Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಬಜೆಟ್‌ನಲ್ಲಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನವನ್ನು ಮೀಸಲಿಡಿ ಗೃಹ ಸಚಿವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಆಗ್ರಹ.

*ಬೆಳಗಾವಿ :* ಅಗ್ನಿಶಾಮಕ ಠಾಣೆಗಳ ಪ್ರಾರಂಭಕ್ಕೆ ಈಗಾಗಲೇ ಬಹಳಷ್ಟು ಬೇಡಿಕೆಗಳು ಬಂದಿದ್ದು, ಇದಕ್ಕಾಗಿ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ|| ಜಿ. ಪರಮೇಶ್ವರ್ ಹೇಳಿದರು. ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನದಂಡಗಳ ಆಧಾರ …

Read More »

ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ, ಡಿ.09(ಕರ್ನಾಟಕ ವಾರ್ತೆ): ಮುಚ್ಚಂಡಿ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ ಪಶು ಚಿಕಿತ್ಸಾಲಯದ ಅಗತ್ಯವಿದ್ದು, ಜನರ ಬೇಡಿಕೆಯಂತೆ ಜಾನುವಾರುಗಳ ಚಿಕಿತ್ಸೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಪಶು ಚಿಕಿತ್ಸಾಲಯ ಪ್ರಾರಂಭಿಸಲಾಗಿದೆ. ಇದರ ಜೊತೆಗೆ ಸಾರ್ವಜನಿಕರು ಪಶು ಸಂಗೋಪನಾ ಇಲಾಖೆಯ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ …

Read More »

*ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ*

ಗೋಕಾಕ: ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.        ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ‌ಸಮಾಜಸೇವೆಯಲ್ಲಿಯೂ ಹೆಸರುವಾಸಿಯಾಗಿದ್ದರು.     …

Read More »

*ಅವಿಷ್ಕೃತ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮೂಡಲಗಿ ವಲಯಕ್ಕೆ ರಾಷ್ಟ್ರೀಯ ಪುರಸ್ಕಾರ*

*ಮೂಡಲಗಿ*: 2020-21 ಮತ್ತು 2021-22ರ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿಷ್ಕøತ ಶೈಕ್ಷಣಿಕ ಚಟುವಟಿಕೆಗಳು ಮತ್ತು ಉತ್ತಮ ಶೈಕ್ಷಣಿಕ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಿರುವ ಸಾಧನೆಗಳಿಗಾಗಿ ವಲಯ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಹಂತದ ಶಿಕ್ಷಣಾಧಿಕಾರಿಗಳಿಗೆ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಮೂಡಲಗಿ ವಲಯ ಪಾತ್ರವಾಗಿದೆ.      ಮಂಗಳವಾರದಂದು ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ ಅಂತರಾಷ್ಟ್ರೀಯ ಭೀಮ ಭವನದಲ್ಲಿ ಈ ರಾಷ್ಟ್ರೀಯ ಪುರಸ್ಕಾರವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ …

Read More »

*ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ*- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ.      ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು.  ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ ಅಂಬೇಡ್ಕರ್ ಅವರು ಕಾಳಜಿಯನ್ನು ಹೊಂದಿದ್ದರು. ನಮ್ಮ ದೇಶಕ್ಕೆ ಅಪಾರ ಕೊಡುಗೆಗಳನ್ನು …

Read More »

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ಸಂತೋಷ ತಡಸಲ.

