಕೂಪ” ರಸ್ತೆಯಲ್ಲಿ ಪ್ರಯಾಣ.

ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ …

Read More »

ಹಣ, ಎಟಿಎಂ ಕಾರ್ಡ್‌ ದೋಚಿದ್ದ ಇಬ್ಬರು ಕದೀಮರನ್ನ ಬಂಧಿಸಿದ ಬೆಳಗಾವಿ ಪೋಲಿಸ್

ಬೆಳಗಾವಿ: ಇಲ್ಲಿಯ ನ್ಯೂ ಗಾಂಧಿ ನಗರ ಬಳಿ ಬೈಪಾಸ್‌ ರಸ್ತೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ಹಿಡಿದು ಹಲ್ಲೆ ಮಾಡಿ ಜೇಬಿನಲ್ಲಿದ್ದ ನಗದು ಹಣ, ಎಟಿಎಂ ಕಾರ್ಡ್‌ ಹಾಗೂ ಕೈಗಡಿಯಾರ ದೋಚಿದ್ದ ಇಬ್ಬರು ಕದೀಮರನ್ನು ಕೇವಲ ಎರಡೇ ದಿನದಲ್ಲಿ ಪೊಲೀಸರು ಬಂಧಿ ಸಿದ್ದಾರೆ. ನ್ಯೂ ಗಾಂಧಿ  ನಗರದ ಆದಿಲ್‌ ಶಾ ಗಲ್ಲಿಯ ಫರ್ವೇಜ್‌ ಜಮೀರ ಪಾರಿಶವಾಡಿ ಹಾಗೂ ನ್ಯೂ ಗಾಂ ಧಿ ನಗರದ ಖುದಾದಾದ ಗಲ್ಲಿಯ ಜುಬೇರ್‌ ಅಬ್ದುಲ್‌ರಸೀದ ದಾಲಾಯತ್‌ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ನಗದು ಹಣ …

Read More »

ಕಾಲೇಜುಗಳ ಆರಂಭಕ್ಕೆ ಯಾವುದೇ ಚರ್ಚೆ ನಡೆಸಿಲ್ಲ : ಡಿಸಿಎಂ ಅಶ್ವಥ್ ನಾರಾಯಣ.

ಹುಬ್ಬಳ್ಳಿ : ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳು ಯಾವಾಗ ಓಪನ್ ಆಗುತ್ತವೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತಗ್ಗಿದ್ದು, ಇನ್ನೇನು ಕಾಲೇಜುಗಳು ತೆರೆದುಕೊಳ್ಳುತ್ತವೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ಸರ್ಕಾರ ಈವರೆಗೂ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ. ಬದಲಾಗಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಿದೆ. ಮೂಲಗಳ ಪ್ರಕಾರ ಶೇಕಡಾ 80 ರಷ್ಟು ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡರೇ ತರಗತಿಗಳನ್ನು ಆರಂಭಿಸಲು …

Read More »

ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಿಎಂ ಸ್ಥಾನ ಸಿಕ್ಕೇ ಸಿಗುತ್ತದೆ : ಉಮೇಶ್ ಕತ್ತಿ.

ಧಾರವಾಡ: ಬಿಜೆಪಿ ಪಾಳೆಯದಲ್ಲಿ ಸಿಎಂ ಬದಲಾವಣೆ ವಿಚಾರ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸಚಿವ ಉಮೇಶ ಕತ್ತಿ ಕೂಡ ಇದೀಗ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ನಾನೂ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೆ ಇದೆ. ಯಾವುದೇ ಕಪ್ಪು ಚುಕ್ಕೆ ನನಗಿಲ್ಲ. ಮುಖ್ಯಮಂತ್ರಿಯಾಗಲು ಆಸೆ ನನಗೂ ಇದ್ದೇ ಇದೆ ಎಂದಿದ್ದಾರೆ. ಸಿಎಂ ಬಳಿಕ ಪ್ರಧಾನಮಂತ್ರಿ …

Read More »

ಅಂಗನವಾಡಿ ಕೇಂದ್ರಕ್ಕೆ ಕುರ್ಚಿ, ಟೇಬಲ್, ಆಟದ ಸಾಮಗ್ರಿಗಳನ್ನು ಸತೀಶ್ ಜಾರಕಿಹೊಳಿ ವಿತರಣೆ

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಹೊನಗಾ ಗ್ರಾಮದಲ್ಲಿ ರವಿವಾರ ಸಂಜೆ ವಿವಿಧ ಕಾಮಗಾರಿಗೆ ಚಾಲನೆ ನೀಡಿದರು. ನರೇಗಾ ಯೋಜನೆಯಡಿ 28.60 ಲಕ್ಷ ರೂ. ವೆಚ್ಚದಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 13.76 ಲಕ್ಷ ರೂ. ಯೋಜನೆಯಡಿ ಎನ್.ಆರ್. ಎಲ್.ಎಮ್. (ನ್ಯಾಷನಲ್ ರೂರಲ್ ಲೈವ್ಲಿ ಹುಡ್ ಮಿಷನ್) ಕೇಂದ್ರದ ಕಾಮಗಾರಿಗೆ ಚಾಲನೆ ನೀಡಿದರು. 14 ನೇ ಹಣಕಾಸು ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ …

Read More »

ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು : ನಗರದ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇದರಿಂದಾಗಿ ಕಾರ್ಖಾನೆಯ ಮೊದಲ ಮಹಡಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ಇರುವಂತ ಡೈಸಿ ಡೀಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದಾಗಿ, ಕಾರ್ಖಾನೆಯ ಇತರೆ ಭಾಗಕ್ಕೂ ವ್ಯಾಪಿಸಿದ ಪರಿಣಾಮ, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಆಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದೀಗ ಬೆಂಕಿ …

Read More »

ಮುರ್ಡೇಶ್ವರದಲ್ಲಿ ಇಬ್ಬರು ನೀರು ಪಾಲು,ಒಬ್ಬನ ಶವ ಪತ್ತೆ

ಭಟ್ಕಳ: ತಾಲ್ಲೂಕಿನ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದ ಶಿವಮೊಗ್ಗ ಜಿಲ್ಲೆಯ ನಾಲ್ವರು ಪ್ರವಾಸಿಗರಲ್ಲಿ, ಇಬ್ಬರು ಸಮುದ್ರದಲ್ಲಿ ಭಾನುವಾರ ನೀರು ಪಾಲಾಗಿದ್ದಾರೆ. ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರಿಗೆ ಹುಡುಕಾಟ ಮುಂದುವರಿದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದವರ ಪೈಕಿ ಇಬ್ಬರು ಅಲೆಗಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಬೇಕರಿ ಮಂಜುನಾಥ ಎಂಬುವವರ ಮೃತದೇಹ ದಡಕ್ಕೆ ತೇಲಿಕೊಂಡು ಬಂದಿದೆ. ಭಟ್ಕಳದಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಸೆಳೆತ ಜೋರಾಗಿದೆ. ಸಮುದ್ರ ಪ್ರಕ್ಷುಬ್ಧವಾಗಿರುವ ಕಾರಣ ದೇವಸ್ಥಾನದ ಬಲಭಾಗದಲ್ಲಿ …

Read More »

ಶಾಲೆ ಆರಂಭದ ಬಗ್ಗೆ ತಜ್ಞರು ಹೇಳಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊರೊನಾದಿಂದ ರಾಜ್ಯದಲ್ಲಿ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ ಗ್ರಾಮೀಣಾ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್ ಲೈನ್ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಳೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸಿದ್ದಾರೆ. ಶಾಲೆ …

Read More »

ಜೀವ ಜಲ ಪೋಲು , ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ!

ಹರಿಹರ: ಜಲಸಿರಿ ಯೋಜನೆಯ ಅಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ನಗರದ ಒಂದು ಭಾಗದಲ್ಲಿ ಲಕ್ಷಾಂತರ ಲೀಟರ್‍ ಜೀವಜಲ ಪೋಲಾಗುಗುತ್ತಿದ್ದರೆ, ಮತ್ತೊಂದು ಭಾಗದಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ನಗರದ ಮಹಾತ್ಮ ಗಾಂಧಿ ಕೊಳೆಗೇರಿ ಪ್ರದೇಶದ 5 ಲಕ್ಷ ಲೀಟರ್‍ ಸಾಮರ್ಥ್ಯದ ಓವರ್‍ ಹೆಡ್‍ ಟ್ಯಾಂಕ್‍ಗೆ ಹೆಚ್ಚುವರಿ ನೀರು ಹರಿಸುವುದರಿಂದ ಟ್ಯಾಂಕ್‍ ತುಂಬಿ ನಿತ್ಯ ಲಕ್ಷಾಂತರ ಲೀಟರ್ ‍ನೀರು ಅಪವ್ಯಯವಾಗುತ್ತಿದೆ. ಭಾರತ್‍ ಆಯಿಲ್‍ ಮಿಲ್‍ ಕಾಂಪೌಂಡ್‍, ಬಾತಿ ಶಿವನಾಗಪ್ಪ ಕಾಂಪೌಂಡ್‍ ಹಾಗೂ …

Read More »