ಗೋಕಾಕ : ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸಂತೋಷ ತಡಸಲ ಹೇಳಿದರು. ಅವರು, ರವಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಾಂಸ್ಕøತಿ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುವದರೊಂದಿಗೆ ಸಾಧಕರಾಗಲು ಸಾಧ್ಯ. ಪ್ರತಿ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದ್ದು, ಅದನ್ನು ಇಂತಹ …

Read More »

ಪ್ರಚಂಡ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳು ಹಾಗೂ ಕಾರ್ಯಕರ್ತರಿಗೆ ಅಭಿನಂಧನೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.  ಇನ್ನೇನೂ ಲೋಕಸಭೆಯ ಚುನಾವಣೆಯ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ ಮತದಾರರು ಬಿಜೆಪಿಗೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ಅದಕ್ಕಾಗಿ ಮೂರೂ ರಾಜ್ಯಗಳ ಮತದಾರರು, ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.   …

Read More »

ಸಾರಾಯಿ ಬಾಟಲಿಗಳಿಂದ ಕೂಡಿದ ಕಡಬಗಟ್ಟಿ ರಸ್ತೆ ?ಕಿಡಿಗೇಡಿಗಳ ಕೆಲಸಕ್ಕೆ ಬೆಸತ್ತ ವಾಯುವಿಹಾರಕ್ಕೆ ಬರುವ ಜನರು..! ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು.

ಗೋಕಾಕ: ನಗರದ ಕಡಬಗಟ್ಟಿ ರಸ್ತೆಯಲ್ಲಿ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದ್ದು ರಸ್ತೆಯಲ್ಲಿ ಭಾಗಶಃ ರಾಶಿ ಸಾರಾಯಿ ಬಾಟಲಿ ಮತ್ತು ಕಸದಿಂದ ತುಂಬಿ ತುಳುಕುತ್ತಿದೆ. ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕಾದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಅರಣ್ಯ ಪ್ರದೇಶ ಮದ್ಯದ ಬಾಟಲಿಗಳಿಂದ ತುಂಬಿ ತುಳಕುತ್ತಿದೆ. ಇದರಿಂದ ವಾಯುವಿಹಾರಕ್ಕೆ ಹೋಗುವ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ರಸ್ತೆಯಲ್ಲಿ ಗಾಜಿನ ತುಂಡು ಹೆಚ್ಚಾಗಿವೆ . ಇದನ್ನು ನೋಡಿ ಅರಣ್ಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರಾ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

*ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ದಾಸ ಶ್ರೇಷ್ಠರಾದ ಕನಕದಾಸರ ಜಯಂತಿ ಆಚರಣೆ..!*

ಗೋಕಾಕ : ನಗರದ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ ಮಾಡಿದರು. ಈ ಸಮಯದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಸನತ್ ಜಾರಕಿಹೊಳಿ ಅವರು ಮಾತನಾಡಿ ಕರ್ನಾಟಕ ಕೀರ್ತನಾ ಸಾಹಿತ್ಯದ ಮೂಲಕ ಮನುಜ ಕುಲವನ್ನು ಸನ್ಮಾರ್ಗದತ್ತ ಕೊಂಡೊಯ್ದು, ಸಮ ಸಮಾಜ ನಿರ್ಮಾಣಕ್ಕಾಗಿ ಅರಿವು ಮೂಡಿಸಿದವರು. ಕೀರ್ತನಕಾರರಾಗಿ, ಸಂತರಾಗಿ, ದಾರ್ಶನಿಕರಾಗಿ, ತತ್ವಜ್ಞಾನಿಯಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅವರು ನೀಡಿರುವ ಕೊಡುಗೆಗಳು ಅನನ್ಯ ಎಂದು …

Read More »

ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ.

ಗೋಕಾಕ : ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ ಮಾಡಿದರು. ಈ ಸಮಯದಲ್ಲಿ ಮುಖಂಡರಾದ ವಿವೇಕ ಜತ್ತಿ ಅವರು ಮಾತನಾಡಿ ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆಯ ಸಮಾಜದ ಆಶಯ ಎಲ್ಲ ಜಾತಿ-ಧರ್ಮಗಳಿಗೂ ಆದರ್ಶಪ್ರಾಯವಾಗಿರುವಂತಹದ್ದು. ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಬಯಸಿದ್ದ ಸಮಾಜವನ್ನು ನಿರ್ಮಾಣ ಮಾಡುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕಾಗಿದೆ ಅಂತ ತಿಳಿಸಿದರು. ಈ …

Read More »